• About us
  • Contact us
  • Disclaimer
Thursday, September 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿ ವಿಕೃತಿ ಮೆರೆದ ಪತಿ

Coastal Times by Coastal Times
August 4, 2024
in ಕ್ರೈಮ್ ನ್ಯೂಸ್
ಉಡುಪಿ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿ ವಿಕೃತಿ ಮೆರೆದ ಪತಿ
71
VIEWS
WhatsappTelegramShare on FacebookShare on Twitter

ಉಡುಪಿ, ಆಗಸ್ಟ್.04: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಕಡಿದು ಡ್ಯಾನ್ಸ್ ಮಾಡಿ ಪತಿ ವಿಕೃತಿ ಮೆರೆದಿರುವ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಪತ್ನಿ ಅನಿತಾ (38) ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಪತಿ ಲಕ್ಷ್ಮಣ ನರ್ತನ ಮಾಡಿ ಅಟ್ಟಹಾಸ ಮೆರೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಅನಿತಾಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗುತ್ತಿದೆ.

ಬಸ್ರೂರು ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್​ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೊರಬ ತಾಲೂಕು ಮೂಲದ ದಂಪತಿ, ಕಾಶಿ ಮಠದ ತೋಟ ನೋಡಿಕೊಳ್ಳುತ್ತಿದ್ದರು. ನಾಲ್ಕು ತಿಂಗಳ ಹಿಂದಷ್ಟೇ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿದ್ದ ಪತಿ ಲಕ್ಷ್ಮಣ ತನ್ನ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕವಾಗಿ ಗಾಯಗೊಳಿಸಿದ್ದಾನೆ. ಮನೆಯ ಅಡುಗೆ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಮನೆಯಲ್ಲೇ ಬಿಟ್ಟು ಮನೆಯ ಬಾಗಿಲ ಚಿಲಕ ಹಾಕಿ ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತನೆ ಮಾಡಿ ಅಟ್ಟಹಾಸ ಮೆರೆದಿದ್ದಾನೆ.

ಕೆಲ ಕ್ಷಣದ ಬಳಿಕ ಸ್ಥಳೀಯರಿಗೆ ವಿಚಾರ ತಿಳಿದಿದ್ದು ಕೂಡಲೇ ಕಿಟಕಿ ಒಡೆದು ಅಡುಗೆ ಕೋಣೆಗೆ ತೆರಳಿ ಮಹಿಳೆಯನ್ನು ಹೊರತಂದಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿ ಮಹಿಳೆಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇಷ್ಟಾದರೂ ಮೈ ಮೇಲೆ ದೈವ ಬಂದವರಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಪತಿ ಯಾವುದಕ್ಕೂ ಕ್ಯಾರೇ ಎಂದಿಲ್ಲ. ಸದ್ಯ ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಟ್ಟಿದ್ದು ಒಂದೂವರೆ ಗಂಟೆಯ ಬಳಿಕ ಆರೋಪಿ ಪೊಲೀಸರ ಕೈಗೆ ಸಿಕ್ಕಿದ್ದಾನೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇಂದು ಭೀಮನ ಅಮಾವಸ್ಯೆ ಬೇರೆ ಇದ್ದು ತಡ ರಾತ್ರಿ ವ್ಯಕ್ತಿಯ ವರ್ತನೆ ನೋಡಿ ಜನರಲ್ಲಿ ಭಯ ಮೂಡಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

Saturday Horoscope: ಶನಿವಾರದ ಪಂಚಾಂಗ, ಭವಿಷ್ಯ: ನಿಮಗಿಂದು ಕುಟುಂಬದೊಂದಿಗೆ ಸಂಭ್ರಮಿಸುವ ಸುದ್ದಿ!

Next Post

Paris Olympics 2024: ಒಲಿಂಪಿಕ್ಸ್​ನಲ್ಲಿ ವಿವಾದ, ಪದಕ ಗೆದ್ದ ಬಾಕ್ಸರ್ ಇಮಾನೆ ಖಲೀಫ್ ಅವನಾ? ಅವಳಾ?

Related Posts

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
47
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
50
Next Post
Paris Olympics 2024: ಒಲಿಂಪಿಕ್ಸ್​ನಲ್ಲಿ ವಿವಾದ, ಪದಕ ಗೆದ್ದ ಬಾಕ್ಸರ್ ಇಮಾನೆ ಖಲೀಫ್ ಅವನಾ? ಅವಳಾ?

Paris Olympics 2024: ಒಲಿಂಪಿಕ್ಸ್​ನಲ್ಲಿ ವಿವಾದ, ಪದಕ ಗೆದ್ದ ಬಾಕ್ಸರ್ ಇಮಾನೆ ಖಲೀಫ್ ಅವನಾ? ಅವಳಾ?

Discussion about this post

Recent News

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
31
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

September 17, 2026
11
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

September 17, 2026
ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d