• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರಜ್ವಲ್‌ ರೇವಣ್ಣ ಯಾವುದೇ ದೇಶದಲ್ಲಿದ್ರೂ ಬಿಡಲ್ಲ : ಸಿಎಂ ಸಿದ್ದರಾಮಯ್ಯ

Coastal Times by Coastal Times
May 3, 2024
in ರಾಜ್ಯ
ಪ್ರಜ್ವಲ್‌ ರೇವಣ್ಣ ಯಾವುದೇ ದೇಶದಲ್ಲಿದ್ರೂ ಬಿಡಲ್ಲ : ಸಿಎಂ ಸಿದ್ದರಾಮಯ್ಯ
51
VIEWS
WhatsappTelegramShare on FacebookShare on Twitter

ಮುಂಡಗೋಡು, ಮೇ 03; ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ. ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದರು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಜರ್ಮನಿಯಿಂದ ದುಬೈಗೆ ಎಸ್ಕೇಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್‌ ಎಲ್ಲಿಯಾದರೂ ಎಸ್ಕೇಪ್ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ. ಯಾವ ದೇಶದಲ್ಲಿ ಇದ್ದರೂ ಬಿಡುವುದಿಲ್ಲ. ಅಲ್ಲಿಂದಲೇ ಕರೆದುಕೊಂಡು ಬರುತ್ತೇವೆ ಎಂದು ಹೇಳಿದರು.

ಸಂತ್ರಸ್ತರ ರಕ್ಷಣೆ ಮಾಡಲು ಸೂಚಿಸಿದ್ದೇನೆ : ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆ ಕಿಡ್ನ್ಯಾಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆ ಹೆಣ್ಣುಮಕ್ಕಳ ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅವರನ್ನು ರಕ್ಷಣೆ ಮಾಡುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಈ ಕಾರಣಕ್ಕಾಗಿಯೇ ನಾನು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್‌ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ಕ್ಯಾನ್ಸಲ್‌ ಮಾಡಲಿ ಮಾಡಲಿ. ಪ್ರಜ್ವಲ್‌ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಯಾಕೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದಾರೆ. ರಾಜಕೀಯ ಹಾಗು ಕೃತ್ಯಗಳನ್ನು ಒಟ್ಟಿಗೆ ಮಾಡುತ್ತಾರೆ ಎಂದರು.

ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಲವ್ ಜಿಹಾದ್ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ ಅಮಿತ್ ಶಾ ಅವರು ರಾಜಕೀಯ ಹೇಳಿಕೆ ನೀಡಿದ್ದಾರೆ. ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ ಎಂದರು. ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ ಎಂದರು. ಇನ್ನೂ ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವ, ಮೀಸಲಾತಿ, ಐಕ್ಯತೆ, ಸಮಾನತೆಯಲ್ಲಿ ನಂಬಿಕೆ ಇಲ್ಲ . ಅಮಾಯಕರ ಕಣ್ಣೀರು, ಅವರಿಗೆ ಕಿರುಕುಳ ಕೊಟ್ಟು ಸಮಾಜ ಒಡೆಯುವುದು ಬಿಜೆಪಿಗೆ ರೂಢಿಯಾಗಿದೆ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಎಂಸಿಸಿ ಬ್ಯಾಂಕ್ ಗೆ 13.12 ಕೋಟಿ ರೂ. ಲಾಭ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ

Next Post

ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆ – ವಿಶ್ವ ಹೋಮಿಯೋಪತಿ ದಿನಾಚರಣೆ

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
25
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
53
Next Post
ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆ – ವಿಶ್ವ ಹೋಮಿಯೋಪತಿ ದಿನಾಚರಣೆ

ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆ - ವಿಶ್ವ ಹೋಮಿಯೋಪತಿ ದಿನಾಚರಣೆ

Discussion about this post

Recent News

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
20
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d