• About us
  • Contact us
  • Disclaimer
Wednesday, November 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

Coastal Times by Coastal Times
November 4, 2026
in ಕರಾವಳಿ
ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ
9
VIEWS
WhatsappTelegramShare on FacebookShare on Twitter

ಮಂಗಳೂರು, ನ.4: ಎಸ್‍ಐಆರ್ ಕುರಿತು ಸುಳ್ಳು ಮಾಹಿತಿ ನೀಡಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ನೋಡುತ್ತಿರುವ ಕಾಂಗ್ರೆಸ್ಸಿನ ಷಡ್ಯಂತ್ರದ ವಿರುದ್ಧ, ಯುವ ಸಮುದಾಯಕ್ಕೆ ಹಾಗೂ ಜನರಿಗೆ ಸರಿಯಾದ ಮಾಹಿತಿ ನೀಡಿ ದೇಶ ವಿರೋಧಿಗಳ ಸಂಚನ್ನು ಬಯಲು ಮಾಡುವ ಉದ್ದೇಶದಿಂದ ನ.6 ಶುಕ್ರವಾರದಂದು ಬಿಜೆಪಿ ಮಂಗಳೂರು ವಿಭಾಗ ಮಟ್ಟದ ‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ ನಡೆಯಲಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಮಾಹಿತಿ ನೀಡಿದರು.

ಮಂಗಳೂರು ಹಾಗೂ ಉಡುಪಿ ಜಿಲ್ಲೆಯಿಂದ ಒಟ್ಟು ಇಪ್ಪತ್ತು ಸಾವಿರಕ್ಕೂ ಜನ ಆಗಮಿಸಲಿದ್ದು, ಮಂಗಳೂರು ನಗರ ದಕ್ಷಿಣದಿಂದಲೇ ಐದು ಸಾವಿರ ಜನ ಬರಲಿದ್ದಾರೆ. ಮಧ್ಯಾಹ್ನ 3:00 ಗಂಟೆಗೆ ಕ್ಲಾಕ್ ಟವರ್ ಬಳಿಯ ಮಿನಿ ವಿಧಾನ ಸೌಧದಿಂದ ಕುಣಿತ ಭಜನೆ, ನಾಸಿಕ್ ಬ್ಯಾಂಡ್, ಚಂಡೆಯೊಂದಿಗೆ ಇಪ್ಪತ್ತು ಸಾವಿರಕ್ಕೂ ಅಧಿಕ ಜನ ಬೃಹತ್ ಪಾದಯಾತ್ರೆಯಲ್ಲಿ ಸಾಗಿ, ಕದ್ರಿ ಮೈದಾನಕ್ಕೆ ತಲುಪಿ ಅಲ್ಲಿಯೇ ಸಾರ್ವಜನಿಕ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಭಾರತದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ರಾಜ್ಯ ಸಚಿವರು ಮತ್ತು ಖ್ಯಾತ ಮಲಯಾಳಂ ಚಿತ್ರನಟ ಸುರೇಶ್ ಗೋಪಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾದ ತೇಜಸ್ವಿ ಸೂರ್ಯ ರವರು ಉಪಸ್ಥಿತರಿರಲಿದ್ದಾರೆ. ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಇರುವ ಈ ಅಭಿಯಾನದಲ್ಲಿ ವಿವಿಧ ಕ್ಷೇತ್ರಗಳ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಶ್ರೀ ನರೇಂದ್ರ ಮೋದಿ ಯವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಯುವಜನರನ್ನು ಕಣ್ಮುಂದೆ ಇಟ್ಟುಕೊಂಡು ಅನೇಕ ಯೋಜನೆಗಳನ್ನು ಮಾಡಿದ್ದಾರೆ. 7 ಐಐಟಿಗಳ ಸ್ಥಾಪನೆ, 8 ಕಡೆ ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಪ್ರಾರಂಭಿಸಲಾಗಿದೆ. 2014ಕ್ಕೆ ಮೊದಲು ದೇಶದಲ್ಲಿ 387 ವೈದ್ಯಕೀಯ ಕಾಲೇಜುಗಳಿದ್ದವು. 12 ವರ್ಷಗಳಲ್ಲಿ 431 ಹೊಸ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ. ಮೋದಿಯವರು ಕೌಶಲ್ಯಾಭಿವೃದ್ಧಿಯ ಹೊಸ ಸಚಿವಾಲಯ ಪ್ರಾರಂಭಿಸಿದ್ದಾರೆ. ಸ್ಟಾರ್ಟಪ್ ಸಂಖ್ಯೆಗಳೂ ಹೆಚ್ಚಾಗಿವೆ. 2,12,283 ಸ್ಟಾರ್ಟಪ್‍ಗಳು ಆರಂಭವಾಗಿವೆ. ಈ ಪೈಕಿ 21,601 ಕರ್ನಾಟಕದಲ್ಲೇ ಆರಂಭಗೊಂಡಿವೆ. ಕ್ರೀಡಾ ಕ್ಷೇತ್ರದಲ್ಲಿ ಯುವಜನರಿಗಾಗಿ ಹೊಸ ಯೋಜನೆಗಳನ್ನು ನೀಡಿದ್ದಾರೆ.

ಆದರೆ, ಇಂಡಿಯನ್ ನ್ಯಾಷ್ ನಲ್ ಕಾಂಗ್ರೇಸ್ ಯುವಜನರನ್ನು ಸಂಘರ್ಷಕ್ಕೆ ಇಳಿಸುವ ಹಾಗೂ ತಪ್ಪು ದಾರಿಗೆ ಎಳೆಯುವ ಯತ್ನ ಮಾಡುತ್ತಿದೆ. ಯುವಕರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡು ಸಂಘರ್ಷಕ್ಕೆ ಇಳಿಸುವುದು ಸರಿಯಲ್ಲವೆಂದು ಸುಪ್ರೀಂ ಕೋರ್ಟ್ ಕೂಡಾ ಹೇಳಿದೆ. ಈಗ ಎಸ್‍ಐಆರ್ ಸರಿ ಇಲ್ಲವೆಂದು ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಇತಿಹಾಸ ಮರೆತು ಹೋಗಿರಬಹುದು. ಈ ದೇಶದಲ್ಲಿ 12 ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ಆಗಿದ್ದು, 10 ಬಾರಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗಲೇ ಆಗಿದೆ. ಈಗ ಪ್ರಜಾಪ್ರಭುತ್ವದ ಮುಖವಾಡ ಧರಿಸಿರುವ ಕಾಂಗ್ರೆಸ್ ಪಕ್ಷವು ವ್ಯವಸ್ಥೆಯನ್ನು ಬುಡಮೇಲು ಮಾಡಲು ನಿರಂತರವಾಗಿ ಕುತಂತ್ರ ನಡೆಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಡೀ ವಿಶ್ವವೇ ಭಾರತವನ್ನು ಗೌರವದಿಂದ ನೋಡುತ್ತಿರುವ ಸಂದರ್ಭದಲ್ಲಿ, ದೇಶದ ಒಗ್ಗಟ್ಟನ್ನು ಒಡೆಯಲು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಹವಣಿಸುತ್ತಿವೆ. ಇಂತಹ ದೇಶದ್ರೋಹಿ ಷಡ್ಯಂತ್ರಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಬಿಜೆಪಿ ರಾಜ್ಯಾದ್ಯಂತ ಈ ಆಂದೋಲನವನ್ನು ಆರಂಭಿಸಿದೆ.

“ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವುದನ್ನು ಜೀರ್ಣಿಸಿಕೊಳ್ಳಲು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಮೋದಿಯವರ ಜಾಗತಿಕ ಜನಪ್ರಿಯತೆಯನ್ನು ಸಹಿಸದ ಕಾಂಗ್ರೆಸ್‌, ವಿದೇಶಿ ಶಕ್ತಿಗಳ ಜೊತೆಗೂಡಿ ದೇಶದಲ್ಲಿ ಆಂತರಿಕ ಅಶಾಂತಿ ಮತ್ತು ಅರಾಜಕತೆ ಸೃಷ್ಟಿಸಲು ನಿರಂತರವಾಗಿ ಹುನ್ನಾರ ನಡೆಸುತ್ತಿದೆ.
ಕರ್ನಾಟಕದಲ್ಲಿ ಇಂದು ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲದಂತಾಗಿದೆ. ಖಜಾನೆ ಖಾಲಿಯಾಗಿದ್ದು, ಜನಸಾಮಾನ್ಯರ ಮೇಲೆ ನಿರಂತರವಾಗಿ ತೆರಿಗೆ ಮತ್ತು ಬೆಲೆ ಏರಿಕೆಯ ಬರೆ ಎಳೆಯಲಾಗುತ್ತಿದೆ. ಬರಿದಾಗಿರುವ ತನ್ನ ಖಜಾನೆ ತುಂಬಿಸಿಕೊಳ್ಳಲು ಈಗ ಕಾಂಗ್ರೆಸ್ ಜನರಿಂದಲೇ ಸುಲಿಗೆ ಮಾಡುತ್ತಿದೆ.

ಈಗಾಗಲೇ ನೆರೆಹೊರೆಯ ದೇಶಗಳಲ್ಲಿ ಆಗಿರುವಂತಹ ದಂಗೆಗಳನ್ನು ಭಾರತದಲ್ಲೂ ನಡೆಸಿ ಸ್ಥಿರ ಆಡಳಿತವನ್ನು ಅಸ್ಥಿರಗೊಳಿಸಲು ಪಿತೂರಿ ನಡೆಸಲಾಗುತ್ತಿದೆ. ಆದರೆ ಭಾರತವನ್ನು ಬಾಂಗ್ಲಾ, ಶ್ರೀಲಂಕಾ, ಫ್ರಾನ್ಸ್ ಮಾಡಲು, ಇಲ್ಲಿ ಅರಾಜಕತೆ ಸೃಷ್ಟಿಸಲು ಯಾವ ಶಕ್ತಿಯಿಂದಲೂ ಅಸಾಧ್ಯ.

ಸಂವಿಧಾನದ ಪ್ರತಿ ಹಿಡಿದು ತಿರುಗುವ ಕಾಂಗ್ರೆಸ್ಸಿಗರಿಗೆ ದೇಶದ ಸಂವಿಧಾನ, ನ್ಯಾಯಾಂಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಿಂಚಿತ್ತೂ ನಂಬಿಕೆಯಿಲ್ಲ. ದೇಶದ ಜನತೆ ನೀಡಿರುವ ತೀರ್ಪಿನ ಮೇಲೆ ನಂಬಿಕೆ ಇಲ್ಲ, ಇವಿಎಂ ಮೇಲೆ ನಂಬಿಕೆಯಿಲ್ಲ, ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ, ಸುಪ್ರೀಂ ಕೋರ್ಟ್‌ ತೀರ್ಪುಗಳ ಮೇಲೆಯೂ ನಂಬಿಕೆಯಿಲ್ಲ. ಇಂತಹ ದೇಶವಿರೋಧಿ ಶಕ್ತಿಗಳ ವಿರುದ್ಧ ಜನಜಾಗೃತಿ ಮೂಡಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ.

ಈ ಸಂದರ್ಭದಲ್ಲಿ ಮಂಡಲದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕಾರ್ಯದರ್ಶಿ ಪೂರ್ಣಿಮಾ ಎಂ, ಮಂಡಲದ ಯುವ ಮೋರ್ಚಾ ಅಧ್ಯಕ್ಷರಾದ ಅಶ್ವಿತ್ ಕೊಟ್ಟಾರಿ, ಪ್ರಮುಖರಾದ ವಿನೋದ್ ಮೆಂಡನ್, ಸುರೇಖಾ ಹೆಗ್ಡೆ, ಸುಕೇಶ್ ಅಳಪೆ, ಪ್ರವೀಣ್ ನಿಡ್ಡೇಲ್, ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

Related Posts

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು
ಕರಾವಳಿ

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

November 4, 2026
33
ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ
ಕರಾವಳಿ

ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

November 3, 2026
22

Discussion about this post

Recent News

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

November 4, 2026
9
ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

November 4, 2026
33
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

November 4, 2026
ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

November 4, 2026
ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

November 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d