ಮಂಗಳೂರು,ಆ.5: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮದ ಪ್ರಯುಕ್ತ ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ ಅವರ ಚಿತ್ರ ಪ್ರಥಮ ಸ್ಥಾನ ಪಡೆದಿದೆ. ಮೈಸೂರಿನ ಕನ್ನಡಪ್ರಭ ಪತ್ರಿಕೆಯ ಛಾಯಾಗ್ರಾಹಕ ಎಂ.ಎಸ್. ಬಸವಣ್ಣ ದ್ವಿತೀಯ, ಮೈಸೂರಿನ ದಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಪ್ರಿನ್ಸಿಪಾಲ್ ಫೋಟೋಗ್ರಾಪರ್ ಉದಯಶಂಕರ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಪ್ರಜಾವಾಣಿಯ ಹಿರಿಯ ಛಾಯಾಗ್ರಾಹಕ ಎಂ.ಎಸ್. ಮಂಜುನಾಥ್ ಮತ್ತು ಇಂದ್ರಕುಮಾರ್ ದಸ್ತೇನವರ ಚಿತ್ರ ತೀರ್ಪುಗಾರರ ಮೆಚ್ಚುಗೆಯ ಬಹುಮಾನಕ್ಕೆ ಪಾತ್ರವಾಗಿದೆ. ಖ್ಯಾತ ಛಾಯಾಗ್ರಾಹಕರಾದ ಯಜ್ಞ ಮಂಗಳೂರು ಹಾಗೂ ದಿನೇಶ್ ಕಾಸರಗೋಡು ಅವರು ತೀರ್ಪುಗಾರರಾಗಿ ಸಹಕರಿಸಿದ್ದರು. ಆ.6ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಥಮ ಬಹುಮಾನ 10 ಸಾವಿರ ರೂ. ಮತ್ತು ನಗದು ಫಲಕ, ದ್ವಿತೀಯ ಬಹುಮಾನ 5 ಸಾವಿರ ರೂ. ನಗದು ಮತ್ತು ಫಲಕ ಹಾಗೂ ತೃತೀಯ ಬಹುಮಾನ 3 ಸಾವಿರ ರೂ. ನಗದು ಮತ್ತು ಫಲಕ ನೀಡಲಾಗುವುದು ಛಾಯಾಚಿತ್ರ ಸ್ಪರ್ಧಾ ವಿಭಾಗದ ಸಂಚಾಲಕ ಸತೀಶ್ ಇರಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post