ಮಂಗಳೂರು: ಮಂಗಳೂರಿನ ಕುಲಶೇಖರದ ಕೊರ್ಡೆಲ್ ಸಭಾಂಗಣದಲ್ಲಿ ರವಿವಾರ ನಡೆದ ಕೊಂಕಣಿ ಕೆಥೋಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ “ರಚನಾ’ದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಉದ್ಘಾಟಿಸಿ ಅವರು ಮಾತನಾಡಿದ ಬೆಂಗಳೂರಿನ ಆರ್ಚ್ ಬಿಷಪ್ ಅ| ವಂ| ಡಾ| ಪೀಟರ್ ಮಚಾದೊ ಸಮಾಜದ ವಿವಿಧ ವರ್ಗದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ರಚನಾ ಸಂಸ್ಥೆ ಶ್ರಮಿಸುತ್ತಿದೆ. ಅನೇಕರ ಬಾಳು ಬೆಳಗುವಲ್ಲಿ ಈ ಸಂಸ್ಥೆ ನೆರವಾಗಿದೆ. ಮಾತು ಕಡಿಮೆ ಕೆಲಸ ಜಾಸ್ತಿ ಎಂಬಂತೆ ಕಾರ್ಯ ನಿರ್ವಹಿಸುತ್ತಿದೆ, ಉದ್ಯಮಿಗಳನ್ನು ಬೆಳೆಸುವ ಜತೆಗೆ ಐಎಎಸ್, ಐಪಿಎಸ್ ಕ್ಷೇತ್ರಕ್ಕೆ ಹೋಗುವ ಮಂದಿ, ಕ್ರೀಡಾಪಟು, ಸಾಮಾಜಿಕ ಕ್ಷೇತ್ರ ಗಳಿಗೆ ರಚನಾದಿಂದ ಮುಂದಿನ ದಿನಗಳಲ್ಲಿ ಪ್ರೋತ್ಸಾಹ ಸಿಗುವಂತಾಗಬೇಕು. ರಚನಾ ಸಂಸ್ಥೆಗೆ 25 ವರ್ಷ ತುಂಬಿದ್ದು ಬಹಳ ಸಂತೋಷವಾಗಿದೆ ಎಂದರು.
ಪುಣೆಯ ಮಿಲಿಟರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಮಾಂಡೆಂಟ್ ರಿಯರ್ ಅಡ್ಮಿರಲ್ ನೆಲ್ಸನ್ ಡಿ’ಸೋಜಾ ಮಾತನಾಡಿ, ರಚನಾ ಸಂಸ್ಥೆ ಉದ್ಯಮದ ಜತೆಗೆ ಉದ್ಯಮಶೀಲತ್ವವನ್ನು ಬೆಳೆಸುವ ವಿಚಾರದಲ್ಲಿ ಸಾಕಷ್ಟು ಕೆಲಸ ಮಾಡುತ್ತಿದೆ. ಕಳೆದ 25 ವರ್ಷಗಳಲ್ಲಿ ಅನೇಕರನ್ನು ಸ್ವಾವಲಂಬಿಗಳನ್ನಾಗಿಸಿದ್ದು, ಇದು ಮತ್ತಷ್ಟು ಮುಂದುವರಿಯುವಂತಾಗಬೇಕು ಎಂದರು.
ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ| ವಂ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ 25 ವರ್ಷಗಳ ಸವಿನೆನಪಿಗಾಗಿ ಕೊಂಕಣಿ ಕ್ರೈಸ್ತ ಯುವ ಉದ್ಯಮಿಗಳಿಗೆ ನೆರವಾಗುವ ನಿಟ್ಟಿನಲ್ಲಿ ರಚನಾ ಕೆಥೋಲಿಕ್ ಸೌಹಾರ್ದ ಸಹಕಾರಿ ಸಂಘ ಯೋಜನೆಯ ಉದ್ಘಾಟನೆ ನಡೆಯಿತು. ರಚನಾ ಆರಂಭಿಸಲು ಕಾರಣ ಕರ್ತರಾದ ಮಾರಿಟ್ಟೊ ಸಿಕ್ವೇರ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.
ಈ ಸಂದರ್ಭ ಎನ್‌ಆರ್‌ಐ ಉದ್ಯಮಿ ಮೈಕಲ್ ಡಿ’ಸೋಜಾ, ಮಾಜಿ ಶಾಸಕ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಜೆ. ಆರ್. ಲೋಬೊ, ರಾಯ್ ಕ್ಯಾಸ್ತಲಿನೊ, ಸಂಚಾಲಕಿ ಮಾಜೊರಿ ಟೆಕ್ಸೇರಾ, ರಚನಾ ಅಧ್ಯಕ್ಷ ಅಧ್ಯಕ್ಷ ಜಾನ್ ಮೊಂತೆರೊ, ಕಾರ್ಯದರ್ಶಿ ವಿಜಯ್ ವಿಶ್ವಾಸ್ ಲೋಬೊ, ಕೋಶಾಧಿಕಾರಿ ನೆಲ್ಸನ್ ಮೊಂತೇರೊ, ಕಾರ್ಯದರ್ಶಿ ವಿಜಯ್ ವಿಶ್ವಾಸ್ ಲೋಬೊ ಮತ್ತಿತರರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post