• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಲ್ಕಿ: ದರೋಡೆ, ಕಳ್ಳತನ ಪ್ರಕರಣ; ಅಂತರ್ ಜಿಲ್ಲಾ ಐವರು ಆರೋಪಿಗಳ ಬಂಧನ

Coastal Times by Coastal Times
October 4, 2023
in ಕ್ರೈಮ್ ನ್ಯೂಸ್
ಮುಲ್ಕಿ: ದರೋಡೆ, ಕಳ್ಳತನ ಪ್ರಕರಣ; ಅಂತರ್ ಜಿಲ್ಲಾ ಐವರು ಆರೋಪಿಗಳ ಬಂಧನ
47
VIEWS
WhatsappTelegramShare on FacebookShare on Twitter

ಮೂಲ್ಕಿ: ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಮತ್ತು ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಅಂತರ್‌ ಜಿಲ್ಲಾ ಆರೋಪಿಗಳನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದು ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ದಾವಣಗೆರೆ ಜಿಲ್ಲೆಯವರಾಗಿದ್ದು, ಹೊನ್ನೂರು ಮಲಟ್ಟೆ ಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್.(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಅವರಗೆರೆ ಗೋಶಾಲೆ ಬಳಿಯ ನಿವಾಸಿ ಎಚ್.ರವಿಕಿರಣ್ (23), ಅವರಗೆರೆ ಪಿ.ಬಿ.‌ಬಡಾವಣೆ ನಿವಾಸಿ ದಾವಲ ಸಾಬ್‌ ಎಚ್. (25) ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೂಲ್ಕಿ ಠಾಣಾ ಪೊಲೀಸ್‌ ನಿರೀಕ್ಷಕ ವಿದ್ಯಾಧರ ಡಿ. ಬಾಯ್ಕರಿಕರ್, ಅವರು ಸಿಬಂದಿ ಜತೆ ಪುನರೂರು ಚೆಕ್‌ಪೋಸ್ಟ್‌ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಸಂಶಯಾಸ್ಪದವಾಗಿ ಬಂದ ಎರಡು ಬೈಕ್‌ ಮತ್ತು ಕಾರನ್ನು ನಿಲ್ಲಿಸಿ ವಿಚಾರಣೆಗೊಳಪಡಿಸಿದಾಗ ದರೋಡೆ ಮತ್ತು ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ, 1 ರಾಯಲ್‌ ಎನ್ ಫೀಲ್ಡ್, 1 ಕಾರು ಮತ್ತು ತುಂಡಾದ ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ.‌ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣ ಇನ್ನೋರ್ವ ಆರೋಪಿ ದಾವಣಗೆರೆಯ ರಘುನನ್ನು ಈ ಹಿಂದೆ ಬಂಧಿಸಲಾಗಿತ್ತು. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಇತರ ಆರೋಪಿಗಳ ಮಾಹಿತಿ ನೀಡಿದ್ದ. ದಾವಣಗೆರೆಯ ಪ್ರಮೋದ್‌, ಎಚ್‌. ರವಿಕಿರಣ್‌, ದಾವಲ ಸಾಬ್‌ ಎಚ್‌. ಮತ್ತು ಮಂಜುನಾಥ್‌ನನ್ನು ಮಂಗಳವಾರ ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರಲ್ಲಿ ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ.

ಆರೋಪಿಗಳ ಬಂಧನ ಕಾರ್ಯಾಚರಣೆಯಲ್ಲಿ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್‌ ನಿರೀಕ್ಷಕ ವಿದ್ಯಾಧರ ಡಿ ಬಾಯ್ಕರಿಕರ್, ಪಿ.ಎಸ್.ಐಗಳಾದ ವಿನಾಯಕ ಬಾವಿಕಟ್ಟಿ, ಮಾರುತಿ ಪಿ., ಎ.ಎಸ್.ಐ.ಗಳಾದ ಸಂಜೀವ, ಉಮೇಶ್, ಸುರೇಶ್ ಕುಂದರ್ ಎಚ್.ಸಿ.ಗಳಾದ ಕಿಶೋರ್ ಕುಮಾರ್, ಶಶಿಧರ, ಮಹೇಶ್, ಪ್ರಮೋದ್, ಚಂದ್ರಶೇಖರ್, ವಿಶ್ವನಾಥ, ಉದಯ್, ಜಯರಾಮ್, ಸತೀಶ್, ಪವನ್ ಮತ್ತು ಪಿ.ಸಿ.ಗಳಾದ ಅರುಣ್ ಕುಮಾರ್, ವಾಸುದೇವ, ವಿನಾಯಕ, ಶಂಕರ, ಚಿತ್ರಾ, ಚೆಲುವರಾಜ್, ಶೇಖರ, ಯಶವಂತ್, ಬಸವರಾಜ್, ಸುರೇಂದ್ರ, ಅಂಜಿನಪ್ಪ, ಇಮಾಮ್, ಶರಣಪ್ಪ ಭಾಗವಹಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ‌, ಪರಿಸರ ಪ್ರೇಮಿಗಳ ಆಕ್ರೋಶ, ಸೂಕ್ತ ಪ್ರಾಜೆಕ್ಟ್ ಪ್ಲಾನ್ ಇಲ್ಲದೆ ಟೆಂಡರ್ ಆರೋಪ

Next Post

ಮಂಗಳೂರು: ಶೌರ್ಯ ಜಾಗರಣ ರಥಯಾತ್ರೆಯ ಬೃಹತ್ ಶೋಭಾಯಾತ್ರೆಯ ಪ್ರಚಾರ ರಥಕ್ಕೆ ಚಾಲನೆ

Related Posts

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ
ಕ್ರೈಮ್ ನ್ಯೂಸ್

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
35
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
35
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
160
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d