• About us
  • Contact us
  • Disclaimer
Friday, May 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್

Coastal Times by Coastal Times
April 5, 2026
in ಕರಾವಳಿ
ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆಯ ಆರ್ಥಿಕ ವ್ಯವಹಾರ; 131.14 ಕೋಟಿ ರೂ. ಲಾಭ: ಡಾ.ರಾಜೇಂದ್ರ ಕುಮಾರ್
18
VIEWS
WhatsappTelegramShare on FacebookShare on Twitter

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಬ್ಯಾಂಕು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ತನ್ನ 113 ಶಾಖೆಗಳ ಮೂಲಕ ಆರ್ಥಿಕ ವರ್ಷದಲ್ಲಿ ಅಮೋಘ ಸಾಧನೆಯನ್ನು ಗೈದಿದೆ. 2026ರ ಮಾರ್ಚ್ ತಿಂಗಳ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ.131.14ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷದ ಲಾಭ (ರೂ.110.41 ಕೋಟಿ) ಕ್ಕಿಂತ ಶೇಕಡಾ 18.78% ಏರಿಕೆಯಾಗಿದೆ. ಇದು ರಾಜ್ಯದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳ ಪೈಕಿ ಸಾರ್ವಕಾಲಿಕ ದಾಖಲೆ ಲಾಭಗಳಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಮಂಗಳೂರು ಇದರ ಅಧ್ಯಕ್ಷರಾದ ಡಾ। ಎಂ.ಎನ್. ರಾಜೇಂದ್ರ ಕುಮಾ‌ರ್ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಬ್ಯಾಂಕಿನ ಅನುತ್ಪಾದಕ ಆಸ್ತಿಯ ಪ್ರಮಾಣವು ಶೇ.2.42 ನಿಂದ ಶೇ.2.21 ಪ್ರಮಾಣಕ್ಕೆ ಇಳಿಕೆಯಾಗಿದೆ. ಇದು ಬ್ಯಾಂಕಿನ ಪ್ರಗತಿಯನ್ನು ಸೂಚಿಸುತ್ತದೆ ಎಂದು ಡಾ। ಎಂ.ಎನ್. ರಾಜೇಂದ್ರ ಕುಮಾ‌ರ್ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಸಮೃದ್ಧ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ ಸಿಡಿಸಿಸಿ ಬ್ಯಾಂಕ್) ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ವಿಶಿಷ್ಟ ಹಾಗೂ ವಿನೂತನ ಸೇವೆ ಗಳನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿದೆ. ಅಭಿವೃದ್ಧಿಯ ಮುಂಚೂಣಿಯಲ್ಲಿರುವ ಬ್ಯಾಂಕ್ ಕೋರ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್‌ ನಂತಹ ಉತೃಷ್ಣ ಬ್ಯಾಂಕಿಂಗ್ ವ್ಯವಸ್ಥೆಯ ಜೊತೆಗೆ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಮೂಲಕ ಯು.ಪಿ.ಐ. (UPI) ಮತ್ತು ಐ.ಎಮ್.ಪಿ.ಎಸ್. (IMPS) ಸೌಲಭ್ಯಗಳನ್ನು ಅಳವಡಿಸಿಕೊಂಡು ಗಣನೀಯ ಪ್ರಗತಿಯನ್ನು ಕಂಡಿದೆ.

ದಾಖಲೆಯ ರೂ.20226.19 ಕೋಟಿ ವ್ಯವಹಾರ, ದಾಖಲೆಯ ರೂ. 131.14 ಕೋಟಿ ಲಾಭ :-ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವ ಹಿಸುತ್ತಿರುವ ಎಸ್‌ ಸಿಡಿಸಿಸಿ ಬ್ಯಾಂಕ್ ಗ್ರಾಹಕರನ್ನು ಹೆಚ್ಚು ಆಕರ್ಷಿ ಸುತ್ತಿದ್ದು, 2025-26ನೇ ವರದಿ ವರ್ಷದಲ್ಲಿ ರೂ.20226.19 ಕೋಟಿ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕೆ (ರೂ.17366.68 ಕೋಟಿ) ಹೋಲಿಸಿದರೆ ಈ ಬಾರಿ ಶೇ.16.47% ಏರಿಕೆಯನ್ನು ಕಂಡು ರಾಜ್ಯದಲ್ಲೇ ಹೊಸ ದಾಖಲೆಯನ್ನು ನಿರ್ಮಿಸಿದೆ. 2026-27ನೇ ಸಾಲಿಗೆ ರೂ.22500.00 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

9264.64 ಕೋಟಿ ರೂ. ಠೇವಣಿ ಸಂಗ್ರಹ; ಠೇವಣಿಗಳ ಸಂಗ್ರಹಣೆಯಲ್ಲಿ ಎಲ್ಲಾ ಬ್ಯಾಂಕ್‌ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ತನ್ನ 113 ಶಾಖೆಗಳ ಮುಖಾಂತರ ಒಟ್ಟು ರೂ.9264.64 ಕೋಟಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಈ ಮೂಲಕ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ.17.53 ಹೆಚ್ಚಾಗಿದೆ.

ಸ್ಪರ್ಧಾತ್ಮಕ ವ್ಯವಹಾರದಲ್ಲಿ ನ್ಯಾಂಕ್ ರೂ.9766.75 ಕೋಟಿ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.2106.5೦ ಕೋಟಿ ರೂಪಾಯಿ. ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರಬಾಕಿ ರೂ.10961.5ರ ಕೋಟಿಯಾಗಿರುತ್ತದೆ.ಸತತ 31 ವರ್ಷಗಳಿಂದ ಕೃಷಿ ಸಾಲ ಮರು ಪಾವತಿಯಲ್ಲಿ ಶೇಕಡಾ 100ರ ಸಾಧನೆ ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ 100ರ ಮರುಪಾವತಿಯನ್ನು ಕಂಡು ದಾಖಲೆ ನಿರ್ಮಿಸಿ ಸಾಧನೆಗೈದಿದೆ. ಇಂತಹ ಸಾಧನೆಯನ್ನು ಕಳೆದ 31 ವರ್ಷಗಳಿಂದ ಬ್ಯಾಂಕ್ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.

“ರುಪೇ” (RuPay) ಕಿಸಾನ್ ಕ್ರೆಡಿಟ್ ಕಾರ್ಡ್ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ (RuPay) ಕಿಸಾನ್ ಕಾರ್ಡ್‌ನ್ನು ನೀಡಿದೆ. ಈಗಾಗಲೇ 1,44,701 ರುಪೇ ಕಿಸಾನ್ ಕಾರ್ಡ್‌ ಗಳನ್ನು ರೈತರಿಗೆ ವಿತರಿಸಲಾಗಿದೆ. 92,531 ರುಪೇ ಡೆಬಿಟ್ ಕಾರ್ಡ್‌ ಗಳನ್ನು ಬ್ಯಾಂಕ್‌ನ ಇತರ ಗ್ರಾಹಕರಿಗೆ ನೀಡಲಾಗಿದೆ.

ಸುದ್ದಿ ಗೋಷ್ಠಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಎಂ. ವಾದಿರಾಜ ಶೆಟ್ಟಿ, ಭಾಸ್ಕರ್ ಎಸ್.ಕೋಟ್ಯಾನ್ , ಶಶಿಕುಮಾ‌ರ್ ರೈ ಬಾಲ್ಯೊಟ್ಟು,ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ್ ಕುಮಾರ್ ಶೆಟ್ಟಿ, ಎಂ.ಮಹೇಶ್ ಹೆಗ್ಡೆ , ಮೋನಪ್ಪ ಶೆಟ್ಟಿ ಎಕ್ಕಾರು, ಜೈರಾಜ್ ಬಿ.ರೈ ,ಸದಾಶಿವ ಉಳ್ಳಾಲ್, ರಾಜೇಶ್ ರಾವ್,ಎಸ್.ಎನ್. ಮನ್ಮಥ, ಕುಶಾಲಪ್ಪ ಗೌಡ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲ ಕೃಷ್ಣ ಭಟ್ ಕೆ., ಇವರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಇನಾಯತ್ ಆಲಿ ನೇತೃತ್ವದ ಗುರುಪುರ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

Next Post

ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ

Related Posts

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ
ಕರಾವಳಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
31
ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ
ಕರಾವಳಿ

ಮಂಗಳೂರಿನಲ್ಲಿ ಜೂನ್ 4 ರಿಂದ 13 ರವರೆಗೆ ರಾಷ್ಟ್ರೀಯ ʻಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026′ ಬ್ರಿಡ್ಜ್ ಪಂದ್ಯಾವಳಿ

May 28, 2026
15
Next Post
ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ

ಮಂಗಳೂರು: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ರಿಯಾಯಿತಿ ದರದಲ್ಲಿ ವಿಶೇಷ ಆರೋಗ್ಯ ಕಾರ್ಡ್‌ ಘೋಷಿಸಿದ ಇಂಡಿಯಾನಾ ಆಸ್ಪತ್ರೆ

Discussion about this post

Recent News

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
21
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

ಮಂಗಳೂರು: ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

May 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d