• About us
  • Contact us
  • Disclaimer
Saturday, September 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳ: ‘ಇತರ ಧರ್ಮಗಳನ್ನೂ ಗೌರವಿಸಿದಾಗ ವಿಶ್ವಶಾಂತಿ’ – ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌

Coastal Times by Coastal Times
December 3, 2021
in ಕರಾವಳಿ
ಧರ್ಮಸ್ಥಳ: ‘ಇತರ ಧರ್ಮಗಳನ್ನೂ ಗೌರವಿಸಿದಾಗ ವಿಶ್ವಶಾಂತಿ’ – ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌
24
VIEWS
WhatsappTelegramShare on FacebookShare on Twitter

ಉಜಿರೆ: ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರು ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಅಂಗವಾಗಿ ಗುರುವಾರ ಆಯೋಜಿಸಿದ್ದ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಉದ್ಘಾಟಿಸಿದರು ಅವರು ಮಾತನಾಡಿ ‘ತಮ್ಮ ಧರ್ಮದ ಮರ್ಮವನ್ನರಿತು, ಇತರ ಧರ್ಮಗಳನ್ನೂ ಗೌರವಿಸಿದಾಗ ಸಾಮಾಜಿಕ ಸಾಮರಸ್ಯದೊಂದಿಗೆ ವಿಶ್ವಶಾಂತಿ ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಧರ್ಮದ ತತ್ವ, ಸಿದ್ಧಾಂತ ಅರಿತು ಬದುಕಿನಲ್ಲಿ ಪಾಲನೆ ಮಾಡಿದರೆ ಎಲ್ಲರಲ್ಲೂ ಪರಸ್ಪರ ಪ್ರೀತಿ, ವಿಶ್ವಾಸ ಬೆಳೆದು ಸಾಮಾಜಿಕ ಸಾಮರಸ್ಯ ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಧರ್ಮಸ್ಥಳದ ಕ್ಷೇತ್ರದ ಸೇವೆ, ಸಾಧನೆ ಶ್ಲಾಘನೀಯ ಎಂದು ಹೆಗ್ಗಡೆಯವರನ್ನು ಅಭಿನಂದಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ‘88 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಸರ್ವಧರ್ಮ ಸಮ್ಮೇಳನದಲ್ಲಿ ಅನೇಕ ವಿದ್ವಾಂಸರು ಸರ್ವ ಧರ್ಮಗಳ ಸಾರವನ್ನು ಸಂದೇಶ ರೂಪದಲ್ಲಿ ನೀಡಿ, ಸಾರ್ಥಕ ಬದುಕಿಗೆ ಮಾರ್ಗದರ್ಶನ ನೀಡಿದ್ದಾರೆ. ಸಭ್ಯ, ಸುಸಂಸ್ಕೃತ ನಾಗರಿಕತೆಯು ಧರ್ಮದ ಮೂಲ ಜೀವದ್ರವ್ಯವಾಗಿದೆ’ ಎಂದರು.

ಧರ್ಮ ಮತ್ತು ಸೇವೆಗಳು ಜೊತೆಯಲ್ಲೆ ಸಾಗಬೇಕು. ಧರ್ಮದ ಮರ್ಮವಿರುವುದು ಆಚರಣೆಯಲ್ಲಿ. ಆಚಾರಕ್ಕೂ, ವಿಚಾರಕ್ಕೂ, ನಡೆಗೂ, ನುಡಿಗೂ ವ್ಯತ್ಯಾಸ ಇರಬಾರದು ಎಂದು ಅಭಿಪ್ರಾಯಪಟ್ಟರು.

ಬೆಂಗಳೂರಿನ ಎಸ್. ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಜಿ. ಭಟ್ಟರು ಅಧ್ಯಕ್ಷತೆ ವಹಿಸಿದ್ದರು. ಸಾಗರದ ಡಾ. ಸರ್ಫ್ರಾಜ್ ಚಂದ್ರಗುತ್ತಿ ಅವರು ‘ಭಾರತೀಯ ಧರ್ಮಗಳು’ ವಿಷಯದ ಕುರಿತು, ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಡಾ. ಎಂ.ಎಸ್. ಪದ್ಮಾ ಅವರು, ‘ಜೈನಧರ್ಮದ ಮೌಲಿಕತೆ ಮತ್ತು ಮಹತ್ವ’ದ ಬಗ್ಗೆ ಮತ್ತು ಶಿವಮೊಗ್ಗದ ವೀರೇಶ್ ವಿ. ಮೊರಾಸ್ ಅವರು ‘ಧರ್ಮ ಮತ್ತು ಸಾಮಾಜಿಕ ಸ್ವಾಸ್ಥ್ಯ’ದ ಬಗ್ಗೆ ಉಪನ್ಯಾಸ ನೀಡಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಶಾಲೆಗೆ ತೆರಳುತ್ತಿದ್ದ ಬಾಲಕಿಯರ ಕೈಹಿಡಿದೆಳೆದು ಲೈಂಗಿಕ ಕಿರುಕುಳ ಪ್ರಕರಣದ ವಿಕೃತಕಾಮಿಯ ಬಂಧನ

Next Post

ವಿದ್ಯಾರ್ಥಿಗಳ ಹೊಡೆದಾಟ ; ಗುಜ್ಜರಕೆರೆಯಿಂದ ಹಾಸ್ಟೆಲ್ ಸ್ಥಳಾಂತರಕ್ಕೆ ಪೊಲೀಸ್ ಕಮಿಷನರ್ ಗೆ ಸ್ಥಳೀಯರ ಒತ್ತಾಯ

Related Posts

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ
ಕರಾವಳಿ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
17
ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ
ಕರಾವಳಿ

ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

September 25, 2026
23
Next Post
ವಿದ್ಯಾರ್ಥಿಗಳ ಹೊಡೆದಾಟ ; ಗುಜ್ಜರಕೆರೆಯಿಂದ ಹಾಸ್ಟೆಲ್ ಸ್ಥಳಾಂತರಕ್ಕೆ ಪೊಲೀಸ್ ಕಮಿಷನರ್ ಗೆ ಸ್ಥಳೀಯರ ಒತ್ತಾಯ

ವಿದ್ಯಾರ್ಥಿಗಳ ಹೊಡೆದಾಟ ; ಗುಜ್ಜರಕೆರೆಯಿಂದ ಹಾಸ್ಟೆಲ್ ಸ್ಥಳಾಂತರಕ್ಕೆ ಪೊಲೀಸ್ ಕಮಿಷನರ್ ಗೆ ಸ್ಥಳೀಯರ ಒತ್ತಾಯ

Discussion about this post

Recent News

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
32
ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

ಬಂಟ್ವಾಳ ಆಟೋರಿಕ್ಷಾದಲ್ಲಿ ಬಂದು ತಲವಾರು, ರಾಡ್‌ನಿಂದ ಮಾರಣಾಂತಿಕ ಹಲ್ಲೆ: ಮೂವರು ಆರೋಪಿಗಳ ಬಂಧನ

September 26, 2026
ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

September 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d