• About us
  • Contact us
  • Disclaimer
Tuesday, June 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ

Coastal Times by Coastal Times
October 4, 2025
in ಕರಾವಳಿ
ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ
118
VIEWS
WhatsappTelegramShare on FacebookShare on Twitter

ಉಳ್ಳಾಲ: ಉಳ್ಳಾಲ ದಸರಾ ಕಾರ್ಯಕ್ರಮದ ಶೋಭಾಯಾತ್ರೆ ಸಂದರ್ಭದಲ್ಲಿ ಸ್ತಬ್ಧಚಿತ್ರಗಳಲ್ಲಿ ಅಳವಡಿಸಿದ್ದ ಧ್ವನಿವರ್ಧಕ ತಡರಾತ್ರಿ ಬಳಸದಂತೆ ನಿಲ್ಲಿಸಿದ ಉಳ್ಳಾಲ ಪೊಲೀಸರ ಹಾಗೂ ಸ್ತಬ್ದಚಿತ್ರ ಬಳಿಯಿದ್ದ ಯುವಕರ ನಡುವೆ ನಡೆದ ವಾಗ್ವಾದದಿಂದ ಮೂವರು ಯುವಕರನ್ನು ವಶಕ್ಕೆ ಪಡೆದ ಪೊಲೀಸರ ಕ್ರಮವನ್ನು ಖಂಡಿಸಿ ಉಳ್ಳಾಲ ಪೊಲೀಸ್ ಠಾಣೆಯೆದುರೇ ಶಾರದಾ ಮಾತೆಯ ವಿಗ್ರಹವನ್ನು ಇಟ್ಟು ಇಡೀ ಭಕ್ತಸಮೂಹ ಎರಡೂವರೆ ಗಂಟೆಗಳ ಕಾಲ ಪ್ರತಿಭಟಿಸಿದ್ದು, ಪೊಲೀಸ್ ವಶದಲ್ಲಿದ್ದ ಇಬ್ಬರನ್ನು ಬಿಡುಗಡೆಗೊಳಿಸಿದ ನಂತರ ಶೋಭಾಯಾತ್ರೆ ಮುಂದುವರಿದು ಶುಕ್ರವಾರ ಬೆಳಗ್ಗಿನ ವೇಳೆ ಶಾರದಾ ಮೂರ್ತಿಯ ವಿಸರ್ಜನೆ ಉಳ್ಳಾಲ ಸಮುದ್ರ ತೀರದಲ್ಲಿ ನಡೆದಿದೆ.

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಕ್ಷಿತ್, ಆಶಿಶ್ ಮತ್ತು ಅಶ್ವತ್ಥ್ ಎಂಬವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದು ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ಶೋಭಾಯಾತ್ರೆಯನ್ನು ಸ್ಥಗಿತಗೊಳಿಸಿ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಉಳ್ಳಾಲದ ಶಾರದಾ ನಿಕೇತನದಲ್ಲಿ ಜಲಸ್ಥಂಭನದ ಪ್ರಯುಕ್ತ ನಡೆದ ಶೋಭಾಯಾತ್ರೆಯು ಉಳ್ಳಾಲ ಪೇಟೆ, ವಿದ್ಯಾರಣ್ಯ ನಗರ, ಚೀರುಂಭ ಭಗವತೀ ಕ್ಷೇತ್ರದ ಒಳ‌ರಸ್ತೆಯಾಗಿ ಉಳ್ಳಾಲ ಪೊಲೀಸ್ ಠಾಣೆಯ ಬಳಿಯ ಅಬ್ಬಕ್ಕ ವೃತ್ತಕ್ಕೆ ಬಂದಿತ್ತು. ಕೆಲ ಟ್ಯಾಬ್ಲೋಗಳು ಠಾಣೆಯ ಮುಂಭಾಗದಿಂದ ಹಾದು ಹೋಗಿದ್ದು, ರಾತ್ರಿ ವೇಳೆಗೆ ಪೊಲೀಸರು ಬಾಕಿ ಉಳಿದ ಟ್ಯಾಬ್ಲೋಗಳ ಧ್ವನಿವರ್ಧಕಗಳನ್ನ ಸ್ಥಗಿತಗೊಳಿಸಿದ್ದಾರೆ. ಈ ವೇಳೆ ನೆರೆದಿದ್ದ ಯುವಕರು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ.

ಉದ್ರಿಕ್ತ ಜನರು ಶೋಭಾಯಾತ್ರೆಯನ್ನು ಸ್ಥಗಿತಗೊಳಿಸಿ ಠಾಣೆಯ ಮುಂಭಾಗದಲ್ಲಿ ಜಮಾಯಿಸಿ ಯುವಕರನ್ನ ಬಿಡುಗಡೆಗೊಳಿಸಿದರೆ ಮಾತ್ರ ಶೋಭಾಯಾತ್ರೆ ನಡೆಸುವುದಾಗಿ ಘೋಷಣೆ ಕೂಗಿದ್ದಾರೆ. ಈ ಸಂದರ್ಭ ಠಾಣೆಗೆ ಭೇಟಿ ನೀಡಿದ ಡಿಸಿಪಿ ಮಿಥುನ್ ಹೆಚ್.ಎನ್ ಅವರು ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಂಡಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಮುಖಂಡ ಸಂತೋಷ್‌ ರೈ ಬೋಳಿಯಾರ್‌, ಮೊಗವೀರ ಮುಖಂಡ ಯಶವಂತ್‌ ಅಮೀನ್‌, ಉತ್ಸವ ಸಮಿತಿ ಅಧ್ಯಕ್ಷ ಭರತ್ ಉಳ್ಳಾಲ್ ಠಾಣೆಗೆ ಭೇಟಿ ನೀಡಿ ಬಂಧಿತರ ಬಿಡುಗಡೆಗೆ ಒತ್ತಾಯಿಸಿದರು. ಅದಕ್ಕೂ ಪೊಲೀಸರು ಒಪ್ಪದೇ ಇದ್ದಾಗ ನಾಯಕರು ಮುಂದಿನ ಪರಿಣಾಮಗಳನ್ನು ನೀವೇ ಎದುರಿಸಿರಿ ಎಂದು ಹೊರನಡೆದಿದ್ದಾರೆ. ಆದರೆ ಪಟ್ಟುಬಿಡದ ಭಕ್ತಸಮೂಹ ಪ್ರತಿಭಟನೆ ಮುಂದುವರಿಸಿ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು. ಆ ಬಳಿಕ 4.30ರ ಸುಮಾರಿಗೆ ವಶದಲ್ಲಿರುವ ಆಶೀಶ್‌ ಮತ್ತು ಅಶ್ವತ್‌ ಇಬ್ಬರನ್ನು ಬಿಡುಗಡೆಗೊಳಿಸಿದರು. ರಕ್ಷಿತ್‌ ವಿರುದ್ಧ ಈಗಾಗಲೇ ಪ್ರಕರಣಗಳಿದ್ದು, ಇದೀಗ ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ದಾಖಲಾಗಿರುವುದರಿಂದ ಬಂಧಿಸಲಾಗಿದೆ. ದಸರಾ ಶೋಭಾಯಾತ್ರೆಯಲ್ಲಿ ಉಳ್ಳಾಲ ಪೊಲೀಸರು ಠಾಣೆಯ ಮುಂಭಾಗದಲ್ಲಿ ಶಾರದಾ ಮಾತೆಗೆ ಹೂ ಹಣ್ಣು ಸಮರ್ಪಿಸಿ ಮಂಗಳಾರತಿ ಸಲ್ಲಿಸುವುದು ವಾಡಿಕೆಯಾಗಿದೆ. ಈ ಬಾರಿ ಪೊಲೀಸರು ಶೋಭಾ ಯಾತ್ರೆಗೆ ಅಡ್ಡಿಪಡಿಸಿದ್ದರಿಂದ ಅಸಮಧಾನಗೊಂಡಿದ್ದ ಶಾರದೆಯ ಪಲ್ಲಕ್ಕಿ ಹೊತ್ತಿದ್ದ ಭಜಕರ ತಂಡವು ಪೊಲೀಸ್ ಠಾಣೆಯ ಮುಂದೆ ಮಂಗಳಾರತಿಗೆ ಅವಕಾಶ ನೀಡದೆ ಮುಂದಕ್ಕೆ ತೆರಳಿದ್ದಾರೆ.

ಸೇವಂತಿಗುಡ್ಡೆಯ ರಕ್ಷಿತ್ ಶೆಟ್ಟಿ (27) ಎಂಬಾತನ ವಿರುದ್ಧ ಪಿಎಸ್ ಐ ಕೃಷ್ಣ ಅವರ ದೂರಿನ ಮೇರೆಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತಂತೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಆರೋಪಿ ಕೃಷ್ಣರಾವ್ ಸಂತ್ರಸ್ತ ಯುವತಿಯನ್ನು ವಿವಾಹವಾಗದಿದ್ದರೆ ಯುವಕನ ಮನೆಯಲ್ಲಿ ನ್ಯಾಯಕ್ಕಾಗಿ ಧರಣಿ: ಪ್ರತಿಭಾ ಕುಳಾಯಿ

Next Post

ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

Related Posts

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026
ಕರಾವಳಿ

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ
ಕರಾವಳಿ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
33
Next Post
ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
61
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d