ಮಂಗಳೂರು: ‘2023ರ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಂತೋಷ ಕೂಟ ಏರ್ಪಡಿಸಲು ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಆಡಳಿತ ವರ್ಗದವರು ಕಡ್ಡಾಯವಾಗಿ ತಮ್ಮ ಕಚೇರಿಯಿಂದ ಇದೇ 15ರ ಒಳಗೆ ಪೂರ್ವಾನುಮತಿ ಪಡೆಯಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಸೂಚಿಸಿದ್ದಾರೆ.

ಹೊಸ ವರ್ಷಾಚರಣೆಯ ಸಂದರ್ಭದಲ್ಲೂ ರಾತ್ರಿ 10ರ ನಂತರ ಧ್ವನಿವರ್ಧಕ ಬಳಕೆಗೆ ಅವಕಾಶ ಇಲ್ಲ. ರೆಸ್ಟೋರೆಂಟ್ ಮತ್ತು ಮದ್ಯಪಾನ ಸರಬರಾಜು ಮಾಡುವ ಹೋಟೆಲ್‍ಗಳಲ್ಲಿ ಸರ್ಕಾರವು ನಿಗದಿಪಡಿಸಿದ ಸಮಯ ಮೀರಿ ಮದ್ಯ ವಿತರಿಸಲು ಅಬಕಾರಿ ಇಲಾಖೆಯಿಂದ ಲಿಖಿತವಾಗಿ ಅನುಮತಿ ಪಡೆಯುವುದು ಕಡ್ಡಾಯ. ಅಬಕಾರಿ ಇಲಾಖೆಯಿಂದ ಅನುಮತಿ ಪಡೆದರೂ ಮದ್ಯ ವಿತರಣೆಯನ್ನು ರಾತ್ರಿ 11 ಗಂಟೆಯೊಳಗೆ ಮುಕ್ತಾಯಗೊಳಿಸಬೇಕು. 18 ವರ್ಷ ಕೆಳಗಿನವರಿಗೆ ಮದ್ಯ ವಿತರಿಸುವಂತಿಲ್ಲ. ಪೋಷಕರು ಜೊತೆಯಲ್ಲಿ ಇಲ್ಲದಿದ್ದರೆ, 18 ವರ್ಷಕ್ಕಿಂತ ಕೆಳಗಿನವರಿಗೆ ಸಂತೋಷ ಕೂಟಗಳಿಗೆ ಪ್ರವೇಶ ನಿರ್ಬಂಧಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ವ್ಯವಸ್ಥಾಪಕರನ್ನೇ ಹೊಣೆ ಮಾಡಲಾಗುವುದು’ ಎಂದು ಎಚ್ಚರಿಸಿದ್ದಾರೆ.
ಬಸ್ ತಂಗುದಾಣ, ಸಾರ್ವಜನಿಕ ಉದ್ಯಾನ, ಕ್ರೀಡಾಂಗಣ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಮದ್ಯಪಾನ ನಿಷೇಧಿಸಲಾಗಿದೆ. ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು. ಸೌಂಡ್ ಬಾಕ್ಸ್ ಮಾದರಿಯ ಧ್ವನಿವರ್ಧಕ ಮಾತ್ರ ಬಳಸಬಹುದು. ಶಬ್ದವು ಶಬ್ದಮಾಲಿನ್ಯ ನಿಯಂತ್ರಣ ನಿಯಮದಲ್ಲಿ ನಿಗದಿಪಡಿಸಿದ ಮಿತಿಯನ್ನು ಮೀರುವಂತಿಲ್ಲ.

ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಹಾಗೂ ಸಮುದ್ರ ಕಿನಾರೆಗಳಲ್ಲಿ ಮದ್ಯಪಾನ, ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಅಥವಾ ಅಶ್ಲೀಲ ನೃತ್ಯ, ಜೂಜಾಟ ನಡೆಸುವಂತಿಲ್ಲ. ಮನೆಗಳ ಮುಂದೆ ವಿದ್ಯಾರ್ಥಿನಿಲಯ, ಉದ್ಯೋಗಿ ಮಹಿಳೆಯರ ಹಾಸ್ಟೆಲ್ ಬಳಿ ಗುಂಪು ಕಟ್ಟಿಕೊಂಡು ಕಿರಿಕಿರಿ ಉಂಟುಮಾಡುವಂತಿಲ್ಲ. ರಸ್ತೆಯಲ್ಲಿ ಮದ್ಯಸೇವೆನ ಮತ್ತು ಬಾಟಲಿ ಎಸೆಯುವುದು, ಪಟಾಕಿ ಸಿಡಿಸುವುದನ್ನು ನಿರ್ಬಂಧಿಸಲಾಗಿದೆ.

Discover more from Coastal Times Kannada
Subscribe to get the latest posts sent to your email.







Discussion about this post