ಧಾರವಾಡ, ಮೇ 04: ಹುಬ್ಬಳ್ಳಿಯ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸದ್ದಾಂ ಹುಸೇನ್ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದನು. ಈ ವೇಳೆ ಪೊಲೀಸರು ಆರೋಪಿ ಸದ್ದಾಂ ಹುಸೇನ್ ಎಡಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಹಲ್ಲೆ ಮಾಡಿದ್ದರಿಂದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್‌ಟೇಬಲ್ ಅರುಣ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಖಲಿಸಲಾಗಿದೆ. ಆರೋಪಿ ಸದ್ದಾಂ ಹುಸೇನ್ನನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ನವನಗರ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ, ಆರೋಪಿ ಸದ್ದಾಂ ಹುಸೇನ್ ಪರಾರಿಯಾಗಿದ್ದನು. ಪೊಲೀಸರು ಕಾರ್ಯಾಚರಣೆ ಆರೋಪಿಯನ್ನು ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಆರೋಪಿ ಸದ್ದಾಂ ಹುಸೇನ್ ಪೊಲೀಸ್ ವಾಹನ ಹತ್ತುವಾಗ ಅಧಿಕಾರಿಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೆ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ಆರೋಪಿಯ ಎಡಗಾಲಿಗೆ ಗುಂಡು ಹಾರಿಸಿದ್ದಾರೆ.
ಗರ್ಭಿಣಿಯಾದ ಬಾಲಕಿ : ಆರೋಪಿ ಸದ್ದಾಂ ಹುಸೇನ್ ಲಿಂಬುವಾಲೆ ಹುಬ್ಬಳ್ಳಿಯ ಈಶ್ವರನಗರದವನು ಎಂದು ಗುರುತಿಸಲಾಗಿದೆ. ಅಪ್ರಾಪ್ತ ಜತೆ ಸಲುಗೆ ಬೆಳೆಸಿ, ಪ್ರೀತಿಸುವಂತೆ ನಂಬಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಮನೆಯಲ್ಲಿ ಹೇಳಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಕಳೆದ ಮೂರ್ನಾಲ್ಕು ದಿನದಿಂದ ಬಾಲಕಿ ವಾಂತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಿದ್ದರು. ಆದರೂ ವಾಂತಿ ಕಡಿಮೆಯಾಗದಿ ದ್ದಾಗ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆ ವೇಳೆ ಬಾಲಕಿ ವಿಚಾರಿಸಿದಾಗ ಸದ್ದಾಂ ಹುಸೇನ್ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಪೋಷಕರು ದೂರು ದಾಖಲಿಸಿದ್ದಾರೆ.
ಆರೋಪಿ ಸದ್ದಾಂ ಹುಸೇನ್ ವಿರುದ್ಧ ಐಪಿಸಿ 376, 506, ಜಾತಿ ನಿಂದನೆ ಮತ್ತು ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ಚಿಕಿತ್ಸೆಗಾಗಿ ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಶುಕ್ರವಾರ ಸಂಜೆ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದವು.
Discover more from Coastal Times Kannada
Subscribe to get the latest posts sent to your email.
Discussion about this post