• About us
  • Contact us
  • Disclaimer
Saturday, September 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗೋಲ್ಡನ್ ಮೂವಿಸ್​ನಿಂದ ನಿರ್ಮಾಣವಾಗಿರುವ ‘ಪಿಚ್ಚರ್’ ಇದೇ ಆಗಸ್ಟ್ 7ರಂದು ರಾಜ್ಯಾದ್ಯಂತ ತೆರೆಗೆ

Coastal Times by Coastal Times
August 5, 2026
in ಸಿನಿಮಾ
ಗೋಲ್ಡನ್ ಮೂವಿಸ್​ನಿಂದ ನಿರ್ಮಾಣವಾಗಿರುವ ‘ಪಿಚ್ಚರ್’ ಇದೇ ಆಗಸ್ಟ್ 7ರಂದು ರಾಜ್ಯಾದ್ಯಂತ ತೆರೆಗೆ
41
VIEWS
WhatsappTelegramShare on FacebookShare on Twitter

ಮಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಗೋಲ್ಡನ್ ಸ್ಟಾರ್’ ಗಣೇಶ್ ಹಾಗೂ ಪತ್ನಿ ಶಿಲ್ಪಾ ಗಣೇಶ್ ಅವರ ಚಲನಚಿತ್ರ ನಿರ್ಮಾಣ ಸಂಸ್ಥೆ ಗೋಲ್ಡನ್ ಮೂವಿಸ್​ನಿಂದ ನಿರ್ಮಾಣವಾಗಿರುವ ‘ಪಿಚ್ಚರ್’ ಇದೇ ಆಗಸ್ಟ್ 7ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ಕನ್ನಡ ಮತ್ತು ತುಳು ಭಾಷೆಗಳಲ್ಲಿ ಚಿತ್ರ ಪ್ರೇಕ್ಷಕರಿಗೆ ದರ್ಶನ ಕೊಡಲಿದೆ.

ತುಳು ಚಿತ್ರರಂಗದಲ್ಲಿ ಈಗಾಗಲೇ ನೂರಾರು ಸಿನಿಮಾಗಳು ಬಂದಿದ್ದರೂ, ಕನ್ನಡದ ಪ್ರಮುಖ ದೊಡ್ಡ ಬ್ಯಾನರ್ ಹಾಗೂ ಖ್ಯಾತ ತಾರೆಯರ ನೇತೃತ್ವದಲ್ಲಿ ತುಳು ಇಂಡಸ್ಟ್ರಿಗೆ ಇಂತಹ ದೊಡ್ಡ ಮಟ್ಟದ ಹೆಜ್ಜೆ ಇಡುತ್ತಿರುವುದು ಇದೇ ಮೊದಲು. ಇದು ತುಳು ಸಿನಿಮಾ ರಂಗದ ಮಾರುಕಟ್ಟೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಒಂದು ಐತಿಹಾಸಿಕ ಹೆಜ್ಜೆಯಾಗಿದೆ.

ಮೂಲತಃ ಉಡುಪಿ ಜಿಲ್ಲೆಯವರಾದ ಶಿಲ್ಪಾ ಗಣೇಶ್ ಅವರಿಗೆ ತಮ್ಮ ಮಾತೃಭಾಷೆಯಾದ ತುಳುವಿನಲ್ಲಿ ಒಂದು ಅದ್ಭುತ ಸಿನಿಮಾವನ್ನು ನಿರ್ಮಿಸಬೇಕು ಎಂಬುದು ಬಹುಕಾಲದ ಕನಸಾಗಿತ್ತು. ಗೋಲ್ಡನ್ ಮೂವಿಸ್ ಬ್ಯಾನರ್ ಅಡಿಯಲ್ಲಿ ಈಗಾಗಲೇ ಹಲವು ಯಶಸ್ವಿ ಕನ್ನಡ ಸಿನಿಮಾಗಳನ್ನು ನಿರ್ಮಿಸಿರುವ ಅವರು, ಪತಿ ಗಣೇಶ್ ಅವರ ಬೆಂಬಲದೊಂದಿಗೆ ಈಗ ತುಳು ರಂಗದಲ್ಲೂ ಹೆಜ್ಜೆ ಇಟ್ಟಿದ್ದಾರೆ. ಬಿಡುಗಡೆ ಹೊಸ್ತಿಲಿನಲ್ಲಿರುವ ಚಿತ್ರದ ಕುರಿತು ಮಾತನಾಡಿರುವ ನಿರ್ಮಾಪಕಿ ಶಿಲ್ಪಾ ಗಣೇಶ್, “ತುಳು ಸಿನಿಮಾಗಳಿಗೆ ಇದುವರೆಗೆ ಇಷ್ಟು ದೊಡ್ಡ ಮಟ್ಟದ ಬಜೆಟ್ ಹಾಗೂ ಮಾರುಕಟ್ಟೆ ಸಿಕ್ಕಿರಲಿಲ್ಲ. ನಾವು ಇದೇ ಮೊದಲ ಬಾರಿಗೆ ಆ ಮಾರ್ಕೆಟ್ ಅನ್ನು ಓಪನ್ ಮಾಡಿದ್ದೇವೆ. ಇದು ತುಳು ಸಿನಿಮಾಗಳ ಮಾರುಕಟ್ಟೆಯನ್ನು ದೊಡ್ಡ ಮಟ್ಟಕ್ಕೆ ಬೆಳೆಸಲಿದೆ ಎಂಬ ವಿಶ್ವಾಸವಿದೆ” ಎಂಬ ಭರವಸೆ ಹೊಂದಿದ್ದಾರೆ.

‘ಗೋಲ್ಡನ್ ಸ್ಟಾರ್’ ಗಣೇಶ್ ಮಾತನಾಡಿ, “ತುಳು ಸಿನಿಮಾ ಮಾಡಬೇಕೆಂದು ಶಿಲ್ಪಾ ಹೇಳಿಕೊಂಡಾಗ ಖುಷಿಯಾಗಿ ಪ್ರೋತ್ಸಾಹಿಸಿದೆ. ಸಿನಿಮಾದಲ್ಲಿ ಎಲ್ಲರೂ ಅದ್ಬುತವಾಗಿ ನಟಿಸಿದ್ದಾರೆ. ಸಿನಿಮಾದ ಬಗ್ಗೆ‌ ಅಭಿಪ್ರಾಯಗಳು ಉತ್ತಮವಾಗಿ ಮೂಡಿಬಂದಿದೆ. ಗೋಲ್ಡನ್ ಮೂವಿಸ್ ನಿಂದ ಬರುವ ಸಿನಿಮಾವಾಗಿರುವುದರಿಂದ ಹಾಸ್ಯದ ಜೊತೆಗೆ ಭಾವನಾತ್ಮಕ ಟಚ್ ಇದೆ” ಎಂದು ಹೇಳಿದ್ದಾರೆ.

ಈ ಸಿನಿಮಾದಲ್ಲಿ ತುಳು ರಂಗಭೂಮಿ ಹಾಗೂ ಚಿತ್ರರಂಗದ ಹೆಸರಾಂತ ದಿಗ್ಗಜರು, ಹಿರಿಯ ಕಲಾವಿದರು ಹಾಗೂ ಪ್ರತಿಭಾವಂತರು ನಟಿಸಿದ್ದಾರೆ. ನಾಯಕ ನಟನಾಗಿ ನಿತ್ಯ ಪ್ರಕಾಶ್ ಬಂಟ್ವಾಳ್ ನಟಿಸಿದ್ದು, ನಾಯಕಿಯಾಗಿ ಅಮೃತಾ ಅಭಿನಯಿಸಿದ್ದಾರೆ. ಕಥೆ ಮತ್ತು ಚಿತ್ರಕಥೆಯನ್ನು ಸಂದೀಪ್ ಅಚ್ಚುಕಟ್ಟಾಗಿ ನಿರ್ವಹಿಸಿದ್ದು, ಚಿತ್ರಕ್ಕೆ ಹಾಸ್ಯ, ಭಾವನೆ ಹಾಗೂ ಎಮೋಷನಲ್ ಸೀನ್‌ಗಳ ಉತ್ತಮ ಮಿಶ್ರಣವಿದೆ.

ತುಳು ಸಿನಿಮಾಗೆ ದೈತ್ಯ ಮ್ಯೂಸಿಕ್ ಲೇಬಲ್ ಆದ ‘ಆನಂದ್ ಆಡಿಯೋ’ ಸಾಥ್ ನೀಡಿದ್ದು, ಚಿತ್ರದ ಹಾಡುಗಳು ಈಗಾಗಲೇ ದೊಡ್ಡ ಮಟ್ಟದಲ್ಲಿ ರೀಚ್ ಆಗಲು ಪ್ರಮುಖ ಕಾರಣವಾಗಿದೆ. ಆನಂದ್ ಆಡಿಯೋ ಸಂಸ್ಥೆ ಹಾಗೂ ಇಡೀ ತಾಂತ್ರಿಕ ಬಳಗದ ಬೆಂಬಲ ಚಿತ್ರದ ಯಶಸ್ಸಿಗೆ ಪ್ರಮುಖ ಬಲವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಣಿಪಾಲ ಬಾರ್ ಬಳಿ ಹಲ್ಲೆ ಪ್ರಕರಣ: ನಾಲ್ವರು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಬಂಧನ

Next Post

ಬೆಳ್ತಂಗಡಿ ಪಿಎಫ್ಐ ಪ್ರತಿಭಟನೆಯಲ್ಲಿ ಧಾರ್ಮಿಕ ಪ್ರಚೋದನಕಾರಿ ಭಾಷಣ ; ಎಸ್ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆಗೆ ಜೈಲುಶಿಕ್ಷೆ, ದಂಡ ವಿಧಿಸಿದ ಕೋರ್ಟ್

Related Posts

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
49
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
14
Next Post
ಬೆಳ್ತಂಗಡಿ ಪಿಎಫ್ಐ ಪ್ರತಿಭಟನೆಯಲ್ಲಿ ಧಾರ್ಮಿಕ ಪ್ರಚೋದನಕಾರಿ ಭಾಷಣ ; ಎಸ್ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆಗೆ ಜೈಲುಶಿಕ್ಷೆ, ದಂಡ ವಿಧಿಸಿದ ಕೋರ್ಟ್

ಬೆಳ್ತಂಗಡಿ ಪಿಎಫ್ಐ ಪ್ರತಿಭಟನೆಯಲ್ಲಿ ಧಾರ್ಮಿಕ ಪ್ರಚೋದನಕಾರಿ ಭಾಷಣ ; ಎಸ್ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆಗೆ ಜೈಲುಶಿಕ್ಷೆ, ದಂಡ ವಿಧಿಸಿದ ಕೋರ್ಟ್

Discussion about this post

Recent News

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
58
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d