• About us
  • Contact us
  • Disclaimer
Monday, March 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಿಎಂಗೆ ನಾಯಿಮರಿ ಹೇಳಿಕೆ ವಿವಾದ.. ಸ್ಪಷ್ಟನೆ ನೀಡಿದ್ರು ಸಿದ್ದರಾಮಯ್ಯ

Coastal Times by Coastal Times
January 5, 2023
in ಕರಾವಳಿ
ಸಿಎಂಗೆ ನಾಯಿಮರಿ ಹೇಳಿಕೆ ವಿವಾದ.. ಸ್ಪಷ್ಟನೆ ನೀಡಿದ್ರು ಸಿದ್ದರಾಮಯ್ಯ
52
VIEWS
WhatsappTelegramShare on FacebookShare on Twitter

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಯಿಮರಿಯಂತೆ ನಿಂತುಕೊಳ್ತಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವಿವಾದದ ಬಗ್ಗೆ ಗುರುವಾರ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಧೈರ್ಯ ಇರಬೇಕು ಎಂಬ ಅರ್ಥದಲ್ಲಿ ಆ ಮಾತನ್ನು ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಅವರನ್ನು ನಾಯಿ ಮರಿ ಎಂದು ಹೇಳಿಲ್ಲ. ಧೈರ್ಯ ಇರಬೇಕು ಎಂಬ ಅರ್ಥದಲ್ಲಿ ಹೇಳಿದ್ದೆ. ಕೇಂದ್ರದಿಂದ ಅನುದಾನ ತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. 5ನೇ ಹಣಕಾಸು ಆಯೋಗದ 5495 ಕೋಟಿ ರೂಪಾಯಿ ತೆಗೆದುಕೊಂಡಿಲ್ಲ. ಇದನ್ನು ಕೇಳಲು ಧೈರ್ಯ ಬೇಕು. ನಾಯಿ ಮರಿ ಹಾಗೇ ಇರಬಾರದು ಎಂದಿದ್ದೆ. ಆ ರೀತಿ ಹೇಳುವುದು ಅಸಾಂವಿಧಾನವೇ? ನನಗೆ ಟಗರು ಅಂತಾರೆ, ಹುಲಿಯಾ ಅಂತಾರೆ ಅದು ಅಸಾಂವಿಧಾನಕವೇ. ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರನ್ನು ರಾಜಾಹುಲಿ ಎಂದು ಅವರ ಪಕ್ಷದವರೇ ಕರೆಯುತ್ತಾರೆ. ಅವರು ಹುಲಿಯಾ. ನಾಯಿ ಎಂದರೆ ನಂಬಿಕೆಯುಳ್ಳ ಪ್ರಾಣಿ ಎಂದು ಹೇಳಿದರು.

ರಸ್ತೆ ಗುಂಡಿ ಬಗ್ಗೆ ಮಾತಾಡಬೇಡಿ, ಲವ್ ಜಿಹಾದ್ ಬಗ್ಗೆ ಮಾತಾಡಿ ಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್ ಇದ್ದ ಹಾಗೆ. ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ. ಬಾಲಿಷವಾಗಿ, ಬೇಜವಾಬ್ದಾರಿಯಾಗಿ ಮಾತನಾಡುತ್ತಾರೆ. ಅವರೊಬ್ಬರು ಬಿಜೆಪಿಯಲ್ಲಿ ವಿದೂಷಕರಾಗಿದ್ದಾರೆ. ನನ್ನನ್ನು ಜೈಲಿಗೆ ಕಳುಹಿಸಲು ಅವರಿಗೆ ಆಗುತ್ತದೆಯೇ? ಕೋರ್ಟ್​ನಲ್ಲಿ ತಪ್ಪಿತಸ್ಥ ಅಂತ ತೀರ್ಪು ಬಂದರೆ ಮಾತ್ರ ಜೈಲಿಗೆ ಹಾಕಬೇಕು. ಕಾನೂನು ಗೊತ್ತಿಲ್ಲದೆ ಪೆದ್ದು ಪೆದ್ದಾಗಿ ನಳಿನ್ ಕುಮಾರ್ ಕಟೀಲ್ ಮಾತಾಡುತ್ತಾರೆ ಎಂದು ತಿರುಗೇಟು ನೀಡಿದರು.

ವಿಧಾನಸೌಧದಲ್ಲಿ ಪಿಡಬ್ಲ್ಯುಡಿ ಇಂಜಿನಿಯರ್ ಬಳಿ 10 ಲಕ್ಷ ಹಣ ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇದು ಒಂದೇ ಅಲ್ಲ. ಬಿಜೆಪಿ ಸರ್ಕಾರದಲ್ಲಿ ಬೇಕಾದಷ್ಟು ಭ್ರಷ್ಟಾಚಾರ ಇದೆ. ಕಾಂಟ್ರಾಕ್ಟರ್ ಅಸೋಸಿಯೇಷನ್​ನವರು 40% ಸರ್ಕಾರ ಎಂದು ಹೇಳಿದ್ದಾರೆ. ಭ್ರಷ್ಟಾಚಾರದಿಂದ ಈಶ್ವರಪ್ಪ ಅವಧಿಯಲ್ಲಿ ಸಂತೋಷ್ ಎಂಬ ಗುತ್ತಿಗೆದಾರ ಸಾವನ್ನಪ್ಪಿದರು. ಪ್ರಸಾದ್ ಎಂಬವರು ಸಾವನ್ನಪ್ಪಿದರು. ಶಿವಕುಮಾರ್ ಎಂಬವರು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲದೆ ಏನೂ ನಡೆಯುವುದಿಲ್ಲ. ಎನ್​ಓಸಿ ಗೆ, ವರ್ಗಾವಣೆಗೆ ಭ್ರಷ್ಟಾಚಾರ ಮಾಡಲಾಗುತ್ತದೆ ಎಂದು ಹೇಳಿದರು.

ಕುದ್ರೋಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ: ಮಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ, ಅಲ್ಲಿನ ಪ್ರಸಿದ್ಧ ಕುದ್ರೋಳಿ ದೇವಸ್ಥಾನಕ್ಕೆ ಆಗಮಿಸಿದರು‌. ಮೊದಲಿಗೆ ಕುದ್ರೋಳಿ ದೇವಸ್ಥಾನದ ಹನುಮಾನ್ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ, ನಂತರ ಅವರು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಶಿವಮೊಗ್ಗ ಸ್ಫೋಟ ಪ್ರಕರಣ: ಕೊಣಾಜೆ ಇಂಜಿನಿಯರಿಂಗ್​ ಕಾಲೇಜ್​ ಮೇಲೆ ಎನ್ಐಎ ದಾಳಿ, ವಿದ್ಯಾರ್ಥಿ ವಶ

Next Post

ಮಂಗಳೂರು ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಭೀಕರ ಬೆಂಕಿ ಅನಾಹುತ, ದಟ್ಟ ಹೊಗೆ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
30
Next Post
ಮಂಗಳೂರು ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಭೀಕರ ಬೆಂಕಿ ಅನಾಹುತ, ದಟ್ಟ ಹೊಗೆ

ಮಂಗಳೂರು ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಭೀಕರ ಬೆಂಕಿ ಅನಾಹುತ, ದಟ್ಟ ಹೊಗೆ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
66
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d