ಬೆಂಗಳೂರು: ಕಾಂಗ್ರೆಸ್ ನ ಚಾಮರಾಜಪೇಟೆ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಜಮೀರ್ ಅಹಮದ್ ಖಾನ್ ಇತ್ತೀಚೆಗೆ ಖರೀದಿಸಿದ ಆಸ್ತಿಯ ಮೌಲ್ಯದ ತಪ್ಪು ಲೆಕ್ಕ ನೀಡಿದ್ದಾರೆ ಎನ್ನಲಾಗಿದೆ. ಕೋಟ್ಯಾಂತರ ರೂ. ಹಣ ಖರ್ಚು ಮಾಡಿ ಪುತ್ರಿಯ ವಿವಾಹ ನಡೆಸಿದ್ದರು. ಜಮೀರ್ ಅಹಮದ್ ಖಾನ್ ಆದಾಯಕ್ಕಿಂತ ಹೆಚ್ಚಿನ ಹೊಂದಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಜಮೀರ್ ನಿವಾಸ, ಕಚೇರಿ, ಫ್ಲ್ಯಾಟ್ನಲ್ಲಿ ಭಾರಿ ದೊಡ್ಡ ತಂಡದ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಮನೆ, ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಮತ್ತಷ್ಟು ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
Discussion about this post