ಮಂಗಳೂರು, ಮಾ.5: ಕಡಬದ ಸರ್ಕಾರಿ ಕಾಲೇಜಿನಲ್ಲಿ ಏಸಿಡ್ ದಾಳಿಗೀಡಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿಯಾಗಿದ್ದಾರೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಕ್ಷಣದ ಪರಿಹಾರವಾಗಿ ತಲಾ ನಾಲ್ಕು ಲಕ್ಷ ರೂಪಾಯಿ ನೀಡಲಾಗುವುದು. ಜೊತೆಗೆ, ವಿದ್ಯಾರ್ಥಿನಿಯರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.
ಘಟನೆಯಲ್ಲಿ ಒಬ್ಬಳು ವಿದ್ಯಾರ್ಥಿನಿಗೆ ಹೆಚ್ಚು ಗಾಯಗಳಾಗಿದ್ದು, ಇನ್ನಿಬ್ಬರಿಗೆ ಕಡಿಮೆ ಗಾಯಗಳಾಗಿವೆ. ಇಬ್ಬರಿಗೆ ಪ್ಲಾಸ್ಟಿಕ್ ಸರ್ಜರಿ ಅಗತ್ಯ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಮುಂದಿನ ಎರಡು ವಾರದ ಚಿಕಿತ್ಸೆ ಬಳಿಕ ಪ್ಲಾಸ್ಟಿಕ್ ಸರ್ಜರಿ ಬಗ್ಗೆ ವೈದ್ಯರು ನಿರ್ಧರಿಸಲಿದ್ದಾರೆ. ಪ್ಲಾಸ್ಟಿಕ್ ಸರ್ಜರಿ ಗೆ ಇಪ್ಪತ್ತು ಲಕ್ಷದ ತನಕವೂ ಚಿಕಿತ್ಸಾ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು.
ಆರೋಪಿ ಆ್ಯಸಿಡ್ ನ್ನು ಪ್ಲಾಸ್ಟಿಕ್ ಬಾಟಲ್ ನಲ್ಲಿ ತಂದಿದ್ದ ಅಂತಾ ಪೊಲೀಸರು ಹೇಳಿದ್ದಾರೆ. ಆ್ಯಸಿಡ್ ತೀವ್ರ ಪ್ರಮಾಣದ್ದು ಆಗಿದ್ದರೆ ದೊಡ್ಡ ಮಟ್ಟದ ಗಾಯಗಳಾಗುತ್ತಿತ್ತು. ಎಲ್ಲಾ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.
ಸದ್ಯಕ್ಕೆ ಮೂವರು ವಿದ್ಯಾರ್ಥಿನಿಯರಿಗೂ ತಲಾ ನಾಲ್ಕು ಲಕ್ಷದಂತೆ ತಕ್ಷಣದ ಪರಿಹಾರವಾಗಿ ಸರ್ಕಾರದಿಂದ ನೀಡಲಾಗುವುದು. ಆನಂತರ, 20 ಲಕ್ಷದಷ್ಟು ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಒದಗಿಸಲಾಗುವುದು. ಅದನ್ನು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಕೊಡಿಸುವ ವ್ಯವಸ್ಥೆಯನ್ನು ಮಾಡುತ್ತೇನೆ ಎಂದು ಮಹಿಳಾ ಆಯೋಗದ ಅಧ್ಯಕ್ಷರು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post