ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ನಾಲ್ಕು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್ ಪೌಲ್ ರನ್ನು ಇಂದು ಸಿಐಡಿ ಅಧಿಕೃತವಾಗಿ ಬಂಧಿಸಿದೆ. ಅಮೃತ್ ಪೌಲ್ 25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂಪಾಯಿ ಡೀಲ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸಲು ಅವರನ್ನು ಸಿಐಡಿ ಬಂಧಿಸಿದೆ.
545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಅಮೃತ್ ಪೌಲ್ ಅವರಿಗೆ ಹಲವು ದೂರುಗಳು ಬಂದಿದ್ದು ಇದನ್ನು ಅವರು ನಿರ್ಲಕ್ಷಿಸಿದ್ದರು ಎಂಬ ಆರೋಪ ಸಹ ಅವರ ವಿರುದ್ಧ ಕೇಳಿಬಂದಿತ್ತು. ಅಕ್ರಮ ಬಯಲಿಗೆ ಬರುತ್ತಿದ್ದಂತೆ ಅಮೃತ್ ಪೌಲ್ ಅವರ ವರ್ಗಾವಣೆಗೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವರ್ಗಾಯಿಸಲಾಗಿತ್ತು. 545 ಪಿಎಸ್‌ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‌ಪಿ ಹಾಗೂ ಎಫ್‌ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಪೌಲ್ ಬಂಧನ ಬೆನ್ನಲ್ಲೇ ರಾಜ್ಯದ ಇತರೇ ಪ್ರಭಾವಿಗಳಿಗೂ ನಡುಕ ಉಂಟಾಗಿದೆ. ರಾಜಕೀಯ ನಾಯಕರಿಗೂ ತಮ್ಮ ಹೆಸರು ಬರುತ್ತಾ ಅನ್ನುವ ಆತಂಕ ಶುರುವಾಗಿದೆ.
Discover more from Coastal Times Kannada
Subscribe to get the latest posts sent to your email.








Discussion about this post