ಬೆಳ್ತಂಗಡಿ, ಸೆ 03 : ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆ. 3ರಂದು ಬೆಳ್ತಂಗಡಿಯಲ್ಲಿ ನಡೆಯುವ ಪ್ರತಿಭಟನ ಸಭೆಗೆ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 73ರ ಮಾರ್ಗ ಬದಲಾವಣೆಮಾಡಲಾಗಿದೆ.
ಸೆ .3ರಂದು ಬೆಳಿಗ್ಗೆ 9.00 ಗಂಟೆಯಿಂದ ಮದ್ಯಾಹ್ನ 3.00 ಗಂಟೆಯವರೆಗೆ ಈ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿದೆ. ಈ ಪ್ರತಿಭಟನಾ ಸಭೆಗೆ ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್, ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣವರ, ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ, ಮಾನವ ಹಕ್ಕು ಆಯೋಗದ ಗೀತಾ ಹಾಗೂ ಒಡನಾಡಿ ಸಂಸ್ಥೆಯ ಮುಖ್ಯಸ್ಥರು. ರಾಜ್ಯ ಒಕ್ಕಲಿಗ ಸಂಘದ ಮುಖ್ಯಸ್ಥರು ಮುಂತಾದವರು ಭಾಗವಹಿಸಲಿದ್ದಾರೆ.
ಬೆಳ್ತಂಗಡಿ ಪೇಟೆ ಮೂಲಕ ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಹಾಗೆಯೇ ಮಂಗಳೂರಿನಿಂದ ಉಜಿರೆ ಕಡೆಗೆ ಬರುವ ಎಲ್ಲ ವಾಹನಗಳನ್ನು ಗುರುವಾಯನಕೆರೆಯಲ್ಲಿ, ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್‌ನಲ್ಲಿ ಆದ್ರುಪೆರಾಲ್ ಮುಖಾಂತರ ಸಂಚರಿಸಲು ಮತ್ತು ಉಳಿದ ಸಣ್ಣ ವಾಹನಗಳನ್ನು ಚರ್ಚ್ ಕ್ರಾಸ್‌ನಿಂದ ಕನ್ನಾಜೆ, ಪಡ್ಲಾಡಿ, ಲಾೖಲ ಮಾರ್ಗವಾಗಿ ಉಜಿರೆ ಕಡೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
Discussion about this post