ಬಂಟ್ವಾಳ : ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಸಹಿತ 46 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ಮೊಬೈಲ್ ಫೋನ್, ಬೊಲೆರೋ ವಾಹನವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಮಂಚಿ ಗ್ರಾಮದ ಪಂಜಾಲ ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪುತ್ತೂರು ಕಲೆಂಬಿ ನಿವಾಸಿಗಳಾದ ಮೊಹಮ್ಮದ್ ನಿಜಾಮುದ್ದೀನ್ (30) ಹಾಗೂ ಮೊಹಮದ್ ಶಾಹೀಂ (19) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 42 ಲಕ್ಷದ 30 ಸಾವಿರ ರೂಪಾಯಿ ಮೌಲ್ಯದ 423 ಗ್ರಾಂ ಎಂಡಿಎಂ ಮತ್ತು ಮೂರು ಲಕ್ಷದ 50 ಸಾವಿರ ರೂಪಾಯಿ ಮೌಲ್ಯದ KA-20-Z-9585 ನೋಂದಣಿ ಸಂಖ್ಯೆಯ ಬೊಲೆರೋ ವಾಹನ, 35,000 ರೂ. ಮೌಲ್ಯದ ಐಫೋನ್, 5,000 ರೂ. ಮೌಲ್ಯದ ವಿವೋ ಮೊಬೈಲ್, 5000 ರೂ. ಮೌಲ್ಯದ ಸಾಮ್ ಸಾಂಗ್ ಮೊಬೈಲನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣದ ವಿವರ: ಬೊಲೆರೋ ವಾಹನದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನೊಂದಿಗೆ ಬಂಟ್ವಾಳ ಕಡೆಗೆ ಬರುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮಾರ್ನಬೈಲು ಮಂಚಿ ಗ್ರಾಮದ ಪಂಜಾಲ ಕ್ರಾಸ್ ಎಂಬಲ್ಲಿ ವಾಹನಗಳನ್ನು ತಡೆದು ತಪಾಸಣೆ ನಡೆಸಿದ ವೇಳೆ ಮಾದಕ ವಸ್ತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದರು.
ಈ ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ಮಂಜುನಾಥ ಟಿ., ಪೊಲೀಸ್ ಸಿಬ್ಬಂದಿಗಳಾದ ಕಮಲಾಕ್ಷ, ವೆಂಕಟರಮಣ ನಾಯಕ್, ಹಾಗೂ ಅಬ್ದುಲ್ ಕರೀಂ ಹಾಗೂ ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post