• About us
  • Contact us
  • Disclaimer
Friday, November 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ: ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಇಬ್ಬರು ಅಪ್ರಾಪ್ತೆಯರೊಂದಿಗೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್..!

Coastal Times by Coastal Times
November 5, 2023
in ಕ್ರೈಮ್ ನ್ಯೂಸ್
ಬಂಟ್ವಾಳ: ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಇಬ್ಬರು ಅಪ್ರಾಪ್ತೆಯರೊಂದಿಗೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್..!
191
VIEWS
WhatsappTelegramShare on FacebookShare on Twitter

ಬಂಟ್ವಾಳ: ಇನ್‌ಸ್ಟಾಗ್ರಾಂನಲ್ಲಿ ನಕಲಿ ಐಡಿ ಸೃಷ್ಟಿಸಿ ಅಪ್ರಾಪ್ತ ಬಾಲಕಿಯರಿಬ್ಬರೊಂದಿಗೆ ಮೋಸದಾಟ ನಡೆಸಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿ ಒಬ್ಬಾಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಕಾಸರಗೋಡು ಮೂಲದ ಕಾಮುಕ ಯುವಕನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಠಾಣೆ ವ್ಯಾಪ್ತಿಯಲ್ಲಿ ಪರಸ್ಪರ ಸಂಬಂಧಿಕರಾಗಿರುವ 16 ಹಾಗೂ 17ರ ಹರೆಯದ ಇಬ್ಬರು ಮುಸ್ಲಿಂ ಯುವತಿಯರಿಗೆ ಹುಡುಗಿಯ ಹೆಸರಲ್ಲೇ ಇನ್ ಸ್ಟಾಗ್ರಾಂನಲ್ಲಿ ಈತ ಸಂಪರ್ಕಕ್ಕೆ ಬಂದಿದ್ದ. ಬಳಿಕ ತನ್ನ ಹೆಸರನ್ನು ಅಡ್ಡೂರಿನ ತೌಫಿಲ್ ಎಂದು ಪರಿಚಯ ಮಾಡಿಕೊಂಡಿದ್ದ. ಆದರೆ ಈತನ ನಿಜವಾದ ಹೆಸರು ಅಹಮದ್ ರಫೀಕ್ (23). ಕಾಸರಗೋಡು ಮೂಲದ ಆತ ಕೇರಳದ ಉದ್ಯಮಿಯೊಬ್ಬರ ಪುತ್ರ ಎಂದು ಮೂಲಗಳು ತಿಳಿಸಿವೆ. 16 ವರ್ಷದ ಯುವತಿಯೊಂದಿಗೆ ಆತ್ಮೀಯತೆ ಬೆಳೆಸಿ ರಾತ್ರಿ ವೇಳೆ ಮನೆಗೆ ಬಂದು ದೈಹಿಕ ಸಂಪರ್ಕ ಬೆಳೆಸಿದ್ದ. ಇದೇ ವೇಳೆ, ಅದೇ ಪರಿಸರದ ಮತ್ತೊಬ್ಬ 17ರ ಯುವತಿಯೊಂದಿಗೂ ಈತ ತಾನು ಕಾಸರಗೋಡಿನ ರಫೀಕ್ ಎಂದು ಪರಿಚಯ ಮಾಡಿಕೊಂಡಿದ್ದ. ಕಳೆದ ಐದಾರು ತಿಂಗಳಲ್ಲಿ ಇಬ್ಬರು ಅಪ್ರಾಪ್ತೆಯರೊಂದಿಗೂ ಈತ ಕಾಮದಾಟ ನಡೆಸಿದ್ದ. ಪರಿಣಾಮ ಒಬ್ಬಾಕೆ ಗರ್ಭಿಣಿಯಾಗಿದ್ದಾಳೆ. ಇದು ಆಕೆಯ ಮನೆಯವರಿಗೆ ತಿಳಿದು ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು. ಇಬ್ಬರು ಯುವತಿಯರೂ ಸಾಮಾನ್ಯ ಬಡ ಕುಟುಂಬದವರಾಗಿದ್ದರು. ಆದರೆ ಆರೋಪಿ ಇಲ್ಲಿಯವರೆಗೂ ತನ್ನ ನಿಜ ಹೆಸರು, ಮೊಬೈಲ್ ಸಂಖ್ಯೆಯನ್ನು ಯುವತಿಯರಿಗೆ ನೀಡಿರಲಿಲ್ಲ. ಇನ್ ಸ್ಟಾಗ್ರಾಂನಲ್ಲಿಯೇ ಮೆಸೇಜ್, ಕರೆ ಮಾಡುತ್ತಿದ್ದ. ಆದ್ದರಿಂದ ಕಾಮುಕನ ಪತ್ತೆ ಪೊಲೀಸರಿಗೆ ಕಷ್ಟವಾಗಿತ್ತು. ಬಳಿಕ ಪೊಲೀಸರ ಸೂಚನೆಯಂತೆ, ಒಬ್ಬಾಕೆಯ ಮನೆಯವರ ಮೂಲಕವೇ ಟ್ರಾಪ್ ಮಾಡಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲವೆಂದು ಹೇಳಿ, ಬರಲು ತಿಳಿಸಿದ್ದು ಅದರಂತೆ ರಾತ್ರಿ ವೇಳೆ ಮನೆಗೆ ಬಂದಿದ್ದ ಯುವಕನನ್ನು ಪೊಲೀಸರೇ ಸೇರಿ ಅರೆಸ್ಟ್ ಮಾಡಿದ್ದಾರೆ. ಇದೀಗ ಪ್ರತ್ಯೇಕ ಪೊಕ್ಸೊ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಪ್ರಾಪ್ತ ಓರ್ವ ಯುವತಿ ಗರ್ಭಿಣಿಯೆಂಬ ಮಾಹಿತಿ ಕೇಳಿ ಬರುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಪ್ರಕರಣದ ತನಿಖೆ ನಡೆಸಬೇಕಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Next Post

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ 1 ಕೋಟಿ ರೂ ಘೋಷಣೆ, ಬರಲಿದ್ದಾರೆ ಲಕ್ಷ ಲಕ್ಷ ಜನ!

Related Posts

ಮಂಗಳೂರು; ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ ; ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಶಾಲಾ ಬಾಲಕ ಮೃತ್ಯು
ಕ್ರೈಮ್ ನ್ಯೂಸ್

ಮಂಗಳೂರು; ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ ; ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಶಾಲಾ ಬಾಲಕ ಮೃತ್ಯು

November 26, 2026
71
ಕಾವೂರು: ಕೆಲಸ ಮಾಡಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆ ಮಾಲೀಕನನ್ನು ಕೊಂದವನಿಗೆ ಜೀವಾವಧಿ ಶಿಕ್ಷೆ
ಕ್ರೈಮ್ ನ್ಯೂಸ್

ಕಾವೂರು: ಕೆಲಸ ಮಾಡಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆ ಮಾಲೀಕನನ್ನು ಕೊಂದವನಿಗೆ ಜೀವಾವಧಿ ಶಿಕ್ಷೆ

November 22, 2026
60
Next Post
ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ 1 ಕೋಟಿ ರೂ ಘೋಷಣೆ, ಬರಲಿದ್ದಾರೆ ಲಕ್ಷ ಲಕ್ಷ ಜನ!

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ 1 ಕೋಟಿ ರೂ ಘೋಷಣೆ, ಬರಲಿದ್ದಾರೆ ಲಕ್ಷ ಲಕ್ಷ ಜನ!

Discussion about this post

Recent News

ಮಂಗಳೂರು; ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ ; ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಶಾಲಾ ಬಾಲಕ ಮೃತ್ಯು

ಮಂಗಳೂರು; ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ ; ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಶಾಲಾ ಬಾಲಕ ಮೃತ್ಯು

November 26, 2026
71
2026ರ ‘ಮಿಸ್ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ 7 ವರ್ಷದ ಮಗುವಿನ ತಾಯಿ

2026ರ ‘ಮಿಸ್ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ 7 ವರ್ಷದ ಮಗುವಿನ ತಾಯಿ

November 26, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು; ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ ; ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಶಾಲಾ ಬಾಲಕ ಮೃತ್ಯು

ಮಂಗಳೂರು; ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ ; ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಶಾಲಾ ಬಾಲಕ ಮೃತ್ಯು

November 26, 2026
2026ರ ‘ಮಿಸ್ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ 7 ವರ್ಷದ ಮಗುವಿನ ತಾಯಿ

2026ರ ‘ಮಿಸ್ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ 7 ವರ್ಷದ ಮಗುವಿನ ತಾಯಿ

November 26, 2026
15ರ ಹರೆಯದಲ್ಲೇ ವಿಶ್ವ ದಾಖಲೆ; ವೈಭವ್ ಬ್ಯಾಟ್‌ಗೆ ಬಲಿಯಾದ ಘಟಾನುಘಟಿ ದಾಖಲೆಗಳು..!

15ರ ಹರೆಯದಲ್ಲೇ ವಿಶ್ವ ದಾಖಲೆ; ವೈಭವ್ ಬ್ಯಾಟ್‌ಗೆ ಬಲಿಯಾದ ಘಟಾನುಘಟಿ ದಾಖಲೆಗಳು..!

November 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d