• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜುವೆಲ್ಲರಿ ಉದ್ಯೋಗಿ ಹತ್ಯೆ ; ಆರೋಪಿ ಸೆರೆಹಿಡಿದಿದ್ದೇ ರೋಚಕ ಕಹಾನಿ , ಪೊಲೀಸರಿಗೆ ಕ್ಲೂ ಕೊಟ್ಟಿದ್ದ ಕಪ್ಪು ಬ್ಯಾಗ್, ಕಪ್ಪು ಶರ್ಟ್ !

Coastal Times by Coastal Times
March 5, 2023
in ಕ್ರೈಮ್ ನ್ಯೂಸ್
ಜುವೆಲ್ಲರಿ ಉದ್ಯೋಗಿ ಹತ್ಯೆ ; ಆರೋಪಿ ಸೆರೆಹಿಡಿದಿದ್ದೇ ರೋಚಕ ಕಹಾನಿ , ಪೊಲೀಸರಿಗೆ ಕ್ಲೂ ಕೊಟ್ಟಿದ್ದ ಕಪ್ಪು ಬ್ಯಾಗ್, ಕಪ್ಪು ಶರ್ಟ್ !
353
VIEWS
WhatsappTelegramShare on FacebookShare on Twitter

ಮಂಗಳೂರು: ಕಳೆದ ತಿಂಗಳು ಹಾಡುಹಗಲೇ ನಗರದ ಜುವೆಲ್ಲರಿ ಅಂಗಡಿಗೆ ನುಗ್ಗಿ ಸೇಲ್ಸ್‌ಮ್ಯಾನ್‌ನ್ನು ಹತ್ಯೆಗೈದಿದ್ದ ಆರೋಪಿ ಶಿಫಾಸ್‌(30) ಒಬ್ಬರೇ ಇರುವ ಚಿನ್ನಾಭರಣ ಅಂಗಡಿಗಳನ್ನು ಗುರಿಯಾಗಿಟ್ಟುಕೊಂಡು ಹೊಂಚು ಹಾಕುತ್ತಿದ್ದ ಎಂದು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ತಿಳಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಾ.2ರಂದು ಕಾಸರಗೋಡು ಪೊಲೀಸರು ಶಂಕೆ ಮೇರೆಗೆ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆನಂತರ, ನಮ್ಮ ಮಂಗಳೂರಿನ ಪೊಲೀಸರ ತಂಡ ಅಲ್ಲಿಗೆ ತೆರಳಿ ತನಿಖೆ ನಡೆಸಿದಾಗ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಆರೋಪಿ ಶಿಫಾಸ್ ಕ್ಯಾಲಿಕಟ್ ನಿವಾಸಿಯಾಗಿದ್ದು, ಇದೇ ರೀತಿ ಕರ್ನಾಟಕ, ಕೇರಳ, ತಮಿಳುನಾಡಿನ ಗಡಿಭಾಗದಲ್ಲಿ ದರೋಡೆ ನಡೆಸುವ ಉದ್ದೇಶ ಹೊಂದಿರುವುದು ವಿಚಾರಣೆ ವೇಳೆ ಪತ್ತೆಯಾಗಿದೆ. ಈ ಹಿಂದೆ ಇಂತಹ ಕೃತ್ಯ ಎಸಗಿದ್ದಾನೆಯೇ ಅನ್ನುವುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದರು.

ಕೊಲೆಗೈದು ನಡೆದುಕೊಂಡೇ ಹೋಗಿದ್ದ ಆರೋಪಿ ; ಆರೋಪಿ ಶಿಫಾಝ್‌ ಮಂಗಳೂರು ಜ್ಯುವೆಲರ್ಸ್ ಅಂಗಡಿ ಸಿಬ್ಬಂದಿ ರಾಘವೇಂದ್ರ ಆಚಾರ್ಯನನ್ನು ಕೊಲೆಗೈದು ಒಂದಷ್ಟು ದೂರ ನಡೆದುಕೊಂಡೇ ಹೋಗಿ ಅಲ್ಲಿಂದ ರಿಕ್ಷಾ ಬಳಸಿ ನಗರದ ಹೊರವಲಯಕ್ಕೆ ತಲುಪಿ ಬಸ್‌ ಮೂಲಕ ಕಾಸರಗೋಡಿಗೆ ಹೋಗಿದ್ದನು.

ಕಾಸರಗೋಡಿನಿಂದ ರೈಲಿನ ಮೂಲಕ ಕೊಚ್ಚಿಗೆ ಕಾಲ್ಕಿತ್ತಿದ್ದನು ಎಂದು ಪೊಲೀಸ್‌ ತನಿಖೆ ವೇಳೆ ಬಯಲಾಗಿದೆ. ಸದ್ಯ ಈ ಬಂಧಿತ ಆರೋಪಿಯ ವಿರುದ್ದ ಪ್ರಕರಣಗಳು ದಾಖಲಾದ ಬಗ್ಗೆ ಮಾಹಿತಿಯಿಲ್ಲ. ಇದೀಗ ಈ ಬಗ್ಗೆ ನೆರೆರಾಜ್ಯ ಹಾಗೂ ಉಳಿದ ಜಿಲ್ಲೆಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಬ್ಯಾಗ್‌ನಿಂದ ಗುರುತು : ಆರೋಪಿಯ ಪತ್ತೆ ಸವಾಲಾಗಿತ್ತು. ಆತನ ಮುಖಚರ್ಯೆ ಸ್ಪಷ್ಟವಾಗಿ ಯಾವುದೇ ಸಿಸಿ ಕೆಮರಾದಲ್ಲಿ ದಾಖಲಾಗಿರಲಿಲ್ಲ. ಹಾಗಾಗಿ ಆತನ ಚಹರೆ, ಸಿಸಿ ಕೆಮರಾದಲ್ಲಿ ದಾಖಲಾಗಿದ್ದ ಚಿತ್ರಗಳನ್ನು ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಸಾರ್ವಜನಿಕರಿಂದ ಮಾಹಿತಿ ಕೋರಲಾಗಿತ್ತು. ಇದನ್ನು ಗಮನಿಸಿದ ಕಾಸರಗೋಡಿನ ಪೊಲೀಸರು ಓರ್ವ ಶಂಕಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದು ಮಾಹಿತಿ ನೀಡಿದ್ದರು. ಆತ ಧರಿಸಿದ್ದ ಬ್ಯಾಗ್‌ನ ಆಧಾರದಲ್ಲಿ ಗುರುತು ಪತ್ತೆ ಮಾಡಿದ್ದರು. ಬಳಿಕ ಮಂಗಳೂರು ಪೊಲೀಸರು ವಿಚಾರಿಸಿದಾಗ ಆತನೇ ಆರೋಪಿ ಎಂಬುದು ಗೊತ್ತಾಗಿದೆ ಎಂದು ಆಯುಕ್ತರು ತಿಳಿಸಿದರು.

ರಕ್ತದ ಕಲೆ ಸಿಗದಿರಲು 2-3 ಬಟ್ಟೆ : ತಾನು ಚೂರಿಯಿಂದ ಇರಿದ ಅನಂತರ ತನ್ನ ಬಟ್ಟೆ ಮೇಲೆ ರಕ್ತ ಚೆಲ್ಲುವುದರಿಂದ ಬಟ್ಟೆಯನ್ನು ಎಲ್ಲಿಯಾದರೂ ಬಿಸಾಡಿ ಹೋಗುವುದು ಆರೋಪಿಯ ಯೋಚನೆಯಾಗಿತ್ತು. ಅದಕ್ಕಾಗಿ 3-4 ಬಟ್ಟೆಗಳನ್ನು ಒಂದರ ಮೇಲೆ ಒಂದರಂತೆ ಧರಿಸುತ್ತಿದ್ದ. ಕಾಸರಗೋಡಿನಲ್ಲಿ ವಶಕ್ಕೆ ಪಡೆಯುವಾಗಲೂ ಅದೇ ರೀತಿ ಬಟ್ಟೆ ಧರಿಸಿದ್ದ. ಆತ ಕಾಸರಗೋಡಿನಲ್ಲಿ ಅಂತಹುದೇ ಕೃತ್ಯ ನಡೆಸಲು ಹೊಂಚು ಹಾಕುತ್ತಿದ್ದುದು ಗೊತ್ತಾಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು.

ಪೊಲೀಸರಿಗೆ ಅಭಿನಂದನೆ : ಕಾರ್ಯಾಚರಣೆಯಲ್ಲಿ ಮಂಗಳೂರಿನ ಡಿಸಿಪಿ ಅಂಶುಕುಮಾರ್‌ ಅವರ ನೇತೃತ್ವದ 8 ಪೊಲೀಸ್‌ ತಂಡ ಹಾಗೂ ಕಾಸರಗೋಡು ಡಿವೈಎಸ್‌ಪಿ ಸುಧಾಕರನ್‌ ನೇತೃತ್ವದ ಪೊಲೀಸ್‌ ತಂಡ ಪಾಲ್ಗೊಂಡಿವೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು. ಪೊಲೀಸ್‌ ತಂಡಗಳಿಗೆ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಆಯುಕ್ತರು ಗೌರವಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ರೋಹನ್ ಕಾರ್ಪೊರೇಷನ್‌ನಿಂದ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

Next Post

ಮಂಗಳೂರು : ಬ್ಯಾರಿ ಮೇಳ ‘ಲಿಂಗತ್ವ ಅಸಮಾನತೆ ತೊಡೆದು ಹಾಕಿ’ – ಅಸ್ಮಾ ಮೊಹಮ್ಮದ್ ಅಸಫ್

Related Posts

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ
ಕ್ರೈಮ್ ನ್ಯೂಸ್

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
52
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
56
Next Post
ಮಂಗಳೂರು : ಬ್ಯಾರಿ ಮೇಳ  ‘ಲಿಂಗತ್ವ ಅಸಮಾನತೆ ತೊಡೆದು ಹಾಕಿ’ – ಅಸ್ಮಾ ಮೊಹಮ್ಮದ್ ಅಸಫ್

ಮಂಗಳೂರು : ಬ್ಯಾರಿ ಮೇಳ ‘ಲಿಂಗತ್ವ ಅಸಮಾನತೆ ತೊಡೆದು ಹಾಕಿ’ - ಅಸ್ಮಾ ಮೊಹಮ್ಮದ್ ಅಸಫ್

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
52
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d