• About us
  • Contact us
  • Disclaimer
Sunday, September 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

20 ಗಂಟೆ ಅನ್ನ, ನೀರು, ಗಾಳಿ-ಬೆಳಕು ಇಲ್ಲದೇ ಬದುಕಿ ಬಂದ: ಸಾತ್ವಿಕ್ ಆರೋಗ್ಯ ನೋಡಿ ವೈದ್ಯರೇ ಶಾಕ್!

Coastal Times by Coastal Times
April 4, 2024
in ರಾಜ್ಯ
20 ಗಂಟೆ ಅನ್ನ, ನೀರು, ಗಾಳಿ-ಬೆಳಕು ಇಲ್ಲದೇ ಬದುಕಿ ಬಂದ: ಸಾತ್ವಿಕ್ ಆರೋಗ್ಯ ನೋಡಿ ವೈದ್ಯರೇ ಶಾಕ್!
122
VIEWS
WhatsappTelegramShare on FacebookShare on Twitter

ವಿಜಯಪುರ, ಏ 04: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಪುಟ್ಟ ಕಂದಮ್ಮ ಸಾತ್ವಿಕ್  ಬದುಕಿಬಂದಿದೆ. ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ಮತ್ತು ಅಗ್ನಿ ಶಾಮಕ ಸಿಬ್ಬಂದಿ ಸತತ 20 ಗಂಟೆಗಳ ಕಾಲ ಸತತ ತೀವ್ರ ಕಾರ್ಚರಣೆ ನಡೆಸಿ ಸಾತ್ವಿಕ್​​ನನ್ನು ಜೀವಂತವಾಗಿ ಆಚೆ ತಂದಿದ್ದಾರೆ. 20 ಗಮಟೆಗಳ ಕಾಲ ಅನ್ನ, ನೀರು, ಗಾಳಿ, ಬೆಳಕು ಇಲ್ಲದೇ ಎರಡು ವರ್ಷದ ಮಗು ಬದುಕುಳಿದಿದ್ದೇ ಒಂದು ದೊಡ್ಡ ಪವಾಡ ಎಂದು ಸ್ವತಃ ವೈದ್ಯರೇ ಅಚ್ಚರಿಗೊಂಡಿದ್ದಾರೆ. ಇದೊಂದು ವೈದ್ಯಕೀಯ ಕ್ಷೇತ್ರಕ್ಕೆ ಸವಾಲು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮನೆಯ ಪಕ್ಕದಲ್ಲಿಯೇ ತೋಟವಿದ್ದು, ಸತೀಶ್‌ಗೆ 2 ಎಕರೆ 23 ಗುಂಟೆ ಜಮೀನಿದೆ. ತೋಟದಲ್ಲಿ ಲಿಂಬೆ ಬೆಳೆ ಬೆಳೆಯಲಾಗಿದೆ. ಭೀಕರ ಬರಕ್ಕೆ ಲಿಂಬೆ ಬೆಳೆ ಒಣಗುತ್ತಿರುವುದನ್ನು ಕಂಡು ಮಂಗಳವಾರವಷ್ಟೇ ಬೋರ್‌ವೆಲ್ ಕೊರೆಸಲಾಗಿತ್ತು. ಇದನ್ನು 260 ಅಡಿ ಆಳ ಕೊರೆಸಲಾಗಿದೆ. ಆದರೆ ಏರ್‌ಪಾಸ್‌ ಆಗಿದ್ದರಿಂದ ನೀರು ಬಂದಿರಲಿಲ್ಲ. ಹೀಗಾಗಿ ಅದನ್ನು ಮುಚ್ಚದೆ ಹಾಗೆಯೇ ಬಿಟ್ಟಿದ್ದರು. ಬುಧವಾರ ಮನೆಯ ಮುಂದೆ ಆಟವಾಡುತ್ತಿದ್ದ ಮಗು ಕಾಲು ಜಾರಿ ಕೊಳವೆ ಬಾವಿಯಲ್ಲಿ ಬಿದ್ದಿದೆ. ಬಹಳ ಹೊತ್ತಾದರೂ ಮಗು ಕಾಣದಿದ್ದಾಗ ಮನೆಯವರು ಎಲ್ಲ ಕಡೆ ಹುಡುಕಲು ಆರಂಬಿಸಿದರು. ಆಗ ಮಗು ಕೊಳವೆ ಬಾವಿಯಲ್ಲಿ ಆಳುವ ಶಬ್ದ ಕೇಳಿ ಬಂದಿದೆ. ಆತಂಕಗೊಂಡ ಕುಟುಂಬಸ್ಥರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿ, ಮಾಹಿತಿ ನೀಡಿದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಮಗುವಿನ ರಕ್ಷಣಾ ಕಾರ್ಯ ಆರಂಭಿಸಿದರು.

ಸತತ 20 ಗಂಟೆಗಳ ಕಾಲ ಕಾರ್ಚಚರಣೆ ನಡೆಸಿ ಸಾತ್ವಿಕ್​ನನ್ನು ಜೀವಂತವಾಗಿ ಹೊರತಂದು ನೇರವಾಗಿ ಇಂಡಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯ್ತು. ಬಳಿಕ ಇಂಡಿ ತಾಲೂಕು ವೈದ್ಯಾಧಿಕಾರಿ ಅರ್ಚನಾ ಕುಲಕರ್ಣಿ ಸೇರಿದಂತೆ ಅವರ ಸಿಬ್ಬಂದಿ, ಆಕ್ಸಿಜನ್, ಪಲ್ಸ್​ ರೇಟ್ ಸೇರಿದಂತೆ ಮಗುವಿನ ಆರೋಗ್ಯ ಸ್ಥಿತಿಯನ್ನು ಪರಿಶೀಲನೆ ಮಾಡಿದರು. ಬಳಿಕ ಮಗುವಿಗೆ ಏನು ಗಾಯಗಳಾಗಿಲ್ಲ. ಸಾತ್ವಿಕ್ ಅರಾಮಾಗಿದ್ದಾನೆ ಎಂದು ಅರ್ಚನಾ ಕುಲಕರ್ಣಿ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು. ಅಲ್ಲದೇ ಮಗುವಿನ ಆರೋಗ್ಯ ಕಂಡು ವೈದ್ಯರೇ ಶಾಕ್ ಆಗಿದ್ದಾರೆ.

ನಿಜ 20 ಗಂಟೆಗಳ ಕಾಲ ನೀರು, ಅನ್ನ, ಗಾಳಿ-ಬೆಳಕು ಇಲ್ಲದೇ ದೊಡ್ಡವರಿಗೆ ಇರಲು ಆಗುವುದಿಲ್ಲ. ಏನೋ ಸಸ್ತು,  ಅಸ್ವಸ್ಥಗೊಳ್ಳುತ್ತಾರೆ. ಇಂತರದಲ್ಲಿ ಕೇವಲ ಎರಡೇ ಎರಡು ವರ್ಷದ ಮಗು ಸಾತ್ವಿಕ್​, ಬರೋಬ್ಬರಿ ಇಪ್ಪತ್ತು ಗಂಟೆಗಳ ಕಾಲ ನೀರು, ಅನ್ನ, ಗಾಳಿ-ಬೆಳಕು ಇಲ್ಲದೇ ಬದುಕಿ ಬಂದಿರುವುದೇ ವಿಸ್ಮಯ. ಅದರಲ್ಲೂ ಆ ಒಂದು ಚಿಕ್ಕ ಪೈಪಿನೊಳಗೆ ಸ್ವಲ್ಪ ಅಲುಗಾಡಲು ಆಗಲ್ಲ. ಅಂತರದಲ್ಲಿ ಸ್ವಾತ್ವಿಕ್ ಬದುಕಿ ಬಂದಿದ್ದಾನೆ. ಇನ್ನೊಂದು ವಿಶೇಷ ಅಂದ್ರೆ ಸಾತ್ವಿಕ್ ಆರೋಗ್ಯದಲ್ಲಿ ಏನು ವ್ಯತ್ಯಾಸ ಕಂಡುಬಂದಿಲ್ಲ. ಸುಸ್ತು. ಅಸ್ವಸ್ಥತೆ ಬಳಲುತ್ತಿರುವುದು ಕಂಡುಬಂದಿಲ್ಲದಿರುವುದೇ ಒಂದು ವೈದ್ಯರಿಗೆ ಅಚ್ಚರಿಯಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಲಚ್ಯಾನ ಗ್ರಾಮದಲ್ಲಿ 2 ವರ್ಷದ ಪುಟ್ಟ ಕಂದ ಸಾತ್ವಿಕ್ ನಿನ್ನೆ(ಏಪ್ರಿಲ್ 04) ಸಂಜೆ 5.30ರ ಸುಮಾರಿಗೆ ಆಟವಾಡುತ್ತ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ. 16 ಅಡಿ ಆಳದಲ್ಲಿ ಸಿಲುಕಿದ್ದ. ಬಳಿಕ ವಿಷಯ ತಿಳಿಯುತ್ತಿದ್ದಂತೆಯೇ ತಾಲೂಕು ಮತ್ತು ಜಿಲ್ಲಾಡಳಿ ಅಗ್ನಿ ಶಾಮಕ ದಳ, ಪೊಲೀಸ್​ ಜೊತೆ ಘಟನಾ ಸ್ಥಳಕ್ಕೆ ಆಗಮಿಸಿತ್ಉ. ಬಳಿಕ ಎನ್​ಡಿಆರ್​​ಎಫ್ ಹಾಗೂ ಎಸ್​​ಡಿಆರ್​ಎಫ್​​ ಸಿಬ್ಬಂದಿ ಮಗು ರಕ್ಷಣೆಗೆ ಸಮರೋಪಾದಿಯಲ್ಲಿ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿತ್ತು. ಇತ್ತ ಗ್ರಾಮಸ್ಥರು ಮಾತ್ರವಲ್ಲ ಇಡೀ ಕರುನಾಡು ಸಹ ಸಾತ್ವಿಕನಿಗಾಗಿ ಪ್ರಾರ್ಥನೆ ಮಾಡಿತ್ತು. ಅಂತಿಮವಾಗಿ ಸಾತ್ವಿಕ್​ 20 ಗಂಟೆಗಳ ನಂತರ ಸಾವನ್ನು ಗೆದ್ದು ಆಚೆ ಬಂದಿದ್ದಾನೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಹುಜನ ಸಮಾಜ ಪಕ್ಷದ (ಬಿ.ಎಸ್.ಪಿ.) ಅಭ್ಯರ್ಥಿಯಾಗಿ ಕಾಂತಪ್ಪ ನಾಮಪತ್ರ ಸಲ್ಲಿಕೆ

Next Post

ಎಂಸಿಸಿ ಬ್ಯಾಂಕ್ ಗೆ 13.12 ಕೋಟಿ ರೂ. ಲಾಭ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
40
Next Post
ಎಂಸಿಸಿ ಬ್ಯಾಂಕ್ ಗೆ 13.12 ಕೋಟಿ ರೂ. ಲಾಭ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ

ಎಂಸಿಸಿ ಬ್ಯಾಂಕ್ ಗೆ 13.12 ಕೋಟಿ ರೂ. ಲಾಭ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ

Discussion about this post

Recent News

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
72
ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

September 5, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

September 5, 2026
ಮಂಗಳೂರು: ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಖಾಸಗಿ ಬಸ್ ಪಲ್ಟಿ ; ಅಪಾಯದಿಂದ ಪಾರಾದ ಪ್ರಯಾಣಿಕರು

ಮಂಗಳೂರು: ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಖಾಸಗಿ ಬಸ್ ಪಲ್ಟಿ ; ಅಪಾಯದಿಂದ ಪಾರಾದ ಪ್ರಯಾಣಿಕರು

September 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d