• About us
  • Contact us
  • Disclaimer
Sunday, October 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

Coastal Times by Coastal Times
September 3, 2026
in ಸಿನಿಮಾ
13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
52
VIEWS
WhatsappTelegramShare on FacebookShare on Twitter

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕೊನೆಗೂ ಕಾನೂನಾತ್ಮಕವಾಗಿ ತೆರೆಬಿದ್ದಿದೆ. ಹಲವು ವರ್ಷಗಳಿಂದ ಕೋರ್ಟ್ ಅಂಗಳದಲ್ಲಿದ್ದ ಈ ವಿಚ್ಛೇದನ ಪ್ರಕರಣವನ್ನು ಇತ್ಯರ್ಥಪಡಿಸಿರುವ ಕರ್ನಾಟಕ ಹೈಕೋರ್ಟ್, ದಂಪತಿಗೆ ಅಧಿಕೃತವಾಗಿ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ವಿಜಯ್ ಹಾಗೂ ನಾಗರತ್ನ ದಂಪತಿಗೆ ಮೂವರು ಮಕ್ಕಳಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಗಂಡು ಮಗ. ಹೈಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ, ಈ ಮೂವರು ಮಕ್ಕಳ ಪೋಷಣೆ, ವಿದ್ಯಾಭ್ಯಾಸ ಮತ್ತು ಸಂಪೂರ್ಣ ಜವಾಬ್ದಾರಿಯನ್ನು ನಟ ದುನಿಯಾ ವಿಜಯ್ ಅವರೇ ನೋಡಿಕೊಳ್ಳಬೇಕು.

ದುನಿಯಾ ವಿಜಯ್ ಹಾಗೂ ನಾಗರತ್ನ 1999ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಸಾರದಲ್ಲಿ ಮನಸ್ತಾಪಗಳು ಉಂಟಾಗಿ, ವಿಜಯ್ ಅವರು 2013ರಲ್ಲಿ ಮೊದಲ ಬಾರಿಗೆ ವಿಚ್ಛೇದನ ಕೋರಿ ನ್ಯಾಯಾಲಯದ ಬಾಗಿಲು ತಟ್ಟಿದ್ದರು. ಆದರೆ, 2014ರಲ್ಲಿ ದಂಪತಿ ಸಂಧಾನದ ಹಾದಿ ತುಳಿದು, ವಿಚ್ಛೇದನ ಅರ್ಜಿಯನ್ನು ಹಿಂಪಡೆದಿದ್ದರು. ಆ ಬಳಿಕ 2018ರಲ್ಲಿ ಮಾನಸಿಕ ಕ್ರೌರ್ಯದ ಆಧಾರದ ಮೇಲೆ ವಿಜಯ್ ಮತ್ತೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಹೊಸದಾಗಿ ಅರ್ಜಿ ಸಲ್ಲಿಸಿದ್ದರು.

ಈ ಕಾನೂನು ಹೋರಾಟಕ್ಕೆ 2024ರಲ್ಲಿ ದೊಡ್ಡ ತಿರುವು ಸಿಕ್ಕಿತ್ತು. ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯವು ನಾಗರತ್ನ ವಿರುದ್ಧ ವಿಜಯ್ ಹೊರಿಸಿದ್ದ ಕ್ರೌರ್ಯದ ಆರೋಪಗಳು ಸಾಬೀತಾಗಿಲ್ಲ ಎಂದು ಹೇಳಿ, ವಿಚ್ಛೇದನದ ಅರ್ಜಿಯನ್ನು ವಜಾಗೊಳಿಸಿ ವಿಜಯ್‌ಗೆ ಬಿಗ್ ಶಾಕ್ ನೀಡಿತ್ತು. ಕೌಟುಂಬಿಕ ನ್ಯಾಯಾಲಯದ ಈ ತೀರ್ಪನ್ನು ಸವಾಲು ಮಾಡಿ ವಿಜಯ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅಂತಿಮವಾಗಿ 13 ವರ್ಷಗಳ ಬಳಿಕ ಹೈಕೋರ್ಟ್ ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನಾತ್ಮಕವಾಗಿ ಅಂತ್ಯ ವಿರಾಮವಿಟ್ಟಿದೆ.

ಈ ಕುರಿತು ದುನಿಯಾ ವಿಜಯ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕಿನುದ್ದಕ್ಕೂ ಜೊತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಅಳಿವೆಬಾಗಿಲಿನಲ್ಲಿ ಎರಡು ಮೀನುಗಾರಿಕಾ ದೋಣಿ ಮುಳುಗಡೆ: 12 ಮೀನುಗಾರರ ರಕ್ಷಣೆ

Next Post

ಬಜ್ಪೆ- ಕಟೀಲು ರಸ್ತೆಯಲ್ಲಿ ಕಿರು ಸೇತುವೆ ಕುಸಿತ: ವಾಹನ ಸಂಚಾರ ಮಾರ್ಗ ಬದಲು, ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

Related Posts

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
14
ಗೋಲ್ಡನ್ ಮೂವಿಸ್​ನಿಂದ ನಿರ್ಮಾಣವಾಗಿರುವ ‘ಪಿಚ್ಚರ್’ ಇದೇ ಆಗಸ್ಟ್ 7ರಂದು ರಾಜ್ಯಾದ್ಯಂತ ತೆರೆಗೆ
ಸಿನಿಮಾ

ಗೋಲ್ಡನ್ ಮೂವಿಸ್​ನಿಂದ ನಿರ್ಮಾಣವಾಗಿರುವ ‘ಪಿಚ್ಚರ್’ ಇದೇ ಆಗಸ್ಟ್ 7ರಂದು ರಾಜ್ಯಾದ್ಯಂತ ತೆರೆಗೆ

August 5, 2026
41
Next Post
ಬಜ್ಪೆ- ಕಟೀಲು ರಸ್ತೆಯಲ್ಲಿ ಕಿರು ಸೇತುವೆ ಕುಸಿತ: ವಾಹನ ಸಂಚಾರ ಮಾರ್ಗ ಬದಲು, ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

ಬಜ್ಪೆ- ಕಟೀಲು ರಸ್ತೆಯಲ್ಲಿ ಕಿರು ಸೇತುವೆ ಕುಸಿತ: ವಾಹನ ಸಂಚಾರ ಮಾರ್ಗ ಬದಲು, ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

Discussion about this post

Recent News

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

October 18, 2026
11
ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

October 18, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು ಜಾಗದ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ: ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

October 18, 2026
ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

ಮಂಗಳೂರು: ಬೇಕರಿ ತಿಂಡಿಗಳ ರೀ-ಪ್ಯಾಕಿಂಗ್ ದಂಧೆ ಪತ್ತೆ; ಫಲ್ನೀರ್ ಜಂಕ್ಷನ್ ನಲ್ಲಿರುವ ಜಿ.ಐ. ಬೇಕರಿ ಮೇಲೆ ಅಧಿಕಾರಿಗಳ ದಾಳಿ

October 18, 2026
50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ; ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಸಕಲೇಶಪುರದಲ್ಲಿ ಬಂಧನ

October 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d