ಬೆಂಗಳೂರು: ಪೆಟ್ರೋಲ್-ಡೀಸೆಲ್ ದರ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶದ ಜನರಿಗೆ ಸಿಹಿ ಸುದ್ದಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಅಂತಹುದೇ ಕ್ರಮ ಅನುಸರಿಸಿದೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ‘ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ’ ಎಂದು ತಿಳಿಸಿದ್ದಾರೆ.
ಶ್ರೀ @narendramodi ಅವರ ನೇತೃತ್ವದ ಕೇಂದ್ರ ಸರಕಾರ ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ ಜನರಿಗೆ ದೀಪಾವಳಿಯ ಉಡಗೊರೆ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು,
1/3— Basavaraj S Bommai (@BSBommai) November 3, 2021
Discover more from Coastal Times Kannada
Subscribe to get the latest posts sent to your email.
Discussion about this post