• About us
  • Contact us
  • Disclaimer
Sunday, November 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು

Coastal Times by Coastal Times
November 4, 2026
in ಕರಾವಳಿ
ನಕ್ಸಲ್ ನಾಯಕಿ ಮುಂಡಗಾರು ಲತಾ ಬಿಗಿ ಬಂದೋಬಸ್ತಿನಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರು
73
VIEWS
WhatsappTelegramShare on FacebookShare on Twitter

ಕಡಬ: ಸರಕಾರಕ್ಕೆ ಶರಣಾಗತಿಯಾಗಿರುವ ನಕ್ಸಲ್, ಎಡಪಂಥೀಯ ಮಾವೋವಾದಿ ನಾಯಕಿ ಮುಂಡಗಾರು ಲತಾ (ಶ್ರೀಲತಾ)ಳನ್ನು ಪ್ರಕರಣವೊಂದರ ವಿಚಾರಣೆಗಾಗಿ ಕಡಬ ನ್ಯಾಯಾಲಯಕ್ಕೆ ನ.3ರ ಮಂಗಳವಾರ ಹಾಜರುಪಡಿಸಲಾಯಿತು.

ಲತಾ 2025 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎದುರು ಸರಕಾರಕ್ಕೆ ಶರಣಾಗತಿಯಾಗಿದ್ದರೂ ಅವರ ಮೇಲೆ ಅನೇಕ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಠಾಣೆಗಳಲ್ಲಿ ವಿಚಾರಣೆ ಹಾಗೂ ಪ್ರಕರಣ ಎಸಗಿರುವ ಸ್ಥಳಗಳ ಮಹಜರು ಪ್ರಕ್ರಿಯೆ ನಡೆಯುತ್ತಿದೆ. 2018 ರಲ್ಲಿ ಶಿರಾಡಿ ಗ್ರಾಮದ ಮಿತ್ತಮಜಲು ಸುರೇಶ ಹಾಗೂ ಲೀಲಾ ಅವರ ಮನೆಗೆ ಲತಾ ಅವರ ನೇತೃತ್ವದ ನಕ್ಸಲರ ತಂಡ ರಾತ್ರಿ ಬಂದು ಮನೆಯವರನ್ನು ಬೆದರಸಿ ಊಟ ಮಾಡಿರುವುದಲ್ಲದೆ ಮನೆಯಿಂದ ಅಕ್ಕಿ ಸಾಮಾನು ಪಡೆದು ಹೋಗಿದ್ದರು.

ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಡಬ ತಾಲೂಕಿನಲ್ಲಿ ಪ್ರಕರಣ ನಡೆದಿರುವುರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಲತಾಳನ್ನು ಬಿಗಿ ಪೋಲೀಸ್ ಬಂದೋಬಸ್ತಿನಲ್ಲಿ ಉಪ್ಪಿನಂಗಡಿ ಠಾಣೆಗೆ ಕರೆದುಕೊಂಡು ಬಂದು ಕಡಬ ಸಂಚಾರಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಸಂಜೆಯ ವೇಳೆಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿ ಉಪ್ಪಿನಂಗಡಿ ಠಾಣೆಗೆ ಕರೆದೊಯ್ಯಲಾಗಿದೆ.

ಬುಧವಾರ ಶಿರಾಡಿಯ ಮಿತ್ತಮಜಲಿನಲ್ಲಿ ಮಹಜರು ನಡೆಯಲಿರುವುದರಿಂದ ಲತಾಳನ್ನು ಅಲ್ಲಿಗೆ ಕರೆದುಕೊಂಡು ಹೋಗಲಾಗುತ್ತದೆ. ಬಳಿಕ ಗುರುವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತದೆ. ಅಲ್ಲಿಂದ ಮತ್ತೆ ಬೆಂಗಳೂರು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆದೊಯ್ಯಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಲತಾ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದ ಆದಿವಾಸಿ ಕುಟುಂಬಕ್ಕೆ ಸೇರಿದವಳು.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದ ಆದಿವಾಸಿ ಕುಟುಂಬಕ್ಕೆ ಸೇರಿದ ಲತಾ ಅಲ್ಲಿಯೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದಳು. ಮೊದಲಿಗೆ ಕುದುರೆ ಮುಖ ರಾಷ್ಟ್ರೀಯ ಉದ್ಯಾನವನ ಯೋಜನೆ ಹಾಗೂ ಅಲ್ಲಿನ ಜನರ ಒಕ್ಕಲೆಬ್ಬಿಸುವಿಕೆ ವಿರುದ್ಧ ಹೋರಾಟದಲ್ಲಿ ಸಕ್ರಿಯರಾಗಿದ್ದರು. 2000ನೇ ಇಸವಿಯಲ್ಲಿ ತಮ್ಮ 18ನೇ ವಯಸ್ಸಿನಲ್ಲಿ ಸಶಸ್ತ್ರ ಮಾವೋವಾದಿ (ನಕ್ಸಲ್) ಚಳವಳಿಯ ಹಾದಿ ಹಿಡಿದಿದ್ದರು. ಪಶ್ಚಿಮ ಘಟ್ಟಗಳ ದಟ್ಟ ಕಾಡುಗಳಲ್ಲಿ ಸಕ್ರಿಯವಾಗಿದ್ದ ನಕ್ಸಲ್ ದಳದ ಭಾಗವಾಗಿ ಸುಮಾರು 25 ವರ್ಷಗಳ ಕಾಲ ತಲೆಮರೆಸಿಕೊಂಡು ಕಾರ್ಯ ನಿರ್ವಹಿಸಿದ್ದರು.

ಇವರ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ದೇಶದ್ರೋಹ ಸೇರಿದಂತೆ ಸುಮಾರು 85ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ತಮಿಳುನಾಡು, ಕರ್ನಾಟಕ ಹಾಗೂ ಕೇರಳದ ಗಡಿ ಭಾಗಗಳ ಕಾಡುಗಳಲ್ಲಿ ಇವರು ಸಂಚರಿಸುತ್ತಿದ್ದರು. ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ಕೌಂಟರ್ ಹಾಗೂ ತಮಗಿದ್ದ ತೀವ್ರ ಆರೋಗ್ಯದ ಸಮಸ್ಯೆಯ ಹಿನ್ನೆಲೆಯಲ್ಲಿ 2025ರ ಜನವರಿ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸರ ಮುಂದೆ ಇತರ ಐದು ಮಂದಿ ನಕ್ಸಲರೊಂದಿಗೆ ಶರಣಾಗಿದ್ದರು. ಇತ್ತೀಚೆಗೆ ಇವರ ವಿರುದ್ಧವಿದ್ದ ಮೂರು ಪ್ರಮುಖ ಯುಎಪಿಎ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಎನ್‌ಐಎ  ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ, 12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಗಾಯನ, ಗಿನ್ನೆಸ್ ವಿಶ್ವದಾಖಲೆ ಗುರಿ

Next Post

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

Related Posts

ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ: ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ
ಕರಾವಳಿ

ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ: ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ

November 15, 2026
1
ಉಡುಪಿ ಮೂಲದ ಭೂಗತ ಪಾತಕಿ ರವಿ ಪೂಜಾರಿ ತಾಯಿ ನಿಧನ, ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಗ್ಯಾಂಗ್‌ಸ್ಟರ್
ಕರಾವಳಿ

ಉಡುಪಿ ಮೂಲದ ಭೂಗತ ಪಾತಕಿ ರವಿ ಪೂಜಾರಿ ತಾಯಿ ನಿಧನ, ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಗ್ಯಾಂಗ್‌ಸ್ಟರ್

November 14, 2026
69
Next Post
ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

ಮಂಗಳೂರು: ನ.6.‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ

Discussion about this post

Recent News

ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ: ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ

ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ: ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ

November 15, 2026
1
ಮಂಗಳೂರು: 2005ರ ಕೋಮು ಗಲಭೆ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: 2005ರ ಕೋಮು ಗಲಭೆ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

November 15, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ: ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ

ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ: ನಾಲ್ವರಿಗೆ ಸಹಕಾರಿ ರತ್ನ ಪ್ರಶಸ್ತಿ

November 15, 2026
ಮಂಗಳೂರು: 2005ರ ಕೋಮು ಗಲಭೆ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: 2005ರ ಕೋಮು ಗಲಭೆ ಪ್ರಕರಣ; 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

November 15, 2026
ಉಡುಪಿ ಮೂಲದ ಭೂಗತ ಪಾತಕಿ ರವಿ ಪೂಜಾರಿ ತಾಯಿ ನಿಧನ, ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಗ್ಯಾಂಗ್‌ಸ್ಟರ್

ಉಡುಪಿ ಮೂಲದ ಭೂಗತ ಪಾತಕಿ ರವಿ ಪೂಜಾರಿ ತಾಯಿ ನಿಧನ, ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಗ್ಯಾಂಗ್‌ಸ್ಟರ್

November 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d