• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ “ಸ್ಟ್ರಿಕ್ಟ್ ಡಯೆಟ್” – ಪತಿ ಬೋನಿ ಕಪೂರ್

Coastal Times by Coastal Times
October 3, 2023
in ಸಿನಿಮಾ
ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ “ಸ್ಟ್ರಿಕ್ಟ್ ಡಯೆಟ್” – ಪತಿ ಬೋನಿ ಕಪೂರ್
112
VIEWS
WhatsappTelegramShare on FacebookShare on Twitter

ಬೆಂಗಳೂರು: ಭಾರತೀಯ ಚಿತ್ರರಂಗವನ್ನು ದಶಕಗಳ ಕಾಲ ಆಳಿದ ಖ್ಯಾತ ನಟಿ ಶ್ರೀದೇವಿ ಸಾವಿನ ಬಗೆಗೆ ಇನ್ನೂ ಅನೇಕ ಪ್ರಶ್ನೆಗಳು ಉಳಿದುಕೊಂಡಿವೆ. 2018 ಫೆಬ್ರುವರಿ 24 ರಂದು ದುಬೈನ ಐಷಾರಾಮಿ ಹೋಟೆಲ್ ಒಂದರ ಸ್ನಾನಗೃಹದ ಬಾತ್‌ಟಬ್‌ನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು ಎಂದು ತಿಳಿದು ಬಂದಿತ್ತು. ಈ ಬಗ್ಗೆ ಅವರ ಪತಿ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಅವರನ್ನು ದುಬೈ ಪೊಲೀಸರು ತೀವ್ರ ವಿಚಾರಣೆ ನಡೆಸಿ ಶ್ರೀದೇವಿ ಸಾವು ಕೊಲೆಯಲ್ಲ ಎಂದು ಹೇಳಿತ್ತು.

2018 ಫೆಬ್ರವರಿಯಲ್ಲಿ ಶ್ರೀದೇವಿ ಮದುವೆಯಲ್ಲಿ ಭಾಗಿ ಆಗಲು ದುಬೈಗೆ ಹೋಗಿದ್ದರು. ಪತ್ನಿ ಶ್ರೀದೇವಿಗೆ ಸರ್‌ಪ್ರೈಸ್‌ ನೀಡಲು ಬಳಿಕ ಬೋನಿ ಕಪೂರ್ ಭಾರತದಿಂದ ದುಬೈಗೆ ತೆರಳಿದ್ದರು. ಇಬ್ಬರು ಹೊರಗೆ ಊಟಕ್ಕೆ ಹೋಗಲು ತಯಾರಾಗುತ್ತಿದ್ದರು. ಸ್ಥಳೀಯ ಕಾಲಮಾನ ಸಂಜೆ 5.30ರ ಸುಮಾರಿಗೆ, ತಯಾರಾಗಿ ಬರುತ್ತೇನೆಂದು ಶ್ರೀದೇವಿ ಬಾತ್ ರೂಮಿಗೆ ತೆರಳಿದ್ದಾರೆ. ಎಷ್ಟೆ ಹೊತ್ತು ಆದರೂ ಆಕೆ ಹೊರಗೆ ಬರದಿದ್ದಾಗ ಅನುಮಾನಗೊಂಡ ಬೋನಿ, ಬಲವಂತವಾಗಿ ಬಾಗಿಲು ತೆರೆದಾಗ ನಿಶ್ಚಲರಾಗಿ ನೀರು ತುಂಬಿದ್ದ ಬಾತ್ ಟಬ್‌ನಲ್ಲಿ ಬಿದ್ದಿದ್ದರು. ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಆಕೆಯ ಪ್ರಾಣ ಪಕ್ಷಿ ಹಾರಿಹೋಗಿತ್ತು.

ಆಕೆಯದ್ದು ಸಹಜ ಸಾವಲ್ಲ, ಅನುಮಾನಾಸ್ಪದವಾಗಿ ನಿಧನರಾಗಿದ್ದಾರೆ ಎಂದು ಕೆಲವರು ಪತಿ ಬೋನಿ ಕಪೂರ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲಿನ ಪೊಲೀಸರು ಕೂಡ ಬೋನಿ ಕಪೂರ್ ಮೇಲೆ ಅನುಮಾನಗೊಂಡು ಭಾರೀ ವಿಚಾರಣೆ ನಡೆಸಿದ್ದರು. ಇದೀಗ 5 ವರ್ಷಗಳ ಬಳಿಕ ಸಂದರ್ಶನವೊಂದರಲ್ಲಿ ಬೋನಿ ಕಪೂರ್ ಪತ್ನಿ ಶ್ರೀದೇವಿ ಸಾವಿನ ಬಗ್ಗೆ ಮಾತನಾಡಿದ್ದಾರೆ.

ಸುಮಾರು 24 ಅಥವಾ 48 ಗಂಟೆಗಳ ಕಾಲ ನನ್ನನ್ನು ತನಿಖೆ ಮತ್ತು ವಿಚಾರಣೆಗೆ ಒಳಪಡಿಸಿದಾಗ ಅದರ ಬಗ್ಗೆ ಮಾತನಾಡಿದ್ದೇನೆ. ಭಾರತೀಯ ಮಾಧ್ಯಮಗಳಿಂದ ಹೆಚ್ಚಿನ ಒತ್ತಡವಿರುವುದರಿಂದ ನಾವು ನಾವು ವಿಚಾರಣೆ ನಡೆಸಬೇಕಾಯಿತು ಎಂದು ಅಲ್ಲಿನ ಅಧಿಕಾರಿಗಳು ಹೇಳಿದರು. ಇಲ್ಲಿ ಯಾವುದೇ ಮೋಸದಾಟ ಇರಲಿಲ್ಲ. ನಾನು ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಎಲ್ಲಾ ತರಹದ ವಿಚಾರಣೆ ಎದುರಿಸಿದೆ. ಕೊನೆಗೆ ಬಂದ ವರದಿಯಲ್ಲಿ ಶ್ರೀದೇವಿ ಸಾವು ಆಕಸ್ಮಿಕ ಎಂದು ಸ್ಪಷ್ಟವಾಯಿತು.

ತೆರೆಮೇಲೆ ಅಂದವಾಗಿ ಕಾಣಿಸಬೇಕು ಎಂದು ಶ್ರೀದೇವಿ ಸ್ಟ್ರಿಕ್ಟ್ ಡಯೆಟ್ ಅನುಸರಿಸುತ್ತಿದ್ದಳು. ನಮ್ಮ ಮದುವೆ ಬಳಿಕ ನನಗೆ ಈ ವಿಷಯ ತಿಳಿಯಿತು. ಉಪ್ಪು ಇಲ್ಲದೇ ಸಪ್ಪೆ ಊಟ ಮಾಡುತ್ತಿದ್ದಳು. ಇದರಿಂದ ಸಾಕಷ್ಟು ಬಾರಿ ನಿತ್ರಾಣಗೊಂಡು ಬೀಳುತ್ತಿದ್ದಳು. ಲೋ ಬಿಪಿ ಸಮಸ್ಯೆ ಇದೆ ಎಂದು ವೈದ್ಯರು ಜಾಗ್ರತೆಯಿಂದ ಇರಲು ಸಾಕಷ್ಟು ಬಾರಿ ಸೂಚಿಸಿದ್ದರು. ಆದರೆ ಆಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ಅದರಲ್ಲೂ ಇಂಗ್ಲಿಷ್–ವಿಂಗ್ಲಿಷ್ ಸಿನಿಮಾ ಸಂದರ್ಭದಲ್ಲಿ 45 ಕೆ.ಜಿಗೆ ತೂಕ ಇಳಿಸಿಕೊಂಡಿದ್ದಳು. ಕಡೆಗೆ ಆಹಾರದಲ್ಲಿ ಉಪ್ಪು ಬಳಸುವುದನ್ನೂ ನಿಲ್ಲಿಸಿದ್ದಳು. ಇದರಿಂದ ಅವಳ ಬಿಪಿ ತುಂಬಾ ಕಡಿಮೆ ಆಗಿತ್ತು‘ ಎಂದು ಹೇಳಿದ್ದಾರೆ. ಶ್ರೀದೇವಿಯದ್ದು ಸಹಜ ಸಾವಲ್ಲ. ಆಕಸ್ಮಿಕ ಸಾವು ಎಂದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರಿನ ಬಿಜೆಪಿ ಕಾರ್ಯಕರ್ತ ಮಹಿಳೆಯ ಜೊತೆಯಿರುವ ಅರೆನಗ್ನ ಸ್ಥಿತಿಯಲ್ಲಿರುವ ಫೋಟೊ ವೈರಲ್

Next Post

ಮಂಗಳೂರು: ಕೌಟುಂಬಿಕ ಕಲಹ, ಕದ್ರಿಯಲ್ಲಿ ವೃದ್ಧ ಸೋದರಿಯರಿಬ್ಬರು ಆತ್ಮಹತ್ಯೆ

Related Posts

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
49
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
14
Next Post
ಮಂಗಳೂರು: ಕೌಟುಂಬಿಕ ಕಲಹ, ಕದ್ರಿಯಲ್ಲಿ ವೃದ್ಧ ಸೋದರಿಯರಿಬ್ಬರು ಆತ್ಮಹತ್ಯೆ

ಮಂಗಳೂರು: ಕೌಟುಂಬಿಕ ಕಲಹ, ಕದ್ರಿಯಲ್ಲಿ ವೃದ್ಧ ಸೋದರಿಯರಿಬ್ಬರು ಆತ್ಮಹತ್ಯೆ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d