ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಅವರ ವಿರುದ್ಧ ಎಫ್ಐ ಆರ್ ದಾಖಲಿಸಿರುವುದನ್ನು ಹಾಗೂ ಪರಿಶಿಷ್ಟ ಸಮುದಾಯದ ಯುವಕನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಮಾ.4ರ ಮಂಗಳವಾರ ಹಂಪನಕಟ್ಟೆಯ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನಕಾರನ್ನು ಉದ್ದೇಶಿಸಿ ಮಾತನಾಡಿದ ಸಂಸದ ಬ್ರಿಜೇಶ ಚೌಟ, ಕಾಂಗ್ರೆಸ್ ಆಡಳಿತದಲ್ಲಿ ಜನ ನೆಮ್ಮದಿಯಿಂದ ಇಲ್ಲದಿರುವುದು ಮಾತ್ರವಲ್ಲ ಜನಪ್ರತಿನಿಧಿಗಳನ್ನೂ ಟಾರ್ಗೆಟ್ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಾಂಗ್ಲಾ ಮಾದರಿ ರಾಜ್ಯಪಾಲರನ್ನು ಓಡಿಸುತ್ತೇವೆ ಎಂದು ಹೇಳಿದ್ದ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ಮೇಲೆ ಎಫ್.ಐ.ಆರ್. ದಾಖಲಿಸಲು ಪೊಲೀಸರಿಗೆ ಲೀಗಲ್ ಒಪೀನಿಯನ್ ಬೇಕಿತ್ತು. ಪುಂಡ ಪೋಕರಿಗಳು ಶಾಸಕರ ವಿರುದ್ಧ ದೂರು ನೀಡಿದಾಗ ಏನೆಂದು ವಿಚಾರಿಸದೆ ಎಫ್.ಐ.ಆರ್. ದಾಖಲಿಸಿರುವುದು ಖಂಡನೀಯ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಮಾತನಾಡಿದರು. ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ರಾಜಗೋಪಾಲ ರೈ, ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ಮನೋಜ್ ಕುಮಾರ್, ದಿವಾಕರ್ ಪಾಂಡೇಶ್ವರ, ಭಾನುಮತಿ, ವಿಜಯ ಕುಮಾರ್ ಶೆಟ್ಟಿ, ನಂದನ್ ಮಲ್ಯ, ನಿತಿನ್ ಕುಮಾರ್, ಪೂರ್ಣಿಮಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post