• About us
  • Contact us
  • Disclaimer
Tuesday, November 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

Coastal Times by Coastal Times
November 3, 2026
in ಕರಾವಳಿ
ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ
15
VIEWS
WhatsappTelegramShare on FacebookShare on Twitter

ಮಂಗಳೂರು, ನ. 3: ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಚಾಲನೆ ನೀಡಿದ ಗೋವಾದ ಮುಖ್ಯ ಮಂತ್ರಿ ಡಾ. ಪ್ರಮೋದ್ ಸಾವಂತ್ ಶುಭ ಹಾರೈಸಿ, ಗೋವಾದ ಹೊರಗಿನ ಕೊಂಕಣಿ ಸಾಧಕರನ್ನೂ ಗೋವಾ ಸರ್ಕಾರ ತನ್ನ ಅಧಿಕೃತ ರಾಜ್ಯ ಪ್ರಶಸ್ತಿಗಳಿಗೆ ಪರಿಗಣಿಸುತ್ತದೆ ಎಂದರು.

ಅವರು ಕೊಂಕಣಿ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್‌ನ 40ನೇ ವರ್ಷದ ಸಂಭ್ರಮದ ಅಂಗವಾಗಿ ಆಯೋಜಿಸಲಾಗಿರುವ ಪ್ರಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಮಂಗಳವಾರ ಮುಂಜಾನೆ 5 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನವೆಂಬರ್ 3ರಿಂದ 15ರವರೆಗೆ ನಡೆಯಲಿರುವ 13 ದಿನಗಳ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್, ಮಾಂಡ್ ಸೊಭಾಣ್ ಮತ್ತು ಸ್ವಾಗತ ಸಮಿತಿಯ ಕಾರ್ಯವನ್ನು ಶ್ಲಾಘಿಸಿದರು. ಕೊಂಕಣಿ ಭಾಷೆಯಲ್ಲಿ ಉಪಭಾಷೆಗಳು ಬದಲಾಗಬಹುದು, ಆದರೆ ಕೊಂಕಣಿ ಜನರ ಹೃದಯ ಮತ್ತು ಭಾಷೆಯ ಭಾವನೆ ಒಂದೇ ಆಗಿದೆ ಎಂದರು.

ಗೋವಾದಲ್ಲಿ ಕೊಂಕಣಿ ಅಧಿಕೃತ ಭಾಷೆಯಾಗಿದ್ದು, ಸರ್ಕಾರದಿಂದ ಅಗತ್ಯ ಪ್ರೋತ್ಸಾಹ ದೊರೆಯುತ್ತಿದೆ. ಆದರೆ ಮಂಗಳೂರಿನ ಕೊಂಕಣಿ ಭಾಷಿಕರು ಯಾವುದೇ ಸರ್ಕಾರಿ ವ್ಯವಸ್ಥೆಗಳ ನೆರವಿಲ್ಲದೆ ತಮ್ಮ ಪರಿಶ್ರಮ ಮತ್ತು ಸಮರ್ಪಣೆಯಿಂದ ಭಾಷೆಯನ್ನು ಜೀವಂತವಾಗಿಟ್ಟಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಗೋವಾದ ಹೊರಗಿರುವ ಕೊಂಕಣಿ ಸಾಧಕರನ್ನೂ ಗೋವಾ ಸರ್ಕಾರ ತನ್ನ ಅಧಿಕೃತ ರಾಜ್ಯ ಪ್ರಶಸ್ತಿಗಳಿಗೆ ಪರಿಗಣಿಸುತ್ತದೆ ಎಂದರು.

ಗೋವಾ ಮತ್ತು ಕರಾವಳಿ ಕರ್ನಾಟಕ ರಾಜ್ಯಗಳ ಗಡಿಗಳು ಬೇರೆ ಬೇರೆಯಾಗಿದ್ದರೂ, ಎರಡೂ ಪ್ರದೇಶಗಳು ಒಂದೇ ಕರಾವಳಿ, ಸಂಸ್ಕೃತಿ ಮತ್ತು ಜೀವನ ಶೈಲಿಯನ್ನು ಹಂಚಿಕೊಂಡಿವೆ. ಈ ಸಾಂಸ್ಕೃತಿಕ ಬಾಂಧವ್ಯ ಸದಾಕಾಲ ಮುಂದುವರಿಯಲಿ ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಗೋವಾದ ಕ್ಯಾಲಂಗುಟ್ ಕ್ಷೇತ್ರದ ಶಾಸಕ ಮೈಕಲ್ ಲೋಬೋ, ದಿವಂಗತ ಎರಿಕ್ ಒಝಾರಿಯೊ ಅವರು ಕೊಂಕಣಿ ಸಂಸ್ಕೃತಿಯ ಬೆಳವಣಿಗೆಗೆ ನೀಡಿದ ಜೀವಮಾನದ ಕೊಡುಗೆಯನ್ನು ಸ್ಮರಿಸಿದರು. ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವಲ್ಲಿ ಅವರು ವಹಿಸಿದ ಪಾತ್ರ ಮಹತ್ವದ್ದಾಗಿದೆ ಎಂದರು. ಸಮ್ಮೇಳನದಲ್ಲಿ ಭಾಗವಹಿಸುತ್ತಿರುವ ಎಲ್ಲ ತಂಡಗಳಿಗೆ ಶುಭ ಹಾರೈಸಿದ ಅವರು, ಗೋವಾದಿಂದ ಹೆಚ್ಚಿನ ಸಂಖ್ಯೆಯಲ್ಲಿ ತಂಡಗಳು ಪಾಲ್ಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ಆಶೀರ್ವಚನ ನೀಡಿದರು. ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಿ ‘ಕೊಂಕಣಿ ನಿರೊಂತರಿ – ಸೊಂಸಾರ್ ಸೊರಾಸೊರಿ’ (ಜಗತ್ತಿನ ಕೊನೆಯವರೆಗೂ ನಿರಂತರ ಕೊಂಕಣಿ) ಎಂಬ ಹೆಸರಿನಲ್ಲಿ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನ ನಡೆಯಲಿದೆ. ಸತತ 12 ದಿನಗಳ ಕಾಲ ನಿರಂತರ ಗಾಯನ ಮ್ಯಾರಥಾನ್ ಆಯೋಜಿಸಲಾಗಿದ್ದು, 300 ಗಾಯನ ತಂಡಗಳು ಸರದಿಯಂತೆ ಭಾಗವಹಿಸಲಿವೆ. ಜಗತ್ತಿನ ವಿವಿಧ ಭಾಗಗಳಿಂದ 6,700ಕ್ಕೂ ಅಧಿಕ ಗಾಯಕರು ಪಾಲ್ಗೊಳ್ಳಲಿದ್ದು, ಗೋವಾದ 53 ತಂಡಗಳು ಇದರಲ್ಲಿ ಸೇರಿವೆ. ವಿವಿಧ ಕೊಂಕಣಿ ಉಪ ಭಾಷೆಗಳು, ಸಮುದಾಯಗಳು ಮತ್ತು ಸಂಗೀತ ಪರಂಪರೆಗಳನ್ನು ಪ್ರತಿನಿಧಿಸುವ 4,500ಕ್ಕೂ ಅಧಿಕ ಹಾಡುಗಳನ್ನು ಯಾವುದೇ ಹಾಡು ಅಥವಾ ಗಾಯಕನ ಪುನರಾವರ್ತನೆಯಿಲ್ಲದೆ ಪ್ರಸ್ತುತಪಡಿಸುವ ಗುರಿ ಹೊಂದಲಾಗಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಗೋವಾದ ಶಾಸಕರಾದ ಮೈಕಲ್ ಲೋಬೋ ಮತ್ತು ದೆಲಿಲಾ ಲೋಬೋ, ಸ್ವಾಗತ ಸಮಿತಿ ಸದಸ್ಯ ಡಾಲ್ಫಿ ಪ್ರಶಾಂತ್ ಡಿಸೋಜ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಜಾಯ್ಸ್ ಒಝಾರಿಯೊ, ರಾಯ್ ಕ್ಯಾಸ್ಟೆಲಿನೊ, ಪ್ರಕಾಶ್ ಶೆಟ್ಟಿ ಮಂಗಳೂರು, ಎರಿಕ್ ಕೊರೆಯಾ, ರೊನಾಲ್ಡ್ ಸಿಲ್ವನ್ ಡಿಸೋಜ ಹಾಗೂ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು. ಮಾಂಡ್ ಸೊಭಾಣ್ ಅಧ್ಯಕ್ಷ ಲೂಯಿಸ್ ಜೆ. ಪಿಂಟೊ ಅವರು ಸ್ವಾಗತಿಸಿದರು. ರೈನೆಲ್ ಸಿಕ್ವೇರಾ ಕಾರ್ಯಕ್ರಮ ನಿರೂಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಖತರ್ನಾಕ್ ಮಹಿಳೆ ಅರೆಸ್ಟ್, 15 ಲಕ್ಷ ಮೌಲ್ಯದ ಎಂಡಿಎಂಎ ವಶ

Related Posts

ಸೋಮನಾಥ್ ಪುತ್ರನ್ ಆತ್ಮಹತ್ಯೆ ಪ್ರಕರಣ : 48 ಗಂಟೆಯೊಳಗೆ ಬೇಡಿಕೆ ಈಡೇರಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ದ.ಕ.ಮೊಗವೀರ ಸಂಯುಕ್ತ ಸಭಾ ಎಚ್ಚರಿಕೆ
ಕರಾವಳಿ

ಸೋಮನಾಥ್ ಪುತ್ರನ್ ಆತ್ಮಹತ್ಯೆ ಪ್ರಕರಣ : 48 ಗಂಟೆಯೊಳಗೆ ಬೇಡಿಕೆ ಈಡೇರಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ದ.ಕ.ಮೊಗವೀರ ಸಂಯುಕ್ತ ಸಭಾ ಎಚ್ಚರಿಕೆ

November 2, 2026
60
ಸುರತ್ಕಲ್: ಪೊಲೀಸ್ ದೌರ್ಜನ್ಯದ ಆರೋಪ; ಹೊಸಬೆಟ್ಟುವಿನಲ್ಲಿ ವ್ಯಕ್ತಿ ಆತ್ಮಹತ್ಯೆ, ಮೃತದೇಹವಿಟ್ಟು ಪ್ರತಿಭಟನೆ
ಕರಾವಳಿ

ಸುರತ್ಕಲ್: ಪೊಲೀಸ್ ದೌರ್ಜನ್ಯದ ಆರೋಪ; ಹೊಸಬೆಟ್ಟುವಿನಲ್ಲಿ ವ್ಯಕ್ತಿ ಆತ್ಮಹತ್ಯೆ, ಮೃತದೇಹವಿಟ್ಟು ಪ್ರತಿಭಟನೆ

October 28, 2026
73

Discussion about this post

Recent News

ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

November 3, 2026
15
ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಖತರ್ನಾಕ್ ಮಹಿಳೆ ಅರೆಸ್ಟ್, 15 ಲಕ್ಷ ಮೌಲ್ಯದ ಎಂಡಿಎಂಎ ವಶ

ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಖತರ್ನಾಕ್ ಮಹಿಳೆ ಅರೆಸ್ಟ್, 15 ಲಕ್ಷ ಮೌಲ್ಯದ ಎಂಡಿಎಂಎ ವಶ

November 3, 2026
95
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

November 3, 2026
ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಖತರ್ನಾಕ್ ಮಹಿಳೆ ಅರೆಸ್ಟ್, 15 ಲಕ್ಷ ಮೌಲ್ಯದ ಎಂಡಿಎಂಎ ವಶ

ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಖತರ್ನಾಕ್ ಮಹಿಳೆ ಅರೆಸ್ಟ್, 15 ಲಕ್ಷ ಮೌಲ್ಯದ ಎಂಡಿಎಂಎ ವಶ

November 3, 2026
ಸೋಮನಾಥ್ ಪುತ್ರನ್ ಆತ್ಮಹತ್ಯೆ ಪ್ರಕರಣ : 48 ಗಂಟೆಯೊಳಗೆ ಬೇಡಿಕೆ ಈಡೇರಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ದ.ಕ.ಮೊಗವೀರ ಸಂಯುಕ್ತ ಸಭಾ ಎಚ್ಚರಿಕೆ

ಸೋಮನಾಥ್ ಪುತ್ರನ್ ಆತ್ಮಹತ್ಯೆ ಪ್ರಕರಣ : 48 ಗಂಟೆಯೊಳಗೆ ಬೇಡಿಕೆ ಈಡೇರಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ದ.ಕ.ಮೊಗವೀರ ಸಂಯುಕ್ತ ಸಭಾ ಎಚ್ಚರಿಕೆ

November 2, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d