ಕಡಬ, ಮಾ.04. ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರ್ ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (23) ಎಂದು ಗುರುತಿಸಲಾಗಿದೆ. ಈತ ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ಸೈನ್ಸ್ ವಿಭಾಗದ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಆಕೆಯ ಸಮೀಪ ಇದ್ದ ಇನ್ನಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿದೆ ಆರೋಪಿ ಮಾಸ್ಕ್, ತಲೆಗೆ ಟೋಪಿ ಹಾಕಿದ್ದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ.
ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಪ್ರಶ್ನೆ ಪತ್ರಿಕೆಗಳ ಬಂಡಲನ್ನು ಕಛೇರಿಯಲ್ಲಿ ಬಿಚ್ಚುತ್ತಿದ್ದ ವೇಳೆ ವಿದ್ಯಾರ್ಥಿಗಳ ಚೀರಾಟ ಕೇಳಿ ಹೊರ ಬಂದಿದ್ದಾರೆ. ಅದಾಗಲೇ ಆ್ಯಸಿಡ್ ಎರಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ವಿದ್ಯಾರ್ಥಿಗಳು ಬೆನ್ನಟ್ಟಿ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಕೇರಳ ಮೂಲದ ಅಬಿನ್ ಎಂದು ಗುರುತಿಸಲಾಗಿದೆ. ಈತ ಕೇರಳದಲ್ಲಿ ಎಂಬಿಎ ಓದುತ್ತಿದ್ದು ಕಡಬಕ್ಕೆ ಬಂದು 17 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ಮಾಡಿದ್ದಾನೆ. ಒಬ್ಬ ವಿದ್ಯಾರ್ಥಿನಿ ಆತನ ಟಾರ್ಗೆಟ್ ಆಗಿತ್ತು. ಜೊತೆಗೆ ಕುಳಿತಿದ್ದವರ ಮೇಲೆಯೂ ಏಸಿಡ್ ಬಿದ್ದಿದೆ. ಒಬ್ಬಳು ವಿದ್ಯಾರ್ಥಿನಿಯ ದೇಹಕ್ಕೆ ಹೆಚ್ಚು ಸುಟ್ಟ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ದ.ಕ. ಎಸ್ಪಿ ರಿಷ್ಯಂತ್ ಸಿಂಗ್ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಮುಖದ ಭಾಗ ಸುಟ್ಟು ಹೋಗಿದೆ. ಒಬ್ಬಳು ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವನ್ ಸೈಡ್ ಪ್ರೀತಿಯ ಕಾರಣಕ್ಕೆ ಏಸಿಡ್ ದಾಳಿ ಮಾಡಿದ್ದಾನೆಂದು ಹೇಳಲಾಗುತ್ತಿದೆ.
Discussion about this post