ಬೆಂಗಳೂರು: ಕರ್ನಾಟಕ ರಾಜ್ಯದ 34ನೇ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಅವರು ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಸಂಜೆ ನಿಗದಿತ ಸಮಯ 4:05 ಗಂಟೆಗೆ ನಡೆದ ಅದ್ಧೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ಡಿಕೆಶಿಗೆ ಪ್ರಮಾಣವಚನ ಬೋಧಿಸಿದರು.
ಗಂಗಾಧರಯ್ಯ ಅಜ್ಜಯ್ಯನವರ ಹೆಸರಿನಲ್ಲಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಅದಕ್ಕೂ ಮುನ್ನ ಅಜ್ಜನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಾರ್ವಜನಿಕರಿಗೆ ಧನ್ಯವಾದ ಅರ್ಪಿಸಿದರು.
ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇವರೊಂದಿಗೆ ಶಾಸಕರುಗಳಾದ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.
Discover more from Coastal Times Kannada
Subscribe to get the latest posts sent to your email.







Discussion about this post