• About us
  • Contact us
  • Disclaimer
Wednesday, June 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಶ್ಲೀಲ ವಿಡಿಯೋ ವೈರಲ್ ಮಾಡುತ್ತೇನೆ: ಪತ್ನಿಗೆ ಬೆದರಿಕೆ ಹಾಕಿದ ಪತಿ ಬಂಧನ

Coastal Times by Coastal Times
January 4, 2024
in ಕ್ರೈಮ್ ನ್ಯೂಸ್
ಅಶ್ಲೀಲ ವಿಡಿಯೋ ವೈರಲ್ ಮಾಡುತ್ತೇನೆ: ಪತ್ನಿಗೆ ಬೆದರಿಕೆ ಹಾಕಿದ ಪತಿ ಬಂಧನ
123
VIEWS
WhatsappTelegramShare on FacebookShare on Twitter

ಬೆಳಗಾವಿ, ಜ.4: ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ತನ್ನ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಮತ್ತೊಂದು ಮದುವೆಯಾಗಲು ಹೆಂಡತಿಯಿಂದ ವಿಚ್ಛೇದನ ಪಡೆಯಲು ಈ ರೀತಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಬೆಳಗಾವಿ ನಗರದ ನಿವಾಸಿ ಕಿರಣ್ ಪಾಟೀಲ್ ತನ್ನ ಪತ್ನಿಗೆ ವಿಚ್ಛೇದನ ನೀಡಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ಮುಂದಾಗಿದ್ದನು. ಇದಕ್ಕಾಗಿಯೇ ವಿಚ್ಛೇದನ ನೀಡುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನು. ಅಲ್ಲದೆ, ಖಾಸಗಿ ಕ್ಷಣದ ವಿಡಿಯೋ, ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಗಂಡನ ಬೆದರಿಕೆಯಿಂದ ಭೀತಿಗೊಂಡ ಪತ್ನಿ ಸಾಕಷ್ಟು ಬಾರಿ ಮನವೊಲಿಸಲು ಯತ್ನಿದರೂ ಪ್ರಯೋಜನವಾಗಿಲ್ಲ. ಪತಿ ಕಿರಣ್ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದನು. ಅಷ್ಟಕ್ಕೂ ಸುಮ್ಮನಾಗದ ಆತ, ಪತ್ನಿಗೆ ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡುವುದನ್ನು ಮುಂದುವರಿಸಿದ್ದನು.

ಇದರಿಂದ ದಿಕ್ಕೆ ತೋಚದಂತಾದಾಗ ಮಹಿಳೆ ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರುತ್ತಾಳೆ. ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಿರಣ್​ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಆತನ ಮೊಬೈಲ್​ನಲ್ಲಿ ಪತ್ನಿಯ ಅಶ್ಲೀಲ ವಿಡಿಯೋ, ಫೋಟೋ ಇರುವುದು ಬೆಳಕಿಗೆ ಬಂದಿದೆ. ಆರೋಪ ಸಾಬೀತಾಗುತ್ತಿದ್ದಂತೆ ಪೊಲೀಸರು ಬಂಧಿಸಲು ಮುಂದಾದಾಗ ಕಿರಣ್ ತಪ್ಪಿಸಿಕೊಂಡು ಓಡಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಆತನನ್ನ ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ಸೇರಿಸಿದ್ದರು. ಸದ್ಯ ಗುಣಮುಖನಾಗಿ ನಿನ್ನೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಕಿರಣ್​ನನ್ನು ಪೊಲೀಸರು ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆಪಾದಿತನನ್ನ ಠಾಣೆಗೆ ಕರೆದು ತನಿಖೆ ಮಾಡುವಾಗ ಮೊಬೈಲ್ ಪರಿಶೀಲನೆ ಮಾಡಿದ್ದಾರೆ. ಆತನ ಮೊಬೈಲ್​ನಲ್ಲಿ ಮಹಿಳೆ ಹೇಳಿದ ಹಾಗೇ ಕೆಲವು ವಿಡಿಯೋ, ಫೋಟೊಗಳು ಸಿಕ್ಕಿವೆ. ಆ ವಿಚಾರವಾಗಿ ಅರೆಸ್ಟ್ ಮಾಡುವಾಗ ಆರೋಪಿ ತಪ್ಪಿಸಿಕೊಂಡು ಓಡಿ ಹೋಗಿದ್ದ. ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ಆತನನ್ನ ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದರು ಎಂದರು. ಆತ ಮಾಡಿದ ತಪ್ಪು ಅವನ ಕಣ್ಣ ಮುಂದೆ ರುಜುವಾತು ಆಯಿತು. ಇದರಿಂದ ಹೆದರಿಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ತಕ್ಷಣ ಪೊಲೀಸರು ಆತನನ್ನ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ತನಿಖೆ ಪ್ರಕಾರ ಆತ ಮಾಡಿದ ತಪ್ಪು ರುಜುವಾತು ಆಗಿದ್ದು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಹೆಂಡತಿಗೆ ಆತ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಇಲ್ಲವಾದರೆ ವಿಡಿಯೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಬಿಡುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದನು. ಇನ್ನೊಂದು ಮದುವೆ ಮಾಡಿಕೊಳ್ಳಲು ಪ್ಲ್ಯಾನ್ ಮಾಡುತ್ತಿದ್ದ, ಈ ಕಾರಣಕ್ಕೆ ಆತ ಡಿವೋರ್ಸ್ ತೆಗೆದುಕೊಳ್ಳಲು ಮುಂದಾಗಿದ್ದನು ಅಂತಾ ಮಹಿಳೆ ಹೇಳುತ್ತಿದ್ದಾಳೆ. ಸದ್ಯ ಕಿರಣ್ ಮೊಬೈಲ್ ಜಪ್ತಿ ಮಾಡಿ ಎಫ್ಎಸ್ಎಲ್​ಗೆ ಕಳುಹಿಸಿದ್ದೇವೆ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಟ್ರೋಪಿ ಅನಾವರಣ

Next Post

ಶ್ರೀರಾಮ ಮಂದಿರ ಉದ್ಘಾಟನೆ: ಸಚಿವೆ ಹೆಬ್ಬಾಳ್ಕರ್ ಗೆ ಆಮಂತ್ರಣ ನೀಡಿದ ವಿಎಚ್ ಪಿ ಪ್ರಮುಖರು

Related Posts

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ
ಕ್ರೈಮ್ ನ್ಯೂಸ್

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
30
ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​
ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
72
Next Post
ಶ್ರೀರಾಮ ಮಂದಿರ ಉದ್ಘಾಟನೆ: ಸಚಿವೆ ಹೆಬ್ಬಾಳ್ಕರ್ ಗೆ ಆಮಂತ್ರಣ ನೀಡಿದ ವಿಎಚ್ ಪಿ ಪ್ರಮುಖರು

ಶ್ರೀರಾಮ ಮಂದಿರ ಉದ್ಘಾಟನೆ: ಸಚಿವೆ ಹೆಬ್ಬಾಳ್ಕರ್ ಗೆ ಆಮಂತ್ರಣ ನೀಡಿದ ವಿಎಚ್ ಪಿ ಪ್ರಮುಖರು

Discussion about this post

Recent News

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
108
ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
89
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

ದೋಹಾ (ಕತಾರ್) ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

June 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d