ದೆಹಲಿ, ಜೂನ್ 05: ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಲಿರುವ ನರೇಂದ್ರ ಮೋದಿ ಅವರ ಹವಾ ದೇಶದಲ್ಲಿ ಕಡಿಮೆಯಾದಂತೆ ಕಾಣುತ್ತದೆ. 2024 ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 400 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದರು, ಆದರೆ, ಆ ನಿರೀಕ್ಷೆ ಹುಸಿಯಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ 292 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇಂಡಿಯಾ ಒಕ್ಕೂಟ 234 ಕ್ಷೇತ್ರಗಳನ್ನ ಗೆಲುವು ಸಾಧಿಸಿದೆ. ಎನ್ ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ, 300 ರ ಗಡಿಯನ್ನು ದಾಟಿಲ್ಲ.
ಈ ಎಲ್ಲಾ ಅಂಕಿ ಅಂಶಗಳನ್ನ ಗಮನಿಸಿದರೆ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಕಡಿಮೆಯಾಗಿದೆಯೇ ಎಂಬ ಕುತೂಹಲ ಮೂಡಿದೆ. ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಮೊದಲ ಮತ ಎಣಿಕೆಯಲ್ಲಿ ಹಿನ್ನೆಲೆಯನ್ನ ಅನುಭವಿಸಿದ್ದು, ಹಲವು ಪ್ರಶ್ನೆಗಳು ಹುಟ್ಟುವಂತೆ ಮಾಡಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಮೋದಿ ಈ ಬಾರಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಮಾತ್ರ ಸ್ಪರ್ಧೆ ಮಾಡಿದ್ರ, ಮೋದಿ ಅವರು ವಾರಣಾಸಿಯಲ್ಲಿ 1,52,513 ಮತಗಳ ಅಂತದಲ್ಲಿ ಗೆಲುವು ಸಾಧಿಸಿದ್ದಾರೆ. ಪ್ರಧಾನಿ ಮೋದಿಗೆ ಹೋಲಿಸಿದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷೇತ್ರವಾರು ಹೆಚ್ಚು ಮತಗಳನ್ನು ಪಡೆದಿದ್ದಾರೆ. ಈ ಬಾರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎರಡು ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಿದ್ದು, ಎರಡು ಲೋಕಸಭಾ ಕ್ಷೇತ್ರದಲ್ಲೂ ರಾಹುಲ್ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post