ಬೆಂಗಳೂರು: ಹಲವು ಒತ್ತಡಗಳ ನಡುವೆಯೇ ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.
ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ.
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಅವರು, ʼಗರಿಷ್ಠ ಐದು ದಿನಗಳವರೆಗೆ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ವಾರ್ಡ್‌ಗೆ ಒಂದು ಹಾಗೂ ಹಳ್ಳಿಗಳಲ್ಲಿ ಸ್ಥಳೀಯ ಆಡಳಿತದ ತೀರ್ಮಾನದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅನುಮತಿ ನೀಡಲಾಗುವುದು ಎಂದು ಹೇಳಿದರು.
Discover more from Coastal Times Kannada
Subscribe to get the latest posts sent to your email.
Discussion about this post