ಮಂಗಳೂರು: ಕರಾವಳಿಯಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್ ನ ಪದ್ಮರಾಜ್ ಅವರಿಗಂತ 138288 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಹಿಂದುತ್ವಕ್ಕೆ ಬದ್ಧತೆ ಇಟ್ಟುಕೊಂಡು, ಅಭಿವೃದ್ಧಿಯನ್ನು ಆದ್ಯತೆಯಾಗಿಸಿಕೊಂಡು ಕಾರ್ಯಕರ್ತರ ಸಹಕಾರ ಪಡೆದು, ಹಿರಿಯರ ಮಾರ್ಗದರ್ಶನ, ನರೇಂದ್ರ ಮೋದಿಯವರ ಪ್ರೇರಣೆ ಹಾಗೂ ಮಾರ್ಗದರ್ಶನದೊಂದಿಗೆ ಜಿಲ್ಲೆಯನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲು ಪೂರ್ಣ ಶ್ರಮ ವಹಿಸುವುದಾಗಿ ದ.ಕ. ಜಿಲ್ಲೆಯ ಲೋಕಸಭೆಯ ವಿಜೇತ ಅಭ್ಯರ್ಥಿ ಬ್ರಿಜೇಶ್ ಚೌಟ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ತನ್ನ ಗೆಲುವು ದ.ಕ. ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಗೆಲುವು, ಸಂಘಟನೆ, ಹಿಂದುತ್ವದ ಗೆಲುವಾಗಿದೆ ಎಂದು ಹೇಳಿರುವ ಅವರು, ಸತ್ಯ ಧರ್ಮ, ನ್ಯಾಯದ ಆಧಾರದಲ್ಲಿ ಈ ಚುನಾವಣೆಯನ್ನು ಎದುರಿಸಿದ್ದೆವು. ತುಳುನಾಡಿನ ಮಣ್ಣು ಸತ್ಯ ಧರ್ಮ ನ್ಯಾಯಕ್ಕೆ ಯಾವತ್ತೂ ಗಟ್ಟಿಯಾಗಿ ನಿಂತಿದೆ. ಸತ್ಯ ಧರ್ಮದ ನ್ಯಾಯದ ಜಯ ಆಗಿದೆ ಎಂದು ಭಾವಿಸುತ್ತೇನೆ ಎಂದು ಹೇಳಿದರು.
Discover more from Coastal Times Kannada
Subscribe to get the latest posts sent to your email.
Discussion about this post