ಉಳ್ಳಾಲ, ಜೂ 04 : ಅಕಾಲಿಕವಾಗಿ ಸಾವನ್ನಪ್ಪಿದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರ ಅಂತಿಮಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಶವಕ್ಕೆ ಹೆಗಲುಕೊಟ್ಟು ಮಾನವೀಯತೆ ಮೆರೆದರು.
ಮುಡಿಪು ಮಿತ್ತಕೋಡಿ ನಿವಾಸಿ ಶರತ್ ಕಾಜವ ಇಂದು ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಸಾವನ್ನಪ್ಪಿದ್ದರು. ವಿಷಯ ತಿಳಿದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಿ ತಕ್ಷಣವೇ ಮಿತ್ತಕೋಡಿಯ ಶರತ್ ಕಾಜವ ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ. ಕುಟುಂಬ, ಸಂಬಂಧಿಕರಿಗೆ ಧೈರ್ಯ ತುಂಬಿದ ಅವರು ಅಂತಿಮ ವಿಧಿ ವಿದಾನದಲ್ಲಿ ಪಾಲ್ಗೊಂಡದ್ದಲ್ಲದೆ ಶವದ ಚಟ್ಟಕ್ಕೂ ಹೆಗಲು ಕೊಟ್ಟು ಅಂತಿಮ ಯಾತ್ರೆಯಲ್ಲಿ ಸಾಗಿದ್ದಾರೆ.
ನರಿಂಗಾನ ಕಂಬಳದ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಸಹೋದರ, ಪ್ರಗತಿಪರ ಕೃಷಿಕ ವೆಂಕಪ್ಪ ಕಾಜವರ ಪುತ್ರ. ಕಂಬಳ ಸಮಿತಿಯ ಸದಸ್ಯರೂ ಆಗಿದ್ದ ಶರತ್ ಕಾಜವ ಮಿತ್ತಕೋಡಿ ಕಂಬಳದ ಯಶಸ್ಸಿಗಾಗಿ ಹಲವು ವಾರಗಳ ಕಾಲ ದುಡಿದಿದ್ದರು.ತಾಯಿಯ ಅನಾರೋಗ್ಯವಿದ್ದಾಗಲೂ ಕಂಬಳದ ಕರೆಯಲ್ಲಿ ಆಗಬೇಕಾದ ವ್ಯವಸ್ಥೆ ಬಗ್ಗೆ ತುಂಬ ಕಾಳಜಿ ವಹಿಸಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಪತ್ನಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post