• About us
  • Contact us
  • Disclaimer
Saturday, September 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

Coastal Times by Coastal Times
September 5, 2026
in ರಾಷ್ಟ್ರೀಯ ಸುದ್ದಿ
ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ
16
VIEWS
WhatsappTelegramShare on FacebookShare on Twitter

ತಿರುವನಂತಪುರಂ:ನಿಲ್ಲಿಸಿದ್ದ ಗೂಡ್ಸ್ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೇರಳದ ತ್ರಿಶ್ಯೂರು ಜಿಲ್ಲೆಯಲ್ಲಿ ನಡೆದಿದೆ.

ತಮಿಳುನಾಡಿನಿಂದ ಕೇರಳ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ತಂಡವು ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ತೆರಳಿ ದರ್ಶನ ಮುಗಿಸಿತ್ತು. ಬಳಿಕ ಕೊಡುಂಗಲ್ಲೂರು ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಧ್ಯರಾತ್ರಿ ದುರಂತ ಸಂಭವಿಸಿದೆ. ರಾತ್ರಿ ಸುಮಾರು 11.40ರ ವೇಳೆಗೆ ಪಣಂಬಿಕ್ಕುನ್ನು ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಅತಿವೇಗದಲ್ಲಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಮೃತರ ಪೈಕಿ ಐವರನ್ನು ತಮಿಳುನಾಡಿನ ಸೇಲಂ ಮೂಲದ ವಿಶ್ವ (20), ದಿಂಡಿಗಲ್ ಮೂಲದ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈ ಮೂಲದ ಸಂತೋಷ್ (20) ಮತ್ತು ಪ್ರಸನ್ನ ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪಿ.ಎಸ್.ಎಂ. ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೈಪಮಂಗಲಂ ಸಮೀಪದ ಪನಂಬಿಕ್ಕುನ್ನು ಸೆಂಟರ್‌ನ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಸುಮಾರಿಗೆ ಬಂದ ತಮಿಳುನಾಡು ನೋಂದಣಿಯ ಕಾರು (TN 59 DW 8299) ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದರು. ರಕ್ಷಣಾ ಸಿಬ್ಬಂದಿ ಕಾರಿನ ಬಿಡಿಭಾಗಗಳನ್ನು ಕತ್ತರಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರಿನಲ್ಲಿದ್ದ ಎಂಟೂ ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಕೈಪಮಂಗಲಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

Related Posts

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ
ರಾಜಕೀಯ

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ

August 18, 2026
35
ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ
ರಾಷ್ಟ್ರೀಯ ಸುದ್ದಿ

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

August 4, 2026
42

Discussion about this post

Recent News

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
16
ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

September 5, 2026
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

September 5, 2026
ಮಂಗಳೂರು: ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಖಾಸಗಿ ಬಸ್ ಪಲ್ಟಿ ; ಅಪಾಯದಿಂದ ಪಾರಾದ ಪ್ರಯಾಣಿಕರು

ಮಂಗಳೂರು: ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಖಾಸಗಿ ಬಸ್ ಪಲ್ಟಿ ; ಅಪಾಯದಿಂದ ಪಾರಾದ ಪ್ರಯಾಣಿಕರು

September 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d