• About us
  • Contact us
  • Disclaimer
Sunday, May 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎಂಸಿಸಿ ಬ್ಯಾಂಕ್ ಗೆ 13.12 ಕೋಟಿ ರೂ. ಲಾಭ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ

Coastal Times by Coastal Times
April 5, 2024
in ಕೋಸ್ಟಾಲ್ ಟೈಮ್ಸ್ ವಿಶೇಷ
ಎಂಸಿಸಿ ಬ್ಯಾಂಕ್ ಗೆ 13.12 ಕೋಟಿ ರೂ. ಲಾಭ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ
36
VIEWS
WhatsappTelegramShare on FacebookShare on Twitter

ಮಂಗಳೂರು,ಎ.5: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಂ.ಸಿ.ಸಿ. ಬ್ಯಾಂಕ್ ಮಾರ್ಚ್ 2024ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಲೆಕ್ಕ ಪರಿಶೋಧನಾ ಪೂರ್ವ 13.12 ಕೋಟಿ ರೂ. ವ್ಯವಹಾರಿಕ ಲಾಭ ಗಳಿಕೆ ದಾಖಲಿಸಿದೆ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ.

ಮಿಲಾಗ್ರಿಸ್ ನ ಸೆನೆಟ್ ಹಾಲ್ ನಲ್ಲಿಂದು ಕರೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಸಿಸಿ ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆಗೊಳಿಸಲು ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಥಮ ಬಾರಿಗೆ 1.07% ಎನ್.ಪಿ.ಎ. ದಾಖಲಿಸಿದೆ ಎಂದರು. ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ 2023-2024ನೇ ವಿತ್ತೀಯ ವರ್ಷದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯ ಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಹೀಗೆ 5 ಜಿಲ್ಲೆಗಳಿಗೆ ವಿಸ್ತರಿಸಿದೆ. ಪ್ರಸಕ್ತ ವರ್ಷ ಬ್ಯಾಂಕ್ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಅನುಮತಿ ದೊರಕಿದ್ದು, ಇದೊಂದು ಮಹತ್ವದ ಸಾಧನೆಯಾಗಿದೆ ಎಂದವರು ಹೇಳಿದರು.

ಈಗಾಗಲೇ ಬ್ರಹ್ಮಾವರದಲ್ಲಿ ಬ್ಯಾಂಕಿನ 17ನೇ ಶಾಖೆಯನ್ನು ತೆರೆದಿದ್ದು, ಕಾವೂರು, ಬೆಳ್ತಂಗಡಿ ಮತ್ತು ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಶಾಖೆಗಳನ್ನು ತೆರೆಯಲಾಗುವುದು. ಅನಿವಾಸಿ ಭಾರತೀಯರರಿಗೆ (ಎನ್.ಆರ್.ಐ) ಸೇವಾ ಸೌಲಭ್ಯವನ್ನು ನೀಡುವ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಪೈಕಿ ಎರಡನೇ ಬ್ಯಾಂಕ್ ಆಗಿರುತ್ತದೆ. ರಾಜ್ಯದಲ್ಲಿ ಹಂತ ಹಂತಗಳಲ್ಲಿ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಈ ನಡುವೆ ಬ್ಯಾಂಕಿನ ವ್ಯವಹಾರವು ಡಿಸೆಂಬರ್ ಅಂತ್ಯಕ್ಕೆ 1,000 ಕೋಟಿ ರೂ. ತಲುಪಿದ್ದು, ಈ ಆರ್ಥಿಕ ವರ್ಷದ ಇನ್ನೊಂದು ಮಹತ್ವದ ಸಾಧನೆಯಾಗಿರುತ್ತದೆ ಎಂದವರು ತಿಳಿಸಿದರು.

ಪ್ರಸಕ್ತ ಅರ್ಥಿಕ ವರ್ಷದಲ್ಲಿ ಅನಿಲ್ ಲೋಬೊ ನೇತೃತ್ವದ 14 ಸದಸ್ಯರು 2023-28ನೇ ವರ್ಷಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದು, 2023ರ ಆಗಸ್ಟ್ 28ರಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಅನಿಲ್ ಲೋಬೊ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಬ್ಯಾಂಕಿನ ಸದಸ್ಯರು ಬ್ಯಾಂಕಿನ ಮೇಲೆ ಹೊಂದಿರುವ ವಿಶ್ವಾಸವೇ ಇದಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 17 ಶಾಖೆಗಳನ್ನು ಹೊಂದಿರುವ ಎಂ.ಸಿ.ಸಿ. ಬ್ಯಾಂಕ್ 2023-24ನೇ ವಿತ್ತೀಯ ವರ್ಷದಲ್ಲಿ ದಾಖಲೆಯ 13.12 ಕೋಟಿ ರೂ. ವ್ಯವಹಾರಿಕ ಲಾಭ ಗಳಿಸಿದೆ. ಈ ವಿತ್ತೀಯ ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿಯನ್ನು ದಾಖಲಿಸಿದ್ದು, ಬ್ಯಾಂಕಿನ ನಿವ್ವಳ ಮೌಲ್ಯ (Net Worth) ರೂ. 62.45 ಕೋಟಿಯಿಂದ ರೂ.76.35 ಕೋಟಿಗೆ ತಲುಪಿದೆ. ಬ್ಯಾಂಕಿನ ವ್ಯವಹಾರ ರೂ.1081 ಕೋಟಿ ದಾಟಿದ್ದು, ಕಳೆದ ವರ್ಷಕ್ಕಿಂತ ಶೇ.16 ಏರಿಕೆಯಾಗಿದೆ ಎಂದು ಅನಿಲ್ ಲೊಬೊ ತಿಳಿಸಿದರು.

ಬ್ಯಾಂಕಿನ ಸದಸ್ಯರು ಬ್ಯಾಂಕಿನ ಪ್ರಸಕ್ತ ಆಡಳಿತ ಮಂಡಳಿಗೆ ನೀಡಿದ ಬೆಂಬಲ, ಗ್ರಾಹಕರ ವಿಶ್ವಾಸ ಮತ್ತು ಅಧಿಕಾರಿವರ್ಗ ಹಾಗೂ ಸಿಬ್ಬಂದಿಯ ಶ್ರಮದಿಂದ ಇದು ಸಾಧ್ಯವಾಗಿದೆ. ಜೊತೆಗೆ ಸಾಕಷ್ಟು ಅನಿವಾಸಿ ಭಾರತೀಯರು ಬ್ಯಾಂಕಿನಲ್ಲಿ ವ್ಯವಹಾರ ಮತ್ತು ಹೂಡಿಕೆಯನ್ನು ಮಾಡಿರುತ್ತಾರೆ ಎಂದವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ ನಿರ್ದೇಶಕರಾದ ಆ್ಯಂಡ್ರೂ ಡಿಸೋಜ, ಡಾ.ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೋ, ಜೆ.ಪಿ.ರೊಡ್ರಿಗಸ್, ಡೇವಿಡ್ ಡಿಸೋಜ, ಎಲ್ರಾಯ್ ಕಿರಣ್ ಕ್ರಾಸ್ಟಾ, ಹೆರಾಲ್ಡ್ ಮೊಂತೆರೊ, ರೋಶನ್ ಡಿಸೋಜ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ.ಪಿಂಟೊ, ಸುಶಾಂತ್ ಸಲ್ಡಾನ, ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಡಿಸೋಜ, ಆಶ್ವಿನ್ ಪಿ. ಮೊಂತೆರೊ, ಫೆಲಿಕ್ಸ್ ಡಿ ಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಮಹಾಪ್ರಬಂಧಕ ಸುನೀಲ್ ಮಿನೇಜಸ್ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

20 ಗಂಟೆ ಅನ್ನ, ನೀರು, ಗಾಳಿ-ಬೆಳಕು ಇಲ್ಲದೇ ಬದುಕಿ ಬಂದ: ಸಾತ್ವಿಕ್ ಆರೋಗ್ಯ ನೋಡಿ ವೈದ್ಯರೇ ಶಾಕ್!

Next Post

ಪ್ರಜ್ವಲ್‌ ರೇವಣ್ಣ ಯಾವುದೇ ದೇಶದಲ್ಲಿದ್ರೂ ಬಿಡಲ್ಲ : ಸಿಎಂ ಸಿದ್ದರಾಮಯ್ಯ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ಕೋಸ್ಟಾಲ್ ಟೈಮ್ಸ್ ವಿಶೇಷ

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
20
ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ
ಕೋಸ್ಟಾಲ್ ಟೈಮ್ಸ್ ವಿಶೇಷ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
195
Next Post
ಪ್ರಜ್ವಲ್‌ ರೇವಣ್ಣ ಯಾವುದೇ ದೇಶದಲ್ಲಿದ್ರೂ ಬಿಡಲ್ಲ : ಸಿಎಂ ಸಿದ್ದರಾಮಯ್ಯ

ಪ್ರಜ್ವಲ್‌ ರೇವಣ್ಣ ಯಾವುದೇ ದೇಶದಲ್ಲಿದ್ರೂ ಬಿಡಲ್ಲ : ಸಿಎಂ ಸಿದ್ದರಾಮಯ್ಯ

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d