ಬೆಂಗಳೂರು, ಮೇ. 04: ದೇಶದ ಗಮನವನ್ನೇ ತನ್ನತ್ತ ಸೆಳೆದಿರುವ ಹಾಸನದ ಲಯಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೊನೆಗೂ ಚೇತರಿಕೆ ಕಂಡು ಬಂದಿದೆ. ತಮ್ಮ ಮಗ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಜೊತೆಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.
ಲಯಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಅವರಿಗೆ ಜನಪ್ರತಿನಿಧಿ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಜಾಮೀನು ಸಿಗದ ಬೆನ್ನಲ್ಲೇ ಅವರನ್ನು ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ. ಬೆಂಗಳೂರಿನಲ್ಲಿರುವ ಮಾಜಿ ಪ್ರಧಾನಿ ಮತ್ತು ಅವರ ತಂದೆ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಎಚ್ ಡಿ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಕಾಣಿಸಿಕೊಂಡಿರುವ ಅನೇಕ ಮಹಿಳೆಯರಲ್ಲಿ ಒಬ್ಬರಾಗಿದ್ದ ತನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು 20 ವರ್ಷದ ವ್ಯಕ್ತಿಯೊಬ್ಬರು ಮೈಸೂರಿನಲ್ಲಿ ಕೆಆರ್ ನಗರ ಠಾಣೆಯಲ್ಲಿ ಪೊಲೀಸ್ ದೂರು ದಾಖಲಿಸಿದ್ದಾರೆ. ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ.
ಹೊಳೆನರಸೀಪುರದಲ್ಲಿ ಗದ್ದಲ : ಇತ್ತ, ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯ ಭಾಗವಾಗಿ ವಿಶೇಷ ತನಿಖಾ ತಂಡ ಹೊಳೆನರಸೀಪುರದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿತ್ತು. ಈ ವೇಳೆ ಶಾಸಕರ ಬೆಂಬಲಿಗರು ಅವರ ನಿವಾಸಕ್ಕೆ ನುಗ್ಗಿದ್ದರಿಂದ ಕೆಲ ಕಾಲ ಗೊಂದಲ ಉಂಟಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಮತ್ತು ಎಚ್ ಡಿ ರೇವಣ್ಣ ವಿರುದ್ಧ ಎಸ್‌ಐಟಿ ಶನಿವಾರ ಎರಡನೇ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ಇದರ ಜೊತೆಗೆ ಕೇಂದ್ರ ತನಿಖಾ ದಳವು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದೆ.
ಸತೀಶ್ ಬಾಬುಗೆ 14 ದಿನಗಳ ನ್ಯಾಯಾಂಗ ಬಂಧನ : ಎಚ್ ಡಿ ರೇವಣ್ಣ ಅವರ ಸಹಚರರು ತಮ್ಮ ತಾಯಿಯನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ 20 ವರ್ಷದ ಯುವಕನೊಬ್ಬ ಪೊಲೀಸ್ ದೂರು ದಾಖಲಿಸಿದ್ದಾರೆ. ಮಹಿಳೆಯನ್ನು ಹುಣಸೂರಿನಲ್ಲಿ ಪತ್ತೆಹಚ್ಚಲಾಗಿದೆ ಮತ್ತು ಪ್ರಸ್ತುತ, ಅವರು ಮಹಿಳೆಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಪಹರಣ ಪ್ರಕರಣದ ಆರೋಪಿ ಸತೀಶ್ ಬಾಬು ಅಲಿಯಾಸ್ ಸತೀಶ್ ಬಾಬಣ್ಣನನ್ನು ಪೊಲೀಸರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Like this:
Like Loading...
Related
Discover more from Coastal Times Kannada
Subscribe to get the latest posts sent to your email.
Discussion about this post