• About us
  • Contact us
  • Disclaimer
Saturday, August 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ರೂ.98.7 ಸಾವಿರ ಹಾರಿಸಿದ ‘ನಿಹಾರಿಕಾ’ಎಂಬ ಹುಡುಗಿ !

Coastal Times by Coastal Times
July 5, 2023
in ಕ್ರೈಮ್ ನ್ಯೂಸ್
ಮಂಗಳೂರು ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ರೂ.98.7 ಸಾವಿರ ಹಾರಿಸಿದ ‘ನಿಹಾರಿಕಾ’ಎಂಬ ಹುಡುಗಿ !
143
VIEWS
WhatsappTelegramShare on FacebookShare on Twitter

ಮಂಗಳೂರು,  : ‘ನಿಹಾರಿಕಾ’ ಎಂಬ ಹುಡುಗಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ತೆರೆದು ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಂಡು, ಅವರ ಬ್ಯಾಂಕ್‌ ಖಾತೆಯಿಂದ ಒಟ್ಟು ರೂ.98.7 ಸಾವಿರ ವರ್ಗಾಯಿಸಿಕೊಂಡು ವಂಚಿಸಿದ ಬಗ್ಗೆ ನಗರದ ಸೆನ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.

‘2023ರ ಫೆ. 26ರಂದು ನನ್ನ ಇನ್‌ಸ್ಟಾಗ್ರಾಂ ಖಾತೆಗೆ ಅಪರಿಚಿತ (nihari_kaaa) ಖಾತೆಯಿಂದ ಹಾಯ್‌ ಎಂಬ ಸಂದೇಶ ಬಂದಿತ್ತು. ನನ್ನ ಪರಿಚಯ ಇದೆಯಾ ಎಂದು ಕೇಳಿದ್ದೆ. ಅದಕ್ಕೆ ‘ನನ್ನ ಹೆಸರು ನಿಹಾರಿಕಾ. ದಿಯಾ ಸಿಸ್ಟಮ್‌ನಲ್ಲಿ ಉದ್ಯೋಗದಲ್ಲಿದ್ದೇನೆ. ದೇರೆಬೈಲ್‌ ಬ್ರಿಗೇಡ್ ಪಿನಾಕಲ್ ಅಪಾರ್ಟ್‌ಮೆಂಟ್‌ ಸಮುಚ್ಚಯದಲ್ಲಿ ವಾಸವಾಗಿದ್ದೇನೆ. ನೀವು ಕಾವೂರಿನಲ್ಲಿ ಕಪ್ಪು ಬಣ್ಣದ ಸ್ಕೂಟರ್‌ನಲ್ಲಿ ಹೋಗುತ್ತಿರುವುದನ್ನು ನೋಡಿದ್ದೆ’ ಎಂದು ಪ್ರತಿಕ್ರಿಯಿಸಿದ್ದರು. ನಂತರವೂ  ಆಗಾಗ ಸಂದೇಶ ಕಳುಹಿಸುವ ಮೂಲಕ ನನ್ನ ಸಂಪರ್ಕದಲ್ಲಿದ್ದರು’ ಎಂದು ವಂಚನೆಗೊಳಗಾದ ವ್ಯಕ್ತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಕೇಕ್ ಖರೀದಿಸಲು ತಾಯಿಯ ಬ್ಯಾಂಕ್ ಖಾತೆಯಿಂದ ಹಣ ಪಾವತಿಸಲು ಪ್ರಯತ್ನಿಸಿ ವಿಫಲವಾದೆ. ನನ್ನ ತಂದೆಯ ಹೆಸರು ಸಶಾನ್ ಟಿ. ಶೆಟ್ಟಿ. ಅವರ ಬ್ಯಾಂಕ್ ಖಾತೆಗೆ ರೂ. 3,800 ವರ್ಗಾಯಿಸಬಹುದೇ’ ಎಂದು ನಿಹಾರಿಕಾ ಒಮ್ಮೆ ಕೋರಿದ್ದರು. ಆಕೆ ಕಳುಹಿಸಿದ ಕ್ಯೂಆರ್ ಕೋಡ್‌ಗೆ ಗೂಗಲ್ ಪೇ ಮೂಲಕ ಅಷ್ಟು ಮೊತ್ತವನ್ನು ಕಳುಹಿಸಿದ್ದೆ. ‌ನಂತರ ಫೆ.27ರಂದು  ಮತ್ತೆ ಸಂದೇಶ ಕಳುಹಿಸಿ, ‘ಸೋದರನಿಗೆ ಅಪಘಾತವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಆತನಿಗೆ ಎಂ.ಆರ್.ಐ ಸ್ಕ್ಯಾನ್ ಮಾಡಿಸಲು ರೂ.28 ಸಾವಿರ ಕಟ್ಟಿದ್ದೇನೆ. ಇನ್ನಷ್ಟು ಹಣದ ಅವಶ್ಯಕತೆ ಇದೆ’ ಎಂದು ತಿಳಿಸಿದ್ದರು. ಮತ್ತೆ ರೂ.5,800  ಅನ್ನು ಗೂಗಲ್ ಪೇ ಮೂಲಕ ಪಾವತಿಸಿದ್ದೆ. ಇದೇ ರೀತಿ ಫೆ 28ರಂದು ಮತ್ತೆ ರೂ.5 ಸಾವಿರ ಕಳುಹಿಸಿದ್ದೆ. ಮಾರ್ಚ್‌ 2ರಿಂದ14ರ ನಡುವೆ ಮತ್ತೆ ಹಂತ ಹಂತವಾಗಿ ಒಟ್ಟು ರೂ.84,100 ಕಳುಹಿಸಿದ್ದೆ. ಬಳಿಕ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪರಿಚಯಮಾಡಿಕೊಂಡ ವ್ಯಕ್ತಿಯ ನಡವಳಿಕೆ ಸಂಶಯ ಬಂತು’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

‘ಯಾರೋ ಅಪರಿಚಿತ ವ್ಯಕ್ತಿ ನನಗೆ ಮೋಸ ಮಾಡುವ ಉದ್ದೇಶದಿಂದ ಹುಡುಗಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ಫೆ 26ರಿಂದ ಮಾ 14ರವರೆಗೆ ಹಂತ ಹಂತವಾಗಿ ಒಟ್ಟು ರೂ.98,700 ಮೊತ್ತವನ್ನು ಆನ್ ಲೈನ್ ಮೂಲಕ  ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಆತನ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಶಿವಮೊಗ್ಗ; ಕಾರಿಗೆ ಡಿಕ್ಕಿ ಹೊಡೆದ ಬಸ್, ಮಂಗಳೂರು ಮೂಲದ ಯುವಕ ಅಶ್ರಫ್ ಕಲ್ಲಾಡಿ ನಿಧನ

Next Post

ದಕ್ಷಿಣ ಕನ್ನಡ: ಶಾಲೆ–ಕಾಲೇಜುಗಳಿಗೆ ಗುರುವಾರ ರಜೆ

Related Posts

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು
ಕ್ರೈಮ್ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
43
ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

August 28, 2026
21
Next Post
ದಕ್ಷಿಣ ಕನ್ನಡ: ಶಾಲೆ–ಕಾಲೇಜುಗಳಿಗೆ ಗುರುವಾರ ರಜೆ

ದಕ್ಷಿಣ ಕನ್ನಡ: ಶಾಲೆ–ಕಾಲೇಜುಗಳಿಗೆ ಗುರುವಾರ ರಜೆ

Discussion about this post

Recent News

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
34
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

August 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d