ಬೆಂಗಳೂರು : ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕದ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಇಂದು(ಬುಧವಾರ, ಆಗಸ್ಟ್ 4) ರಾಜ ಭವನದಲ್ಲಿ ಸರಳ ಸಮಾರಂಭದಲ್ಲಿ ನಡೆಯಿತು.
ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರಿಂದ ಒಟ್ಟು 29 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವುದರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಸಚಿವರಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರವ ಪಟ್ಟಿ :
ಕೋಟಾ ಶ್ರೀನಿವಾಸ ಪೂಜಾರಿ –ಬಿಲ್ಲವ ಸಮುದಾಯಕ್ಕೆ ಸೇರಿರುವ ಶಾಸಕ(MLC) ಕೋಟಾ ಶ್ರೀನಿವಾಸ ಪೂಜಾರಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಸುನೀಲ್ ಕುಮಾರ್ –ಕಾರ್ಕಳ ಕ್ಷೇತ್ರದ ದಲಿತ ಸಮುದಾಯಕ್ಕೆ ಸೇರಿರುವ ವಿ ಸುನಿಲ್ ಕುಮಾರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಎಸ್ ಅಂಗಾರ – ಸುಳ್ಯ ಕ್ಷೇತ್ರದ ದಲಿತ ಸಮುದಾಯಕ್ಕೆ ಸೇರಿರುವ ಶಾಸಕ ಅಂಗಾರ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಕೆ.ಎಸ್. ಈಶ್ವರಪ್ಪ – ಶಿವಮೊಗ್ಗ ನಗರ ಕ್ಷೇತ್ರದ ಕುರುಬ ಸಮುದಾಯಕ್ಕೆ ಸೇರಿರುವ ಶಾಸಕ ಕೆಎಸ್ ಈಶ್ವರಪ್ಪ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಆರ್.ಅಶೋಕ್- ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಆರ್ ಅಶೋಕ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ವಿ ಸೋಮಣ್ಣ – ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ವಿ ಸೋಮಣ್ಣ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಡಾ.ಸಿ.ಎನ್.ಅಶ್ವತ್ಥ ನಾರಾಯಣ –ಮಲ್ಲೇಶ್ವರ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಅಶ್ವಥ್ ನಾರಾಯಣ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಉಮೇಶ್ ಕತ್ತಿ- ಹುಕ್ಕೇರಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಉಮೇಶ್ ಕತ್ತಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಎಸ್.ಟಿ.ಸೋಮಶೇಖರ್- ಯಶವಂತಪುರ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಎಸ್. ಟಿ ಸೋಮಶೇಖರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು
ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಡಾ. ಸುಧಾಕರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಸಿ.ಸಿ.ಪಾಟೀಲ್ – ನರಗುಂದ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಸಿ. ಸಿ ಪಾಟೀಲ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಬೈರತಿ ಬಸವರಾಜ – ಕೆ. ಆರ್ ಪುರ ಕ್ಷೇತ್ರದ ಕುರುಬ ಸಮುದಾಯಕ್ಕೆ ಸೇರಿರುವ ಶಾಸಕ ಬೈರತಿ ಬಸವರಾಜು ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಮುರುಗೇಶ್ ನಿರಾಣಿ – ಬೀಳಗಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಮುರುಗೇಶ್ ನಿರಾಣಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ರೈತರು, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಶಿವರಾಂ ಹೆಬ್ಬಾರ್ - ಯಲ್ಲಾಪುರ ಕ್ಷೇತ್ರದ ಬ್ರಾಹ್ಮಣ ಸಮುದಾಯಕ್ಕೆ ಸೇರಿರುವ ಶಾಸಕ ಅರೆಬೈಲ್ ಶಿವರಾಂ ಹೆಬ್ಬಾರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಶಶಿಕಲಾ ಜೊಲ್ಲೆ – ನಿಪ್ಪಾಣಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕಿ ಶಶಿಕಲಾ ಜೊಲ್ಲೆ ಅವರು ಬೊಮ್ಮಾಯಿ ಸಂಪುಟದ ಸಚಿವೆಯಾಗಿ ದೇವರ ಹಾಗೂ ಕ್ಷೇತ್ರದ ಜನರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಕೆಸಿ ನಾರಾಯಣಗೌಡ – ಕೆ. ಆರ್ ಪೇಟೆ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಕೆ. ಸಿ ನಾರಾಯಣ ಗೌಡ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಅರಗ ಜ್ಞಾನೇಂದ್ರ – ತೀರ್ಥಹಳ್ಳಿ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಆರಗ ಜ್ಞಾನೇಂದ್ರ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಬಿ.ಶ್ರೀ ರಾಮುಲು –ಮೊಳಕಾಲ್ಮೂರು ಕ್ಷೇತ್ರದ ವಾಲ್ಮೀಕಿ ಸಮುದಾಯಕ್ಕೆ ಸೇರಿರುವ ಶಾಸಕ ಬಿ ಶ್ರೀರಾಮುಲು ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು
ಗೋವಿಂದ ಕಾರಜೋಳ- ಮುಧೋಳ ಕ್ಷೇತ್ರದ ಪರಿಶಿಷ್ಟ ಜಾತಿಗೆ ಸೇರಿರುವ ಶಾಸಕ ಗೋವಿಂದ ಕಾರಜೋಳ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.ಮುಧೋಳ
ಮುನಿರತ್ನ - ರಾಜ ರಾಜೇಶ್ವರಿ ನಗರ ಕ್ಷೇತ್ರದ ನಾಯ್ಡು ಸಮುದಾಯಕ್ಕೆ ಸೇರಿರುವ ಮುನಿರತ್ನಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಎಂ.ಟಿ.ಬಿ ನಾಗರಾಜ್ – ಎಂಎಲ್‌ಸಿ ನಾಗರಾಜ್ ಎಂ. ಟಿ.ಬಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಗೋಪಾಲಯ್ಯ – ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಶಾಸಕ ಕೆ ಗೋಪಾಲಯ್ಯ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಮಾಧುಸ್ವಾಮಿ – ಚಿಕ್ಕನಾಯಕನಹಳ್ಳಿ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಾಸಕ ಜೆ.ಸಿ ಮಾಧುಸ್ವಾಮಿ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಹಾಲಪ್ಪ ಆಚಾರ್ – ಯಲಬುರ್ಗಿ ಕ್ಷೇತ್ರದ ರೆಡ್ಡಿ ಸಮುದಾಯಕ್ಕೆ ಸೇರಿರುವ ಹಾಲಪ್ಪ ಆಚಾರ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಶಂಕರ್ ಪಾಟೀಲ್ ಮುನೇನಕೊಪ್ಪ – ನವಲಗುಂದ ಕ್ಷೇತ್ರದ ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಂಕರ್ ಪಾಟೀಲ್ ಮುನೇನಕೊಪ್ಪಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ, ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಭು ಚೌವ್ಹಾಣ್ – ಔರಾದ್ ಕ್ಷೇತ್ರದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿರುವ ಶಾಸಕ ಪ್ರಭು ಚೌವಾಣ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಆನಂದ್ ಸಿಂಗ್ – ಹೊಸಪೇಟೆ ಕ್ಷೇತ್ರದ ರಜಪೂತ್ ಸಮುದಾಯಕ್ಕೆ ಸೇರಿರುವ ಶಾಸಕ ಆನಂದ್ ಸಿಂಗ್ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ವಿಜಯನಗರ ಪಂಪಾ ವಿರುಪಾಕ್ಷ ತಾಯಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಬಿ.ಸಿ.ನಾಗೇಶ್ – ತಿಪಟೂರು ಕ್ಷೇತ್ರದ ಬ್ರಾಹ್ಮಣ ಸಮುದಾಯಕ್ಕೆ ಸೇರಿರುವ ಬಿ.ಸಿ ನಾಗೇಶ್ ಅವರು ಬೊಮ್ಮಾಯಿ ಸಂಪುಟದ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಇನ್ನು, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್ ಅವರನ್ನು ಒಳಗೊಂಡು ಹಲವು ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post