ಕುಂದಾಪುರ,ಸೆ 04 : ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆ ಪ್ರಸ್ತುತ ವಿದ್ಯಾಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆಪ್ಟಂಬರ್ 4ರಿಂದಲೇ ಅನ್ವಯ ಆಗುವಂತೆ ಆಧಾರ್ ಕಾರ್ಡ್ ಕಡ್ಡಾಯ ನೀತಿಯನ್ನು ಜಾರಿಗೆ ತರಲಾಗಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಕರ್ನಾಟಕ ಹೊರತುಪಡಿಸಿ ಇತರೇ ಕಡೆಯ ಭಕ್ತರು ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು.
ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು ದೇವಸ್ಥಾನ ಪ್ರವೇಶಿಸುವ 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.
ಅಲ್ಲದೆ ಮೂಕಾಂಬಿಕಾ ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Discover more from Coastal Times Kannada
Subscribe to get the latest posts sent to your email.
Discussion about this post