ಬಾಲಸೋರ್ ; ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಟತ್ರೆಗೆ ದಾಖಲಿಸಲಾಗುತ್ತಿದ್ದು, ಬಾಲಸೋರ್ ಜಿಲ್ಲಾ ಆಸ್ಪತ್ರೆ ಮತ್ತು ಸೊರೊ ಆಸ್ಪತ್ರೆಗಳು ಗಾಯಾಳುಗಳಿಂದ ತುಂಬಿ ಹೋಗಿವೆ. ಗಾಯಾಳುಗಳಿಗೆ ರಕ್ತ ನೀಡಲು ಸುಮಾರು ಎರಡು ಸಾವಿರಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಎದುರು ಜಮಾಯಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ಮೂರು ರೈಲುಗಳ (ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲು) ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸುಮಾರು 261 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
‘ರಕ್ತದಾನ ಮಾಡಲು ಸುಮಾರು 2 ಸಾವಿರ ಜನರು ಆಸ್ಪತ್ರೆಯ ಮುಂದೆ ಜಮಾಯಿಸಿದ್ದರು. ಇದನ್ನು ಕಂಡು ಆಶ್ಚರ್ಯವಾಯಿತು. ದಾನಿಗಳಿಂದ 500 ಯುನಿಟ್ ರಕ್ತ ಸಂಗ್ರಹಿಸಲಾಗಿದೆ. ಅವರೆಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ. ಇದೊಂದು ಜೀವನದಲ್ಲಿ ದೊರೆತ ದೊಡ್ಡ ಅನುಭವವಾಗಿದೆ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ‘ ಎಂದು ಹೆಚ್ಚುವರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಮೃತುಂಜಯ್ ಮಿಶ್ರಾ ಹೇಳಿದರು.
ಈವರೆಗೆ ಅಪಘಾತದಲ್ಲಿ ಗಾಯಗೊಂಡವರಲ್ಲಿ ಸುಮಾರು 526 ಗಾಯಾಳುಗಳನ್ನು ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಆಸ್ಪತ್ರೆ ಸಿಬ್ಬಂದಿ ಗಾಯಳುಗಳಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಒಡಿಶಾದವರಿಗಿಂತ ಬೇರೆ ರಾಜ್ಯದವರೆಗೆ ಹೆಚ್ಚಿದ್ದರಿಂದ ಗಾಯಾಳುಗಳೊಂದಿಗೆ ಸಂವಹನ ಮಾಡಲು ಆಸ್ಪತ್ರೆ ಸಿಬ್ಬಂದಿಗೆ ಬಹಳ ತೊಂದರೆಯಾಗಿದೆ ಎಂದು ತಿಳಿದುಬಂದಿದೆ.
ಹೆಚ್ಚಿನ ಚಿಕಿತ್ಸೆಗಾಗಿ 64 ಗಾಯಾಳುಗಳನ್ನು ಬಾಲಸೋರ್ ಆಸ್ಪತ್ರೆಯಿಂದ ಕಟಕ್‌ನ ಎಸ್‌ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ. 60 ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಿ ಕಳುಹಿಸಲಾಗಿದೆ ಎಂದು ಬಾಲಸೋರ್ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
These are local people in Balasore, Odisha who rushed to hospital to donate blood for the injured in #TrainMishap. They waited for hours for their turn to donate blood.
The world is full of kind people. pic.twitter.com/c2uBcbHHbs
— Arun Bothra 🇮🇳 (@arunbothra) June 3, 2023
Discover more from Coastal Times Kannada
Subscribe to get the latest posts sent to your email.
Discussion about this post