ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಪ್ರತಿ ಕುಟುಂಬಕ್ಕೆ 200 ಯುನಿಟ್ ವಿದ್ಯುತ್‌ನ್ನು ಉಚಿತವಾಗಿ ನೀಡುವ ಗೃಹಜ್ಯೋತಿ ಸ್ಕೀಮ್‌ಗೆ ಶನಿವಾರ (ಆಗಸ್ಟ್ 4) ಕಲಬುರಗಿಯಲ್ಲಿ ಚಾಲನೆ ನೀಡಲಾಗಿದೆ. ಆಗಸ್ಟ್ ತಿಂಗಳ ಬಿಲ್‌ನಲ್ಲಿ ಉಚಿತ ವಿದ್ಯುತ್ ಎಂದು ನಮೂದಿಸಲ್ಪಟ್ಟ 1.42 ಕೋಟಿ ಫಲಾನುಭವಿಗಳ ಪೈಕಿ 10 ಮಂದಿಗೆ ಝೀರೋ ಬಿಲ್ ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.
ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ‘ಗೃಹ ಜ್ಯೋತಿ’ ಯೋಜನೆ ಉದ್ಘಾಟನೆಗಾಗಿ ವೇದಿಕೆಯ ಮೇಲೆ ನಿರ್ಮಿಸಲಾದ ಮಾದರಿ ಮನೆಯ ವಿದ್ಯುತ್ ದೀಪ ಬೆಳಗಿಸುವ ಮೂಲಕ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಇಂಧನ ಸಚಿವ ಕೆ.ಜೆ. ಜಾರ್ಜ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂ ಖಾನ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಸೇರಿ ಹಲವರು ಸಾಥ್ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಚಿವ ಕೆ.ಜೆ.ಜಾರ್ಜ್ ಅವರು, ಗೃಹಜೋತಿ ಯೋಜನೆ ನೋಂದಣಿಗೆ ಅಂತಿಮ ದಿನಾಂಕ ಇಲ್ಲ ಎಂದು ಹೇಳಿದರು.
1.42 ಕೋಟಿ ಫಲಾನುಭವಿಗಳಿಗೆ ಈ ತಿಂಗಳು ಫ್ರೀ ಬಿಲ್ : ತಿಂಗಳಿಗೆ 200 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಮಹತ್ವದ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 2.14 ಕೋಟಿ ಫಲಾನುಭವಿಗಳಿದ್ದಾರೆ. ಈ ಪೈಕಿ 1.42 ಕೋಟಿ ಫಲಾನುಭವಿಗಳು ಜುಲೈ 25ರೊಳಗೆ ನೋಂದಣಿ ಮಾಡಿಕೊಂಡಿದ್ದು, ಅವರಿಗೆ ಜುಲೈ ತಿಂಗಳ ಬಿಲ್ ಝೀರೋ ಬರಲಿದೆ. ಅಂದರೆ ಈ ಬಾರಿ 1.42 ಕೋಟಿ ಜನರಿಗೆ ಫ್ರೀ ಕರೆಂಟ್ ಸಿಕ್ಕಿದಂತಾಗಲಿದೆ.
Discover more from Coastal Times Kannada
Subscribe to get the latest posts sent to your email.
Discussion about this post