ಮಹಾರಾಷ್ಟ್ರ: ಮಹಾರಾಷ್ಟ್ರ ರಾಜ್ಯದಲ್ಲಿ ‘ಮಹಾಯತಿ’ ಮೈತ್ರಿಕೂಟದ ಹೊಸ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಏಕನಾಥ್ ಶಿಂಧೆ, ಅಜಿತ್ ಪವಾರ್ ಸಹ ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 145. ‘ಮಹಾಯತಿ’ ಮೈತ್ರಿಕೂಟ 230 ಶಾಸಕರ ಬಲ ಹೊಂದಿದೆ.
ನಾಳೆ ಮಹಾ ಸಿಎಂ ಪ್ರಮಾಣವಚನ ಸಮಾರಂಭ: ಡಿಸೆಂಬರ್ 5 ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿರುವ ಮೆಗಾ ಸಮಾರಂಭದಲ್ಲಿ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷವು ಈಗಾಗಲೇ ಘೋಷಿಸಿದೆ. ಈ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಲವಾರು ಕೇಂದ್ರ ಸಚಿವರು, ಪಕ್ಷದ ನಾಯಕರು ಮತ್ತು ಪಕ್ಷದ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಮಾಣ ವಚನ ಸಮಾರಂಭದಲ್ಲಿ 40,000 ಬಿಜೆಪಿ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ವಿವಿಧ ಧರ್ಮಗಳ ಮುಖಂಡರು ಸೇರಿದಂತೆ 2,000 ವಿವಿಐಪಿಗಳಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ 288 ವಿಧಾನಸಭಾ ಸ್ಥಾನಗಳ ಪೈಕಿ 132 ಸ್ಥಾನಗಳನ್ನು ಗಳಿಸಿ ಗಮನಾರ್ಹ ಯಶಸ್ಸನ್ನು ಸಾಧಿಸಿತ್ತು.
Discover more from Coastal Times Kannada
Subscribe to get the latest posts sent to your email.
Discussion about this post