ಬೆಳ್ತಂಗಡಿ : ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಮುಜರಾಯಿ ಇಲಾಖೆಯ ಆಡಳಿತಕ್ಕೊಳಪಟ್ಟ ಶ್ರೀ ಮಹಾಗಣಪತಿ ದೇವಸ್ಥಾನ ಸೌತಡ್ಕದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣಾ ವೇದಿಕೆ ದೊಡ್ಡ ಫಲಕವೊಂದನ್ನು ಅಳವಡಿಸಿ ವಿವಾದಕ್ಕೆ ಎಡೆಮಾಡಿಕೊಟ್ಟಿವೆ.
ಹಿಂದೂಗಳ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯಕ್ಷೇತ್ರ ಸೌತಡ್ಕದಲ್ಲಿ ಅನ್ಯ ಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕ್ರತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರ ಜನರ ಆಟೋ ಮತ್ತು ಟ್ಯಾಕ್ಸಿ ಇನ್ನಿತರೆ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಬರೆದು ಫಲಕ ಹಾಕಲಾಗಿದೆ.
ಈ ಬೋರ್ಡ್ ಫೋಟೋವೀಗ ಎಲ್ಲ ಕಡೆಗಳಲ್ಲಿ ವೈರಲ್ ಆಗುತ್ತಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ದೇವಾಲಯದಲ್ಲಿ ಈ ರೀತಿ ಬೋರ್ಡ್ ಅಳವಡಿಸಿರುವುದು ತಪ್ಪು. ಹಾಗಾಗಿ, ತಕ್ಷಣ ಅದನ್ನು ತೆರವುಗೊಳಿಸಬೇಕು ಎಂದು ಹಲವರು ಆಗ್ರಹಿಸುತ್ತಿದ್ದಾರೆ.
ಇತ್ತೀಚೆಗೆ ಸೌತಡ್ಕಕ್ಕೆ ಬಂದಿದ್ದ ಯುವತಿಯೊಬ್ಬಳನ್ನು ಸ್ಥಳೀಯ ಆಟೋ ಚಾಲಕನೊಬ್ಬ ಪ್ರೀತಿಯ ಬಲೆಗೆ ಬೀಳಿಸಿ ಮದುವೆಯಾಗಿದ್ದಾನೆ ಎನ್ನುವ ಸುದ್ದಿ ಹರಡಿತ್ತು. ಇದೇ ವಿಚಾರವನ್ನು ಮುಂದಿಟ್ಟು ಹಿಂದು ಸಂಘಟನೆಗಳು ಹಿಂದುಯೇತರ ವ್ಯಕ್ತಿಗಳು ಆಟೋ, ಟ್ಯಾಕ್ಸಿ ಮಾಡಬಾರದು ಎಂದು ಹೊಸ ಅಭಿಯಾನ ಶುರು ಮಾಡಿದ್ದಾರೆ. ಲವ್ ಜಿಹಾದ್ ಕೃತ್ಯದ ನೆಪದಲ್ಲಿ ಈ ರೂಪದಲ್ಲಿ ಪ್ರತೀಕಾರ ತೀರಿಸಲು ಹಿಂದು ಸಂಘಟನೆ ಕಾರ್ಯಕರ್ತರು ಹೊರಟಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post