ಮಂಗಳೂರು, ಜುಲೈ 4: ‘ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆ ಪ್ರಕರಣಗಳಲ್ಲಿ ಆರೋಪಿಗಳ ವಹಿವಾಟಿಗೆಬ ನೆರವಾಗಲು ಅಮಾಯಕರನ್ನು ನಂಬಿಸಿ ಕಮಿಷನ್ ಮೇರೆಗೆ ಬ್ಯಾಂಕ್ ಖಾತೆಗಳನ್ನು ಮಾಡಿಸಿಕೊಡುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಬಂಧಿತ ಸೈಬರ್ ವಂಚಕ.
ಆರೋಪಿಯು ಅ.ಕ್ರ. 104-2025, U/S 66(C), 66(D) IT Act -2008 ಮತ್ತು ಕಲಂ: 126 (2), 308(6), 318(4), 319(2), 3(5) BNS (ಡಿಜಿಟಲ್ ಅರೆಸ್ಟ್ ಪ್ರಕರಣ) ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ. ಆರೋಪಿಯು ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ಸೈಬರ್ ವಂಚನೆಯ ಹಣದ ವಹಿವಾಟಿಗೆ ಸಹಕಾರ ನೀಡಿ ಅದರ ಮೂಲಕ ಕೋಟ್ಯಂತರ ರೂಪಾಯಿ ಅಕ್ರಮ ಹಣದಹ ವಹಿವಾಟು ನಡೆಸಲು ಪರೋಕ್ಷವಾಗಿ ಸಹಕರಿಸುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
ಈತನ ವಿರುದ್ಧ ಈಗಾಗಲೇ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಂದು ದರೋಡೆ ಪ್ರಕರಣ ಸೇರಿದಂತೆ ರಾಜ್ಯದ ಬೇರೆ ಬೇರೆ ಠಾಣೆಗಳಲ್ಲಿ ಒಟ್ಟು 4 ಗಂಭೀರ ಪ್ರಕರಣಗಳು ದಾಖಲಾಗಿವೆ. ವಾರಂಟ್ ಜಾರಿಯಾಗಿದ್ದರೂ ಪೊಲೀಸರ ಕೈಗೆ ಸಿಗದೆ ಈತ ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ. ಇದೀಗ ಸೈಬರ್ ಸೆಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಜುಬೈರ್ ನನ್ನು ಜೈಲಿಗಟ್ಟಿದ್ದಾರೆ.


Discover more from Coastal Times Kannada
Subscribe to get the latest posts sent to your email.







Discussion about this post