• About us
  • Contact us
  • Disclaimer
Wednesday, June 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಿಫ್ಸೆ-ಮಿನ್ನರ್ವ ಕಾಲೇಜಿನಲ್ಲಿ ವಿ.ಟಿ.ಯು (VTU) ಕಾರ್ಯಕ್ರಮಗಳ ಉದ್ಘಾಟನೆ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಸ್ಪೀಕರ್ ಯು.ಟಿ. ಖಾದರ್ ಕರೆ

Coastal Times by Coastal Times
April 4, 2026
in ಕರಾವಳಿ
ಮಿಫ್ಸೆ-ಮಿನ್ನರ್ವ ಕಾಲೇಜಿನಲ್ಲಿ ವಿ.ಟಿ.ಯು (VTU) ಕಾರ್ಯಕ್ರಮಗಳ ಉದ್ಘಾಟನೆ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಸ್ಪೀಕರ್ ಯು.ಟಿ. ಖಾದರ್ ಕರೆ
10
VIEWS
WhatsappTelegramShare on FacebookShare on Twitter

ಮಂಗಳೂರು:‌ ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮಿಫ್ಸೆ (Mifse) ಮಿನ್ನರ್ವ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಸಂಯೋಜಿತ ಕೋರ್ಸ್‌ಗಳ ಭವ್ಯ ಉದ್ಘಾಟನಾ ಸಮಾರಂಭವು ಶನಿವಾರ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಕಾಲೇಜು ಈಗ ಬೆಳಗಾವಿಯ ವಿ.ಟಿ.ಯು ಅಧಿಕೃತ ಸಂಯೋಜನೆಗೆ ಒಳಪಟ್ಟಿದ್ದು, ಈ ಶೈಕ್ಷಣಿಕ ಮೈಲಿಗಲ್ಲನ್ನು ಗಣ್ಯರ ಸಮ್ಮುಖದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಫರೀದ್ ಅವರು, “ವಿದ್ಯಾರ್ಥಿಗಳು ಕೇವಲ ಪದವಿಗಾಗಿ ಓದದೆ, ಬದುಕಿಗೆ ಆಸರೆಯಾಗುವ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಇಂದು ದೊಡ್ಡ ಇಂಜಿನಿಯರಿಂಗ್ ಪದವಿ ಪಡೆದವರು ಉದ್ಯೋಗವಿಲ್ಲದೆ ಅಲೆಯುತ್ತಿದ್ದಾರೆ, ಆದರೆ ಐಟಿಐ ಅಥವಾ ವೃತ್ತಿಪರ ಶಿಕ್ಷಣ ಪಡೆದವರಿಗೆ ತಕ್ಷಣ ಕೆಲಸ ಸಿಗುತ್ತಿದೆ. ಕಂಪೆನಿಗಳಿಗೆ ಇಂದು ಇಂತಹ ನಿಪುಣ ವಿದ್ಯಾರ್ಥಿಗಳ ಅಗತ್ಯವಿದೆ,” ಎಂದು ಅಭಿಪ್ರಾಯಪಟ್ಟರು.

ಸಂಸ್ಥೆಯ ಬೆಳವಣಿಗೆಯನ್ನು ಶ್ಲಾಘಿಸಿದ ಸಭಾಪತಿಗಳು, “ವಿನೋದ್ ಕೆ. ಜಾನ್ ಅವರು 19 ವರ್ಷಗಳ ಹಿಂದೆಯೇ ಇಂತಹದೊಂದು ಕಾಲೇಜಿನ ಅಗತ್ಯವನ್ನು ಮನಗಂಡು ದೂರದೃಷ್ಟಿಯಿಂದ ಆರಂಭಿಸಿದ್ದರು. ಇಂದು ಈ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಷಯ. ಬಡತನ ಹೋಗಲಾಡಿಸಿ, ವಿದ್ಯಾರ್ಥಿಗಳು ಸ್ವಾಭಿಮಾನದಿಂದ ಬದುಕುವಂತೆ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ,” ಎಂದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಭಾಷಾ ಪ್ರೌಢಿಮೆಯ ಬಗ್ಗೆ ಕಿವಿಮಾತು ಹೇಳಿದ ಖಾದರ್ ಅವರು, “ಕೇವಲ ಇಂಗ್ಲಿಷ್ ಒಂದನ್ನೇ ಅವಲಂಬಿಸಬೇಡಿ. ಜೀವನೋಪಾಯಕ್ಕಾಗಿ ಬೇಕಾದ ಎಲ್ಲಾ ಸ್ಥಳೀಯ ಭಾಷೆಗಳನ್ನು ಕಲಿಯಿರಿ. ಭಾಷೆಯ ಮೇಲೆ ಅಸಡ್ಡೆ ಇರಬಾರದು, ಭಾಷಾ ಜ್ಞಾನವಿದ್ದರೆ ಜಗತ್ತಿನ ಯಾವುದೇ ಮೂಲೆಯಲ್ಲೂ ನೀವು ಯಶಸ್ವಿಯಾಗಬಹುದು,” ಎಂದು ತಿಳಿಸಿದರು.

ಕಾರ್ಯಕ್ರಮದ ಗೌರವ ಅತಿಥಿಯಾಗಿ ವಿ.ಟಿ.ಯು ಕುಲಪತಿ ಡಾ. ಎಸ್. ವಿದ್ಯಾಶಂಕರ್ ಭಾಗವಹಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ, ಕೆ.ಪಿ.ಟಿ ಪ್ರಾಂಶುಪಾಲ ಪ್ರೊ. ಹರೀಶ ಶೆಟ್ಟಿ, ಮತ್ತು ಕೆ.ಎಸ್.ಒ.ಯು ಮೈಸೂರು ಇದರ ಮಾಜಿ ಶೈಕ್ಷಣಿಕ ಡೀನ್ ಪ್ರೊ. ಜಗದೀಶ ಅವರು ಪಾಲ್ಗೊಂಡು ಕಾರ್ಯಕ್ರಮದ ಚಂದವನ್ನು ಹೆಚ್ಚಿಸಿದರು.

ಸಂಸ್ಥೆಯ ಅಧ್ಯಕ್ಷ ವಿನೋದ್ ಕೆ. ಜಾನ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಮನೋಜ್ ಪಿ.ವಿ., ಪ್ರಾಂಶುಪಾಲ ಯಶವಂತ್ ಗೋಪಾಲ್ ಶೆಟ್ಟಿ, ಮತ್ತು ಟ್ರಸ್ಟಿ ಮ್ಯಾಥ್ಯೂ ಕೆ.ವಿ. ಉಪಸ್ಥಿತರಿದ್ದರು. ಇಡೀ ಕಾರ್ಯಕ್ರಮವನ್ನು ಹರ್ಷಿತಾ ನಿರೂಪಿಸಿದರು.

ಮಂಗಳೂರು ಮತ್ತು ಸುತ್ತಮುತ್ತಲ ವಿದ್ಯಾರ್ಥಿಗಳಿಗೆ ಉತ್ತಮ ತಾಂತ್ರಿಕ ಶಿಕ್ಷಣ ನೀಡುವ ಉದ್ದೇಶದಿಂದ ಎನ್.ಎಚ್-75ರಲ್ಲಿರುವ ಮಿನ್ನರ್ವ ಕಾಲೇಜಿನಲ್ಲಿ ಪ್ರಾರಂಭಿಸಲಾಗಿರುವ ಈ ವಿ.ಟಿ.ಯು ಸಂಯೋಜಿತ ಕೋರ್ಸ್‌ಗಳು, ಈ ಭಾಗದ ಶೈಕ್ಷಣಿಕ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತರಲಿವೆ ಎಂದು ಆಡಳಿತ ಮಂಡಳಿ ವಿಶ್ವಾಸ ವ್ಯಕ್ತಪಡಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಗುಡ್ ಫ್ರೈಡೇ’ ಆಚರಣೆ

Next Post

ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

Related Posts

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ
ಕರಾವಳಿ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
66
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ
ಕರಾವಳಿ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
23
Next Post
ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

Discussion about this post

Recent News

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
66
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d