ಅರ್ಜೆಂಟೀನಾ: ಜಾಗತಿಕ ದಕ್ಷಿಣದೊಂದಿಗೆ ಭಾರತದ ಸಂಬಂಧಗಳನ್ನು ಬಲಪಡಿಸುವ ಮತ್ತು ದಕ್ಷಿಣ ಅಮೆರಿಕಾದ ದೇಶದೊಂದಿಗೆ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಭಾರತ ಹೊಂದಿದೆ. ಹೀಗಾಗಿಯೇ ಐದು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಎರಡು ದಿನಗಳ ಪ್ರವಾಸಕ್ಕಾಗಿ ಶುಕ್ರವಾರ ಅರ್ಜೆಂಟೀನಾದ ಬ್ಯೂನಸ್ ಐರಿಸ್‌ಗೆ ಬಂದಿಳಿದಿದ್ದಾರೆ. ಎಝೀಜಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಮೋದಿ ಅವರಿಗೆ ಔಪಚಾರಿಕ ಸ್ವಾಗತ ಕೋರಲಾಯಿತು.
57 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ದಕ್ಷಿಣ ಅಮೆರಿಕಾದ ದೇಶಕ್ಕೆ ನೀಡುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಹೀಗಾಗಿ ಇದನ್ನು ಐತಿಹಾಸಿಕ ಭೇಟಿ ಎಂದು ಬಣ್ಣಿಸಲಾಗುತ್ತಿದೆ.
ಅರ್ಜೆಂಟೀನಾ ಜೊತೆಗಿನ ಸಂಬಂಧಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ದ್ವಿಪಕ್ಷೀಯ ಭೇಟಿಗಾಗಿ ಬ್ಯೂನಸ್ ಐರಿಸ್‌ಗೆ ಬಂದಿಳಿದಿದ್ದೇನೆ. ಅಧ್ಯಕ್ಷ ಜೇವಿಯರ್ ಮಿಲಿ ಅವರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ವಿವರವಾದ ಮಾತುಕತೆ ನಡೆಸಲು ನಾನು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಮೋದಿ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ನಮ್ಮ ರಾಷ್ಟ್ರಗಳ ನಡುವಿನ ಶಾಶ್ವತ ಸ್ನೇಹವನ್ನು ಮತ್ತಷ್ಟು ಬಲಗೊಳಿಸಲು ಪ್ರಧಾನಿ @narendramodi ಅವರು ಅಧಿಕೃತ ಭೇಟಿಗಾಗಿ ಅರ್ಜೆಂಟೀನಾದ ರೋಮಾಂಚಕ ನಗರವಾದ ಬ್ಯೂನಸ್ ಐರಿಸ್‌ಗೆ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅವರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಗಿದೆ. 57 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ಅರ್ಜೆಂಟೀನಾಕ್ಕೆ ನೀಡುತ್ತಿರುವುದು ಇದೇ ಮೊದಲು. ಭಾರತ – ಅರ್ಜೆಂಟೀನಾ ಸಂಬಂಧಗಳಲ್ಲಿ ಇದು ಹೊಸ ಅಧ್ಯಾಯ ಬರೆಯಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಅಧ್ಯಕ್ಷ ಜೇವಿಯರ್ ಮಿಲಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜುಲೈ 4 ಮತ್ತು 5 ರಂದು ಅರ್ಜೆಂಟೀನಾದಲ್ಲಿ ಇರುತ್ತಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಯೋಗ, ಆಯುರ್ವೇದ ಮತ್ತು ಭಾರತೀಯ ತತ್ವಶಾಸ್ತ್ರವು ಸಾಕಷ್ಟು ಜನಪ್ರಿಯವಾಗಿರುವುದರಿಂದ ಎರಡೂ ರಾಷ್ಟ್ರಗಳ ನಡುವಿನ ಜನರ – ಜನರ ಸಂಪರ್ಕವು ಸಹ ಪ್ರಬಲವಾಗಿದೆ. ಪ್ರಧಾನಮಂತ್ರಿ ಮೋದಿ ಅವರು ಅರ್ಜೆಂಟೀನಾದ ಗೌರವಾನ್ವಿತ ಸ್ವಾತಂತ್ರ್ಯ ಹೋರಾಟಗಾರ ಮತ್ತು ರಾಷ್ಟ್ರೀಯ ನಾಯಕ ಜನರಲ್ ಜೋಸ್ ಡಿ ಸ್ಯಾನ್ ಮಾರ್ಟಿನ್ ಅವರ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ.
https://x.com/narendramodi/status/1941311740278604217
Discover more from Coastal Times Kannada
Subscribe to get the latest posts sent to your email.
Discussion about this post