ಮಂಗಳೂರು, ಜುಲೈ 04: ಕರಾವಳಿಯಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಸ್ಥಾಪಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಈ ಸಂಸ್ಥೆ ಈಗಾಗಲೇ ಫುಲ್ ಆಕ್ಟಿವ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕುವವರನ್ನು ಬೆನ್ನಟ್ಟಿ ಬೆಂಡೆತ್ತುತ್ತಿದೆ. “ರಕ್ತಕ್ಕೆ ರಕ್ತವೇ ಬೇಕು” ಎಂದು ಸ್ಟೇಟಸ್ ಹಾಕಿದವನು ಬಂಧಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳ, ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್ ಎಂಬಾತನನ್ನು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಬಂಧಿಸಿದೆ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು ಬೇಡ ರಕ್ತಕ್ಕೆ ರಕ್ತವೇ ಉತ್ತರವಾಗಬೇಕು”. “ಜೀವಕ್ಕೆ ಜೀವನೇ ಬೇಕು” ಎಂದು ಮಾರಕಾಯುಧಗಳ ಚಿಹ್ನೆ ಬಳಸಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ.
Discover more from Coastal Times Kannada
Subscribe to get the latest posts sent to your email.
Discussion about this post