ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಈಗ ಇರುವ ರಾತ್ರಿ ಸಂಚಾರ ನಿರ್ಬಂಧವನ್ನು ಹಂತ ಹಂತವಾಗಿ ಸಡಿಲಿಸಲು ಯೋಚಿಸಲಾಗಿದೆ. ಇದೇ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂಬದಿಯಲ್ಲಿ ಪುರುಷರ ಪ್ರಯಾಣಕ್ಕೆ ನಿರ್ಬಂಧ ವಿಧಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಹಿಂಬದಿ ಪುರುಷ ಸವಾರರಿಗೆ ನಿರ್ಬಂಧ: ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಸರಣಿ ಹತ್ಯೆ ಸಂಬಂಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ನೈಟ್ ಕರ್ಫ್ಯೂ ಇದೆ. ಇದು ಕೊನೆಗೊಂಡ ಬಳಿಕ ರಾತ್ರಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಹಿಂಬದಿ ಯುವ ಪುರುಷ ಸವಾರರಿಗೆ ನಿರ್ಬಂಧ ಹೇರಲಾಗುವುದು. ರಾತ್ರಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪ್ರಯಾಣಿಸುವ ಪುರುಷ ಸವಾರರಿಗೆ ನಿರ್ಬಂಧ ಆದೇಶವು ಮೇ 5ರಿಂದ ಮೇ 8ರವರೆಗೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು, ಮಹಿಳೆಯರು, 18 ವರ್ಷದೊಳಗಿನ ಮಕ್ಕಳನ್ನು ಹೊರತುಪಡಿಸಿ ಯಾರೂ ಕೂಡ ಓಡಾಡುವಂತಿಲ್ಲ. ಎಲ್ಲಾ ಮಾದರಿಯ ದ್ವಿಚಕ್ರ ವಾಹನಕ್ಕೂ ಕೂಡ ಈ ಆದೇಶ ಅನ್ವಯವಾಗಲಿದೆ. ಮಹಿಳೆಯರು, ಮಕ್ಕಳು ಮತ್ತು ಹಿರಿಯರಿಗೆ ಇದರಿಂದ ವಿನಾಯಿತಿ ನೀಡಲಾಗುವುದು. ಈ ರೀತಿ ಹಿಂದೆ ಕೇರಳದ ವಯನಾಡಿನಲ್ಲಿ ಮಾಡಲಾಗಿತ್ತು. ಅಲ್ಲಿ ಎಲ್ಲಾ ಪುರುಷ ಸವಾರರಿಗೆ ನಿರ್ಬಂಧ ಹೇರಲಾಗಿತ್ತು. ಇಲ್ಲಿ ಹಿಂಬದಿ ಸಂಚರಿಸುವ ಪುರುಷ ಸವಾರರಿಗೆ ಮಾತ್ರ ನಿರ್ಬಂಧ ಹೇಳಲಾಗುತ್ತದೆ ಎಂದರು. ಇನ್ನೂ ಕೇರಳ ಗಡಿಯಲ್ಲಿ ನಿಗಾ ಇಡುವ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವ, ಡಿಜಿ ಅವರು ಸಲಹೆ ನೀಡಿದ್ದು, ಅದರಂತೆ ಜಿಲ್ಲೆಯ 18 ಕಡೆಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಅಲ್ಲಿ ಸಿಸಿಟಿವಿ ಅಳವಡಿಸಿ, ಕೆಎಸ್ಆರ್ಪಿ ಸಿಬ್ಬಂದಿ ನಿಯೋಜಿಸಿ ನಿಗಾ ಇಡಲಾಗುವುದು. ಇದು ಇನ್ನೂ ಒಂದು ವರ್ಷ ಇರಲಿದೆ ಎಂದರು.
Discover more from Coastal Times Kannada
Subscribe to get the latest posts sent to your email.







Discussion about this post