ಮಂಗಳೂರು, ಆಗಸ್ಟ್ 4: ಬೆಳ್ತಂಗಡಿ ತಾಲೂಕು ಕಚೇರಿ ಎದುರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಎಸ್ಡಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ನ್ಯಾಯಾಲಯ ಆರು ತಿಂಗಳ ಶಿಕ್ಷೆ ವಿಧಿಸಿದೆ.
ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮಲಿಂಗಪ್ಪ ಅವರು ಕಲಂ 153(A) ಅಡಿಯಲ್ಲಿ ಆರೋಪಿ ವಿರುದ್ಧ 6 ತಿಂಗಳ ಸಾದಾ ಕಾರಾಗೃಹ ವಾಸ ಮತ್ತು 10,000 ದಂಡ ವಿಧಿಸಿ ಅದೇಶಿಸಿದ್ದಾರೆ.
ಜುಲೈ 23, 2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ, ಪಿಎಫ್‌ಐ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆ ರಿಯಾಜ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಪ್ರಕರಣದ ತನಿಖಾಧಿ ಕಾರಿ ರವಿ ಬಿ.ಎಸ್ ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೊಷಾರೊಪಣಾ ಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು ಆರೋಪಿಗೆ ಕಲಂ : 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಾಗೃಹ ವಾಸ ಮತ್ತು 10,000 ದಂಡ ವಿಧಿಸಿ ಅದೇಶ ನೀಡಿದೆ. ಸರಕಾರಿ ಅಭಿಯೋಜಕರಾದ ಆಶೀತ ಅವರು ವಾದಮಂಡನೆ ನಡೆಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post